ಗೌರಿಬಿದನೂರು: ಸರ್ಕಾರದ ವಿವಿಧ ಯೋಜನೆಗಳು ಸೇರಿದಂತೆ ಧ್ಯೇಯೋದ್ದೇಶಗಳು ಸಫಲವಾಗಬೇಕಾದರೆ ಅಧಿಕಾರಿಗಳ ಜವಾಬ್ದಾರಿ ಬಹಳ ಮುಖ್ಯವಾಗಿರುತ್ತದೆ. ಎಂದು ಲೋಕಾಯುಕ್ತ ಅಧೀಕ್ಷಕ ಆಂಟನಿ ಜಾನ್ ಜೆ.ಕೆ. ಹೇಳಿದರು.
ನಗರದ ತಾಲ್ಲೂಕು ಕಛೇರಿ ಸಭಾಂಗಣದಲ್ಲಿ ಲೋಕಾಯುಕ್ತ ಇಲಾಖೆಯಿಂದ ಏರ್ಪಡಿಸಿದ್ದ ಸಾರ್ವಜನಿಕರ ಅಹವಾಲು ಸ್ವೀಕಾರ ಕಾರ್ಯಕ್ರಮಕ್ಕೆ ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಗಾಟಿಸಿ ಮಾತನಾಡಿದರು.
ಚಿಕ್ಕಬಳ್ಳಾಪುರ ಜಿಲ್ಲಾ ಲೋಕಾಯುಕ್ತರಿಂದ ಆಯೋಜಿಸಲಾಗಿದ್ದ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಅಹವಾಲು ಗಳನ್ನು ಸ್ವೀಕರಿಸಿ, ತಾಲ್ಲೂಕಿನ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದ ಅವರು ಸಾರ್ವಜನಿಕರ ಸಮಸ್ಯೆ ಗಳಿಗೆ ಅಧಿಕಾರಿಗಳು ತಕ್ಷಣ ಸ್ಪಂದಿಸಬೇಕು ಎಂದು ಹೇಳಿದರು.
ಸಾರ್ವಜನಿಕ ಕಛೇರಿಗಳಲ್ಲಿ ಸಿಬ್ಬಂದಿ ಕೊರತೆ, ನಾನಾ ಸಮಸ್ಯೆಗಳ ಜತೆಗೆ ಡಿಜಿಟಲೀಕರಣ ಆಗಿದ್ದರೂ ಭ್ರಷ್ಟಾಚಾ ರಕ್ಕೆ ಕಡಿವಾಣ ಬಿದ್ದಿಲ್ಲ.ಇದೇ ಕಾರಣಕ್ಕೆ ಈಗ ಲೋಕಾಯುಕ್ತಕ್ಕೆ ಜನರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ ತಮ್ಮ ಕಷ್ಟಗಳನ್ನು ಹೇಳಿಕೊಳ್ಳುತ್ತಾರೆ.ಇದನ್ನು ಮನಗಂಡು ತಾಲೂಕು ಕೇಂದ್ರಗಳಲ್ಲಿ ಕುಂದುಕೊರತೆ ಸಭೆ ಏರ್ಪಡಿಸಿ ಅಧಿಕಾರಿಗಳನ್ನು ಅಲ್ಲಿಗೆ ಕರೆಸಿ ಸಮಸ್ಯೆ ಪರಿಹಾರ ಮಾಡುವುದು ಲೋಕಾಯುಕ್ತದ ಕೆಲಸವಾಗಿದೆ. ತಪ್ಪು ಮಾಡಿರುವ ಅಧಿಕಾರಿಗಳಿಗೆ ತಕ್ಕ ಶಿಕ್ಷೆಕೊಡಿಸುವ ಕೆಲಸವನ್ನು ಕೂಡ ಪ್ರಾಮಾಣಿಕವಾಗಿ ಮಾಡುತ್ತೇವೆ ಎಂದರು.
ಕ0ದಾಯ ಇಲಾಖೆ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡಬೇಕು. ಭೂಮಿ ಕೇಂದ್ರದಲ್ಲಿನ ಬಾಕಿ ಇರುವ ಕಡತ ಗಳನ್ನು ಕೂಡಲೇ ವಿಲೇವಾರಿ ಮಾಡುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ಪೊಲೀಸ್ ಉಪಾಧೀಕ್ಷಕರಾದ ವೀರೇಂದ್ರ ಕುಮಾರ್, ಪೊಲೀಸ್ ನಿರೀಕ್ಷಕರಾದ ಶಿವಪ್ರಸಾದ್ ಜಿ, ತಹಶೀಲ್ದಾರ್ ಮಹೇಶ್.ಎಸ್.ಪತ್ರಿ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಜೆ.ಕೆ.ಹೊನ್ನಯ್ಯ, ನಗರಸಭೆ ಪೌರಾಯುಕ್ತೆ ಡಿ.ಎಂ.ಗೀತಾ, ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ.ಶ್ರೀನಿವಾಸಮೂರ್ತಿ, ಲೋಕಾಯುಕ್ತ ಸಿಬ್ಬಂದಿ ಮತ್ತು ಎಲ್ಲಾ ಇಲಾಖೆಯ ಅಧಿಕಾರಿಗಳು ಹಾಜರಿದ್ದರು. ತಾಲೂಕು ಕಛೇರಿಯ ವಿವಿಧ ಇಲಾಖೆಗಳ ಅಧಿಕರಿಗಳು ಭಾಗವಹಿಸಿದ್ದರು.
ಇದನ್ನೂ ಓದಿ: Chickballapur News: ಸಾರ್ವಜನಿಕರು ಇ-ಆಸ್ತಿ ಸಂಯೊಜನೆಯ ಸದುಪಯೋಗ ಪಡೆದುಕೊಳ್ಳಿ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ