Sunday, 15th December 2024

Chess: ಅಂತರರಾಷ್ಟ್ರೀಯ ಚೆಸ್ ಟೂರ್ನಿಗೆ ಆಯ್ಕೆ

ತುಮಕೂರು: ನಗರದ ವಿದ್ಯಾವಾಹಿನಿ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಪ್ರತೀಕ್ ಜಿ.ವೈ. , ಇತ್ತೀಚೆಗೆ ದಾವಣಗೆರೆಯಲ್ಲಿ ನಡೆದ 17 ವರ್ಷದ ಒಳಗಿನ ರಾಷ್ಟ್ರೀಯ ಮಟ್ಟದ ರ‍್ಯಾಪಿಡ್ ರೇಟಿಂಗ್ ಫೈಡ್ ಚೆಸ್ ಟೂರ್ನಮೆಂಟ್‌ನಲ್ಲಿ ಭಾಗವಹಿಸಿ ಅತ್ಯುತ್ತಮ ಸಾಧನೆ ಮಾಡಿ ಅಂತರರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿರುವುದು ಶ್ಲಾಘನೀಯ.

ಅಂತರರಾಷ್ಟ್ರೀಯ ಮಟ್ಟದ ಚೆಸ್ ಟೂರ್ನಮೆಂಟ್ ನವೆಂಬರ್ ತಿಂಗಳಲ್ಲಿ ಮೈಸೂರಿನಲ್ಲಿ ಜರುಗುವುದು.
ವಿದ್ಯಾರ್ಥಿಯ ಸಾಧನೆಗೆ ಮೆಚ್ಚಿ ಸಂಸ್ಥೆಯ ಅಧ್ಯಕ್ಷರಾದ ಕೆ.ಬಿ.ಜಯಣ್ಣ, ಕಾರ್ಯದರ್ಶಿ ಎನ್.ಬಿ.ಪ್ರದೀಪ್‌ಕುಮಾರ್‌, ಸಂಸ್ಥೆಯ ನಿರ್ದೇಶಕರಾದ ಪ್ರಿಯಾಪ್ರದೀಪ್‌, ಪ್ರಾಚಾರ್ಯ ನವೀನ್‌ಕುಮಾರ್ ಹಾಗೂ ಉಪನ್ಯಾಸಕ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.

ಇದನ್ನೂ ಓದಿ: Chess Olympiad: ಇತಿಹಾಸ ಬರೆದ ಚೆಸ್‌ ಮಾಂತ್ರಿಕರಿಗೆ ಪ್ರಧಾನಿ ಮೋದಿಯಿಂದ ಸನ್ಮಾನ