Friday, 19th July 2024

ಬಿಜೆಪಿ ಅಭ್ಯರ್ಥಿ ಸಿಸಿ ಪಾಟೀಲ್ ಮುನ್ನಡೆ

ದಗ: ನರಗುಂದ ವಿಧಾನಸಭಾ ಕ್ಷೇತ್ರ ದಲ್ಲಿ ಅಂಚೆ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಸಿಸಿ ಪಾಟೀಲ್ ಮುನ್ನಡೆ ಪಡೆದುಕೊಂಡಿದ್ದಾರೆ.

ನರಗುಂದ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಬಸವರೆಡ್ಡಿ ಯಾವಗಲ್​ ಮತ್ತೆ ಟಿಕೆಟ್​ ಪಡೆದುಕೊಂಡಿದ್ದಾರೆ.

2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಚಂದ್ರಕಾಂತಗೌಡ ಪಾಟೀಲ ಕಾಂಗ್ರೆಸ್ ಅಭ್ಯರ್ಥಿ ಬಸವರೆಡ್ಡಿ ಯಾವಗಲ್​ ವಿರುದ್ಧ 7 ಸಾವಿರ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದರು. ಈ ಬಾರಿ ಕೂಡ ಕಾಂಗ್ರೆಸ್ ಬಿಜೆಪಿ ನಡುವೆ ನೇರ ಹಣಾಹಣಿ ನಡೆಯುತ್ತಿದೆ. ಕಳೆದ ಮೂರು ಚುನಾವಣೆಗಳಲ್ಲಿ ಎರಡು ಸಲ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಿದ್ದು ನಾಲ್ಕನೇ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ.

ಜೆಡಿಎಸ್​ ಈ ಬಾರಿ ಹೊಸ ಮುಖಕ್ಕೆ ಮಣೆ ಹಾಕಿದ್ದು, ಗಿರಿಮಲ್ಲನಗೌಡ ಈಶ್ವರಗೌಡ ಪಾಟೀಲ ಬದಲಿಗೆ ರುದ್ರಗೌಡ ನಿಂಗನಗೌಡ ಪಾಟೀಲರನ್ನು ಕಣಕ್ಕಿಳಿಸಿದೆ. ನರಗುಂದ ಕ್ಷೇತ್ರದಲ್ಲಿ ಲಿಂಗಾಯತ ಮತಗಳ ಪ್ರಾಬಲ್ಯ ಹೆಚ್ಚಿದೆ. ಸುಮಾರು, 80 ಸಾವಿರ ಲಿಂಗಾಯತ, 27 ಸಾವಿರ ಕುರುಬ, ​25 ಸಾವಿರ ಮುಸ್ಲಿಮ್, 10 ಸಾವಿರ ಎಸ್‌ಟಿ, 5 ಸಾವಿರ ಬ್ರಾಹ್ಮಣ ಮತದಾರರಿದ್ದಾರೆ.

error: Content is protected !!