Saturday, 27th July 2024

ಅ.24ರವರೆಗೆ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ

ಚಿಕ್ಕಮಗಳೂರು: ಮಹಿಷ ದಸರಾ ಆಚರಣೆಗೆ ಸಂಬಂಧಿಸಿದಂತೆ ಅಕ್ಟೋಬರ್ 19ರಿಂದ ಅಕ್ಟೋಬರ್ 24ರವರೆಗೆ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ಆದೇಶ ಹೊರಡಿಸಿದ್ದಾರೆ.

ಮಹಿಷ ದಸರಾ ಆಚರಣೆಗೆ ಸಂಬಂಧ ಯಾವುದೇ ಪೋಸ್ಟರ್, ಬ್ಯಾನರ್, ಬಂಟಿಂಗ್ಸ್ ಆಳವಡಿಸುವುದು, ಪ್ರತಿಭಟನೆ, ಮೆರವಣಿಗೆಗಳನ್ನು, ಅವಹೇಳನ ಕಾರಿಯಂತಹ ಯಾವುದೇ ಘೋಷಣೆಗಳು, ಭಾಷಣಗಳು ಪ್ರಕಟಣೆಗಳು, ಅವಾಚ್ಯ ಶಬ್ದಗಳ ಬಳಕೆ, ಪ್ರಚೋದನಕಾರಿ ಭಾಷಣ, ಗಾಯನ ಇತ್ಯಾದಿ ಚಟುವಟಿಕೆಗಳನ್ನು ನಿಷೇಧಿಸಿದೆ.

ಶಸ್ತ್ರಗಳು, ದೊಣ್ಣೆಗಳು, ಕತ್ತಿಗಳು, ಈಟಿಗಳು, ಗದ್ದೆಗಳು, ಬಂದೂಕುಗಳು, ಚಾಕುಗಳು, ಕೋಲುಗಳು, ಲಾಟಿಗಳನ್ನು ಅಥವಾ ದೈಹಿಕ ಹಿಂಸೆಯನ್ನುಂಟು ಮಾಡುವ ಇತರೆ ಯಾವುದೇ ವಸ್ತುಗಳನ್ನು ಒಯ್ಯುವುದನ್ನು ನಿಷೇಧಿಸಿದೆ.

ಪಟಾಕಿಗಳನ್ನು ಸಿಡಿಸುವುದು, ಯಾವುದೇ ಕ್ಷಾರಕ ಪದಾರ್ಥ ಅಥವಾ ಸ್ಪೋಟಕಗಳನ್ನು ಒಯ್ಯುವುದನ್ನು ನಿಷೇಧಿಸಿದೆ. ಕಲ್ಲುಗಳನ್ನು ಅಥವಾ ಕ್ಷೀಪಣಿ ಗಳನ್ನು ಎಸೆಯುವ ಅಥವಾ ವೇಗದಿಂದ ಒಗೆಯುವ ಸಾಧನಗಳ ಅಥವಾ ಉಪಕರಣಗಳ ಒಯ್ಯುವಿಕೆಯನ್ನು ಶೇಖರಿಸುವುದನ್ನು ಮತ್ತು ತಯಾರಿಸು ವುದನ್ನು ನಿಷೇಧಿಸಿದೆ.

ಪ್ರಚೋದಿಸಬಹುದಾದಂತಹ ಬಹಿರಂಗ ಘೋಷಣೆಗಳನ್ನು ಮಾಡುವುದು, ಹಾಡುಗಳನ್ನು ಹಾಡುವುದು, ಸಂಗೀತವನ್ನು ನುಡಿಸುವುದು, ಆವೇಶಭರಿತ ಭಾಷಣ ಮಾಡುವುದು, ಇಂಗಿತ ಸೂಚನೆಗಳ ಅಥವಾ ಅಂಕ ನಿರೂಪಣೆಗಳನ್ನು ಪ್ರಯೋಗ ಮಾಡುವುದು ಮತ್ತು ಚಿತ್ರಗಳನ್ನು, ಸಂಕೇತಗಳನ್ನು, ಭಿತ್ತಿ ಪತ್ರಗಳನ್ನು ಅಥವಾ ಇತರೆ ಯಾವುದೇ ವಸ್ತು ಅಥವಾ ಪದಾರ್ಥಗಳನ್ನು ತಯಾರಿಸುವುದು, ಪ್ರದರ್ಶಿಸುವುದು ಅಥವಾ ಪ್ರಸಾರ ಮಾಡುವುದನ್ನು ನಿಷೇಧಿಸಿದೆ.

Leave a Reply

Your email address will not be published. Required fields are marked *

error: Content is protected !!