Sunday, 24th November 2024

ಇಂದಿನಿಂದ ಚಿಕ್ಕಬಳ್ಳಾಪುರ ಉತ್ಸವ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಉತ್ಸವವನ್ನು ಜನವರಿ 7 ರಿಂದ 14 ರವರೆಗೆ ನಗರದ ಸರ್.ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಚಿಕ್ಕಬಳ್ಳಾಪುರ ಜಿಲ್ಲೆ ಮತ್ತು ಡಾ.ಕೆ.ಸುಧಾಕರ್ ಫೌಂಡೇಶನ್, ಚಿಕ್ಕಬಳ್ಳಾಪುರ ಇವರ ಸಂಯುಕ್ತ ಆಶ್ರಯದಲ್ಲಿ ಉತ್ಸವ ನಡೆಯಲಿದೆ.

ಜನವರಿ 7 ರಂದು ಮಧ್ಯಾಹ್ನ 2:00 ಗಂಟೆಗೆ ನಗರದ ಶ್ರೀಮರಳು ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಚಿಕ್ಕಬಳ್ಳಾಪುರ ಉತ್ಸವದ ಮೆರವಣಿಗೆಗೆ ಚಾಲನೆಯನ್ನು ನೀಡಲಿದ್ದಾರೆ.

ಬಳಿಕ ಸಂಜೆ ನಗರದ ಸರ್.ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಚಿಕ್ಕಬ ಳ್ಳಾಪುರ ಉತ್ಸವ ಉದ್ಘಾಟನಾ ಕಾರ್ಯಕ್ರಮವನ್ನು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ನಿರ್ಮಲಾನಂದನಾಥ ಸ್ವಾಮೀಜಿ ಹಾಗೂ ರಾಜ್ಯಸಭೆಯ ಸದಸ್ಯರಾದ ಶ್ರೀಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಗಳಾದ ಡಾ.ಡಿ ವೀರೇಂದ್ರ ಹೆಗ್ಗಡೆರವರ ಉಪಸ್ಥಿತಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ.

ಚಿಕ್ಕಬಳ್ಳಾಪುರ ಉತ್ಸವದ ನಗರದ ದೀಪಾಲಂಕಾರಕ್ಕೆ ಇಂಧನ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ಚಾಲನೆ ನೀಡಲಿದ್ದಾರೆ. ಚಿಕ್ಕಬಳ್ಳಾಪುರ ಉತ್ಸವದ ಮುಖ್ಯ ಅತಿಥಿಯಾಗಿ ಕನ್ನಡ ಚಲನಚಿತ್ರ ನಟ ಕಿಚ್ಚ ಸುದೀಪ್ ಭಾಗಿಯಾಗಲಿದ್ದಾರೆ.

ಕಾರ್ಯಕ್ರಮದಲ್ಲಿ ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವ ಎಂ.ಟಿ.ಬಿ ನಾಗರಾಜ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಕೆ.ಸುಧಾಕರ್ , ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜು, ವಿಧಾನ ಪರಿಷತ್ತು ಸದಸ್ಯ ಡಾ.ವೈ.ಎ.ನಾರಾಯಣಸ್ವಾಮಿ, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಬಿ.ಎನ್.ಬಚ್ಚೇಗೌಡ, ಕೋಲಾರ ಲೋಕಸಭಾ ಕ್ಷೇತ್ರದ ಸಂಸದ ಎಸ್.ಮುನಿಸ್ವಾಮಿ, ಶಾಸಕರಾದ ಎನ್.ಎಚ್.ಶಿವಶಂಕರರೆಡ್ಡಿ, ಎಂ.ಕೃಷ್ಣರೆಡ್ಡಿ, ಎಸ್.ಎನ್.ಸುಬ್ಬಾರೆಡ್ಡಿ, ವಿ.ಮುನಿಯಪ್ಪ, ವಿಧಾನ ಪರಿಷತ್ತಿನ ಸದಸ್ಯ ಚಿದಾನಂದ ಎಂ. ಗೌಡ, ಎಂ.ಎಲ್.ಅನಿಲ್ ಕುಮಾರ್, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಕೆ.ವಿ.ನಾಗರಾಜ್, ಕರ್ನಾಟಕ ರಾಜ್ಯ ದ್ರಾಕ್ಷಿ ಮತ್ತು ವೈನ್ ಬೋರ್ಡ್ ಅಧ್ಯಕ್ಷ ಎನ್.ಎಂ.ರವಿನಾರಾಯಣರೆಡ್ಡಿ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಉಪಾಧ್ಯಕ್ಷರಾದ ಕೆ.ವಿ.ನವೀನ್ ಕಿರಣ್, ಚಿಕ್ಕಬಳ್ಳಾಪುರ ನಗರಸಭೆಯ ಅಧ್ಯಕ್ಷರಾದ ಡಿ.ಎಸ್.ಆನಂದರೆಡ್ಡಿ (ಬಾಬು), ಚಿಕ್ಕಬಳ್ಳಾಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಕೃಷ್ಣಮೂರ್ತಿ ಭಾಗಿಯಾಗಲಿದ್ದಾರೆ.