Monday, 25th November 2024

ಕನ್ನಡದಲ್ಲಿ ಬರೆದ ಚೆಕ್ ಅಮಾನ್ಯ: ಬ್ಯಾಂಕಿಗೆ 85,177 ರೂಪಾಯಿ ದಂಡ

ಧಾರವಾಡ: ಕನ್ನಡದಲ್ಲಿ ಬರೆದ ಚೆಕ್ ಅನ್ನು ಅಮಾನ್ಯ ಮಾಡಿದ ಹಳಿಯಾಳದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಗೆ ಧಾರವಾಡ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು 85,177 ರೂಪಾಯಿ ದಂಡ ಪಾವತಿಸುವಂತೆ ಆದೇಶಿಸಿದೆ.

ಧಾರವಾಡದ ಇಂಗ್ಲಿಷ್‌ ಪ್ರಾಧ್ಯಾಪಕ ವಾದಿರಾಜಾಚಾರ್ಯ ಇನಾಮದಾರ ಎಂಬವರು ತಮ್ಮ ಉಳಿತಾಯ ಖಾತೆಯಲ್ಲಿದ್ದ ಹಣ ಹಿಂಪಡೆಯಲು, ಕನ್ನಡದಲ್ಲಿ ಬರೆದು ಸಲ್ಲಿಸಿದ್ದ ಚೆಕ್‌ ಅನ್ನು ಹಳಿಯಾಳದ ಎಸ್‌ಬಿಐ ಶಾಖೆ ತಿರಸ್ಕರಿಸಿತ್ತು. ಈ ಕುರಿತು ಎಸ್‌ಬಿಐ ಶಾಖೆಯ ವಿರುದ್ಧ ಧಾರವಾಡ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರು ದಾಖಲಿಸಿದ್ದರು.

ದೂರುದಾರರ ಉಳಿತಾಯ ಖಾತೆಯಲ್ಲಿ 9 ಲಕ್ಷ ರೂಪಾಯಿಗಿಂತ ಹೆಚ್ಚು ಹಣ ಇದ್ದರೂ ಕೇವಲ 6 ಸಾವಿರ ರೂಪಾಯಿ ಮೌಲ್ಯದ ಚೆಕ್‌ ಅನ್ನು ಕನ್ನಡ ಭಾಷೆಯಲ್ಲಿ ಬರೆದಿರುವು ದಕ್ಕೆ ಎಸ್‌ಬಿಐ ಶಾಖೆ ಅಮಾನ್ಯ ಮಾಡಿದೆ. ಇದನ್ನು ಸೇವಾ ನ್ಯೂನತೆ ಎಂದು ಪರಿಗಣಿಸಿ ಶಾಖೆಯು ಫಿರ್ಯಾದಿಗೆ ಪರಿಹಾರ ಮತ್ತು ದಂಡ ರೂಪದಲ್ಲಿ ಒಟ್ಟು 85,177 ರೂಪಾಯಿಗಳನ್ನು ಪಾವತಿಸುವಂತೆ ಆದೇಶಿಸಿದೆ.

ಇತ್ತೀಚಿನ ದಿನಗಳಲ್ಲಿ ಬ್ಯಾಂಕ್‌ಗಳಲ್ಲಿ ಬರೀ ಇಂಗ್ಲಿಷ್‌, ಹಿಂದಿ ಭಾಷೆಯನ್ನೇ ಬಳಕೆ ಮಾಡುವುದು ಹೆಚ್ಚಾಗಿ ಬಿಟ್ಟಿದೆ. ಎಸ್‌ಬಿಐ ಬ್ಯಾಂಕ್‌ಗಳಲ್ಲಂತೂ ಇಂಗ್ಲಿಷ್‌ ಭಾಷೆ ಕಡ್ಡಾಯ ವೆನ್ನುವಂತೆ ವರ್ತಿಸುತ್ತಾರೆ. ಅಲ್ಲದೇ ಚೆಕ್‌ ಕೇಳಿದರೆ ಸಾಕು ಇಂಗ್ಲಿಷ್‌ನಲ್ಲಿರುವ ಚೆಕ್‌ ಅನ್ನೇ ನೀಡುತ್ತಾರೆ.

ವಾದಿರಾಜಾಚಾರ್ಯ ಇನಾಮದಾರ ಎಂಬುವರು ತಮ್ಮ ಖಾತೆಯಲ್ಲಿದ್ದ ಹಣ ಹಿಂಪಡೆಯಲು, ಕನ್ನಡದಲ್ಲಿ ಬರೆದು ಸಲ್ಲಿಸಿದ್ದ ಚೆಕ್‌ ಅನ್ನು ಹಳಿಯಾಳದ ಎಸ್‌ಬಿಐ ಶಾಖೆ ತಿರಸ್ಕರಿಸಿತ್ತು.

ಧಾರವಾಡ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು 85,177 ರೂಪಾಯಿ ದಂಡ ಪಾವತಿಸುವಂತೆ ಆದೇಶಿಸಿದ್ದು, ಎಲ್ಲಾ ಬ್ಯಾಂಕ್‌ನವರಿಗೂ ಪ್ರಾದೇಶಿಕ ಭಾಷೆಗಳ ಬಗ್ಗೆ ಮಹತ್ವದ ಅರಿವನ್ನು ಮೂಡಿಸಿದ್ದಾರೆ.