Tuesday, 25th June 2024

ಮೈಸೂರು ವಿವಿಗೆ 100ನೇ ಘಟಿಕೋತ್ಸವದ ಸಂಭ್ರಮದಲ್ಲಿ ಮೋದಿ ಮಾತು

ಮೈಸೂರು: ಮೈಸೂರು ವಿಶ್ವವಿದ್ಯಾಲಯದಲ್ಲಿ ಸೋಮವಾರ 100ನೇ ವಾರ್ಷಿಕ ಘಟಿಕೋತ್ಸವದ ಸಂಭ್ರಮವು ರಾಷ್ಟ್ರಗೀತೆ ಯೊಂದಿಗೆ ಕಾರ್ಯಕ್ರಮ ಶುರುವಾಗಿದೆ.

ವಿಶ್ವವಿದ್ಯಾಲಯದ 100ನೇ ಘಟಿಕೋತ್ಸವದಲ್ಲಿ ಇನ್ಫೋಷಿಸ್ ಫೌಂಡೇಷನ್’ನ ಸುಧಾ ಮೂರ್ತಿ ಅವರ ಅನುಪಸ್ಥಿತಿಯಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ವಿವಿಯ ಕ್ರಾಫರ್ಡ್ ಹಾಲ್ ನಲ್ಲಿ ಆಯೋಜಿಸಿದ್ದ 100ನೇ ಘಟಿಕೋತ್ಸವದಲ್ಲಿ ಅವರ ಅನುಪಸ್ಥಿತಿಯಲ್ಲಿ ಗೌರವ ಡಾಕ್ಟರೇಟ್ ಮೈಸೂರು ವಿವಿ ಕುಲಪತಿ ಪ್ರೊ.ಹೇಮಂತ್ ಕುಮಾರ್ ಪ್ರದಾನ ಮಾಡುತ್ತಿರುವು ದಾಗಿ ಹೇಳಿದ ಕುಲಪತಿಗಳು ಸಮಾಜ ಸೇವೆ, ಶಿಕ್ಷಣ, ಸಾಹಿತ್ಯ ಕ್ಷೇತ್ರಗಳಲ್ಲಿ ಸುಧಾಮೂರ್ತಿ ಅವರ ಸೇವೆಯನ್ನು ಸ್ಮರಿಸಿದರು.

ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಭಾಗವಹಿಸುತ್ತಿದ್ದು, ವಿಡಿಯೋ ಕಾನ್ಫರೆನ್ಸ್ ಮೂಲಕ ಘಟಿಕೋತ್ಸವ ಭಾಷಣ ಮಾಡುತ್ತಿದ್ದರು. ಕಾರ್ಯಕ್ರಮದಲ್ಲಿ ನೆರೆದ ಗಣ್ಯವ್ಯಕ್ತಿಗಳಿಗೆ ನಾಡಹಬ್ಬ ಹಾಗೂ ಘಟಿಕೋತ್ಸವದ ಶುಭಾಶಯ ತಿಳಿಸಿದರು.

ಮೈಸೂರು ವಿಶ್ವವಿದ್ಯಾಲಯ 100 ನೇ ಘಟಿಕೋತ್ಸವವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಎಲ್ಲರಿಗೂ ಮೈಸೂರು ದಸರಾ, ನಾಡಹಬ್ಬ ಹೃದಯಪೂರ್ವಕ ಶುಭಾಷಯಗಳು. ಕೆಲವೊಂದು ಛಾಯಚಿತ್ರಗಳನ್ನು ಗಮನಿಸುತ್ತಿದೆ. ಕೋವಿಡ್ 19 ಗೆ ಸಂಬಂಧಿಸಿದ ನಿರ್ಬಂಧಗಳಿರಬಹುದು. ಆದರೆ, ಸಂಭ್ರಮದ ಉತ್ಸಾಹಕ್ಕೆ ಕೊರತೆ ಇಲ್ಲ ಎಂದರು.

ಪದವಿ ಜೊತೆ ರಾಷ್ಟರ ನಿರ್ಮಾನಣದ ಜವಾಬ್ದಾರಿ ವಿದ್ಯಾರ್ಥಿಗಳ ಮೇಲಿದೆ. ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ದೂರ ದೃಷ್ಟಿಯನ್ನು ಕೊಂಡಾಡಿದರು. ಗೊರೊರು ರಾಮಸ್ವಾಮಿ ಅಯ್ಯಂಗಾರ್ ಅವರ ಶಿಕ್ಷಣವೇ ಬೆಳಕು ಉಕ್ತಿಯನ್ನು ಕನ್ನಡ ದಲ್ಲೇ ಉಲ್ಲೇಖಿಸಿ ಶಿಕ್ಷಣದ ಮಹತ್ವವನ್ನು ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಿದರು.

Leave a Reply

Your email address will not be published. Required fields are marked *

error: Content is protected !!