Sunday, 15th December 2024

ವರ್ಷಾಚರಣೆ ಗುಂಗು: ಮೈಸೂರಿನಲ್ಲಿ ಚಾಮುಂಡಿ ಪಡೆ ರಚನೆ

ಮೈಸೂರು: ಹೊಸ ವರ್ಷಾಚರಣೆಯ ನೆಪದಲ್ಲಿ ಡಿ.31ರ ರಾತ್ರಿ ಅಸಭ್ಯವಾಗಿ ವರ್ತಿಸುವುದು, ಕುಡಿದು ಹುಚ್ಚಾಟವಾಡುವುದು ಸೇರಿದಂತೆ ಕಾನೂನು ಉಲ್ಲಂಘನೆಯ ಚಟುವಟಿಕೆ ನಡೆಸುವವರನ್ನು ಹೆಡೆಮುರಿ ಕಟ್ಟಲು ಮೈಸೂರಿನಲ್ಲಿ ಚಾಮುಂಡಿ ಪಡೆ (ಸುರಕ್ಷತಾ ಪಿಂಕ್ ಗರುಡಾ) ತಯಾರಾಗಿದೆ.
ಹೊಸ ವರ್ಷಾಚರಣೆ ಸಲುವಾಗಿ ಜನ ಮನೆಯಿಂದ ಹೊರಬಂದು ತಮಗೆ ಇಷ್ಟವಾದ ಸ್ಥಳಗಳಲ್ಲಿ ಪಾರ್ಟಿಗಳನ್ನು ಮಾಡುವುದರಿಂದ ನಗರದಾದ್ಯಂತ ಜನ ಸಂದಣಿಯಿರುತ್ತದೆ. ಹೋಟೆಲ್, ರೆಸಾರ್ಟ್‌ಗಳಲ್ಲಿ ವರ್ಷಾಚರಣೆಯ ಕಾರ್ಯಕ್ರಮಗಳು ಜೋರಾಗಿಯೇ ನಡೆಯುತ್ತದೆ. ರಾತ್ರಿಯಿಡೀ ಕೆಲವರು ನಗರದಲ್ಲಿ ಅಡ್ಡಾಡುವ ಮೂಲಕ ಹೊಸ ವರ್ಷದ ಶುಭಾಶಯ ವಿನಿಮಯ ಮಾಡುವುದು ನಡೆಯುತ್ತದೆ. ಆದರೆ ವರ್ಷಾಚರಣೆಯ ಗುಂಗಿನಲ್ಲಿ ಅಸಭ್ಯವಾಗಿ ವರ್ತಿಸುವ ಪುಂಡರು ಮಹಿಳೆ ಮಕ್ಕಳಿಗೆ ಹಿಂಸೆ ನೀಡುವುದು, ಅಸಭ್ಯವಾಗಿ ವರ್ತಿಸುವುದು ಸೇರಿದಂತೆ ಹಲವು ರೀತಿಯ ಹುಚ್ಚಾಟಗಳನ್ನು ನಡೆಸುವುದರಿಂದ ಮಹಿಳೆ ಮತ್ತು ಮಕ್ಕಳ ಸುರಕ್ಷತೆಗಾಗಿ ಪೊಲೀಸ್ ಇಲಾಖೆ ಕಾನೂನು ರೀತಿಯ ಸುರಕ್ಷತಾ ಕ್ರಮಗಳನ್ನು ಕೈಗೊಂಡಿದೆ.
36 ವಿಶೇಷ ಕಾರ್ಯಪಡೆ ರಚನೆ ಹೊಸ ವರ್ಷಾಚರಣೆ ಸಂದರ್ಭ ಏನೆಲ್ಲ ಕ್ರಮಗಳನ್ನು ಕೈಗೊಂಡಿದ್ದಾರೆ.
ವರ್ಷಾಚರಣೆಯ ಗುಂಗಿನಲ್ಲಿ ಅಸಭ್ಯವಾಗಿ ವರ್ತಿಸುವವರಿಗೆ ಕಠಿಣ ಕ್ರಮದ ಎಚ್ಚರಿಕೆಯನ್ನು ನೀಡಿದ್ದಾರೆ. ಜೊತೆಗೆ ಮಹಿಳೆಯರ ಸುರಕ್ಷತೆ ದೃಷ್ಟಿ ಯಿಂದ ಮೈಸೂರು ನಗರದಲ್ಲಿ ಮಹಿಳಾ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಒಳಗೊಂಡ ಎಂಟು ಚಾಮುಂಡಿ ಪಡೆ (ಸುರಕ್ಷತಾ ಪಿಂಕ್ ಗರುಡಾ) ರಚಿಸಲಾಗಿದೆ.
ಇನ್ನು ಹೊಸ ವರ್ಷಾಚರಣೆ ನೆಪದಲ್ಲಿ ಅಸಭ್ಯ ವರ್ತನೆಯನ್ನು ಯಾರೂ ಮಾಡಬಾರದು. ಈ ಸಂಬಂಧ 36 ವಿಶೇಷ ಕಾರ್ಯಪಡೆ ತಂಡ ರಚನೆ ಮಾಡಲಾಗಿದೆ. ಮಹಿಳೆಯರ ರಕ್ಷಣೆಗಾಗಿ 8 ಸುರಕ್ಷತಾ ಪಿಂಕ್ ಗರುಡ (ಚಾಮುಂಡಿ ಪಡೆ) ರಚನೆ ಮಾಡಿದ್ದೇವೆ. ನಗರದ ಪ್ರಮುಖ ಸ್ಥಳಗಳಲ್ಲಿ ಶ್ವಾನದಳ ಮತ್ತು ವಿಧ್ವಂಸಕ ಕೃತ್ಯ ತಡೆಗಾಗಿ 4 ತಂಡ ರಚನೆ ಮಾಡಲಾಗಿದೆ.