ಮತ್ತೊಮ್ಮೆ ಎಸ್.ಆರ್.ಗೌಡ ಅವರನ್ನು ಆಯ್ಕೆ ಮಾಡುವಂತೆ ಮನವಿ
ಶಿರಾ: ಶಿರಾ ತಾಲೂಕಿನಲ್ಲಿ ಎಸ್.ಆರ್.ಗೌಡ ಅವರು ಹೈನುಗಾರಿಕೆ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸಿದ್ದಾರೆ. ತುಮಕೂರು ಹಾಲು ಒಕ್ಕೂಟದ ನಿರ್ದೇಶಕರಾಗಿ ೧೦ ವರ್ಷಗಳಲ್ಲಿ ಅವರು ಕ್ಷೀರ ಕ್ರಾಂತಿಯನ್ನೇ ಮಾಡಿದ್ದಾರೆ. ಮತ್ತೊಮ್ಮೆ ಮತದಾರರು ಅವರನ್ನು ತುಮಕೂರು ಹಾಲು ಒಕ್ಕೂಟದ ನಿರ್ದೇಶಕರನ್ನಾಗಿ ಆಯ್ಕೆ ಮಾಡುವ ಮೂಲಕ ಇನ್ನೂ ಹೆಚ್ಚಿನ ಅಭಿವೃದ್ಧಿ ಮಾಡಲು ಕೈಜೋಡಿಸಿ ಎಂದು ವಿಧಾನಪರಿಷತ್ ಸದಸ್ಯ ಚಿದಾನಂದ್ ಎಂ.ಗೌಡ ಹೇಳಿದರು.
ಅವರು ನಗರದ ಸೇವಾ ಸದನದಲ್ಲಿ ಮಂಗಳವಾರ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದರು. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಎಸ್.ಆರ್.ಗೌಡ ಅವರು ಹೈನುಗಾರಿಕೆ ಅಭಿವೃದ್ಧಿಗೆ ತಾಲೂಕಿನಲ್ಲಿ ಸಾಕಷ್ಟು ಶ್ರಮಿಸಿದ್ದಾರೆ. ೧೦ ವರ್ಷ ನಿರ್ದೇಕರಾಗಿ ಸುಮಾರು 128 ಹಾಲು ಉತ್ಪಾದಕರ ಸಹಕಾರ ಸಂಘಗಳನ್ನು ಸ್ಥಾಪಿಸಿದ್ದಾರೆ. ಆದ್ದರಿಂದ ಈ ಬಾರಿಯೂ ಎಸ್.ಆರ್.ಗೌಡ ಅವರ ಗೆಲುವಿಗೆ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯ ಕರ್ತರು ಶ್ರಮಿಸಬೇಕು ಎಂದರು.
ಮಧುಗಿರಿ ವಿಭಾಗದ ಬಿಜೆಪಿ ಅಧ್ಯಕ್ಷ ಹನುಮಂತೇಗೌಡ ಮಾತನಾಡಿ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಯಾದ ಎಸ್.ಆರ್.ಗೌಡ ಅವರು ಶಿರಾ ತಾಲೂಕಿನಲ್ಲಿ ಹೈನುಗಾರರ ಪರವಾಗಿ ಕೆಲಸ ಮಾಡಿದ್ದಾರೆ. ಹಾಲು ಉತ್ಪಾದಕರಿಗೆ ಹಸು ಕೊಡಿಸುವುದು. ಹೈನುಗಾರರ ಮಕ್ಕಳಿಗೆ ವಿದ್ಯಾರ್ಥಿ ವೇತನ ಕೊಡಿಸುವುದು ಸೇರಿದಂತೆ ಹಲವು ಕೆಲಸ ಮಾಡಿದ್ದಾರೆ. ಸಹಕಾರಿ ಕ್ಷೇತ್ರದಲ್ಲಿ ತಮ್ಮದೇ ಆದ ಸಾಧನೆ ಮಾಡಿದ್ದಾರೆ. ಆದ್ದರಿಂದ ಮತದಾರರು ಎಸ್.ಆರ್.ಗೌಡ ಅವರನ್ನು ಅತಿ ಹೆಚ್ಚು ಮತಗಳಿಂದ ಗೆಲ್ಲಿಸಿ ಎಂದರು.
ತುಮಕೂರು ಹಾಲು ಒಕ್ಕೂಟದ ನಿರ್ದೇಶಕರಾದ ಎಸ್.ಆರ್.ಗೌಡ ಅವರು ಮಾತನಾಡಿ ಹೈನುಗಾರಿಕೆಯಿಂದ ರೈತರು ಆರ್ಥಿಕವಾಗಿ ಸಧೃಡರಾಗಲು ಸಾಧ್ಯ. ಈ ನಿಟ್ಟಿನಲ್ಲಿ ಶಿರಾ ತಾಲ್ಲೂಕಿನ ಪ್ರತಿ ಗ್ರಾಮದಲ್ಲೂ ಹಾಲು ಉತ್ಪಾದಕರ ಸಹಕಾರ ಸಂಘ ಸ್ಥಾಪಿಸುವುದೇ ನನ್ನ ಉದ್ದೇಶವಾಗಿದ್ದು, ಮತದಾರರು ಅತಿ ಹೆಚ್ಚಿನ ಮತ ನೀಡಿ ಜಯಶೀಲನನ್ನಾಗಿ ಮಾಡಬೇಕು. ೨೦೧೩ರ ತುಮಕೂರು ಹಾಲು ಒಕ್ಕೂಟದ ಚುನಾವಣೆಯಲ್ಲಿ ಅಂದು ಸಚಿವ ರಾಗಿದ್ದ ಬಿ.ಸತ್ಯನಾರಾಯಣ ಅವರು ನನಗೆ ಟಿಕೇಟ್ ನೀಡಿ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟಿದ್ದರು. ಆ ಸಂದರ್ಭದಲ್ಲಿ ಶಿರಾ ತಾಲೂಕಿನಲ್ಲಿ ಸುಮಾರು ೭೦ ಹಾಲು ಉತ್ಪಾದಕರ ಸಹಕಾರ ಸಂಘಗಗಳಿದ್ದವು.
ಕಳೆದ ೧೦ ವರ್ಷಗಳಿಂದ ಹಾಲು ಉತ್ಪಾದಕರ ಸಹಕಾರ ಸಂಘಗಳನ್ನು ಸ್ಥಾಪಿಸಬೇಕೆಂದು ಶ್ರಮಿಸಿದ ಪರಿಣಾಮ ಸದ್ಯ ೧೨೮ ಹಾಲು ಉತ್ಪಾದಕರ ಸಹಕಾರ ಸಂಘಗಳನ್ನು ಸ್ಥಾಪಿಸಲಾಗಿದೆ. ಹಾಗೂ ೨ ಉಪಕೇಂದ್ರಗಳನ್ನು ಮಾಡಲಾಗಿದೆ. ಮುಂದುವರೆದು ಪ್ರತಿ ತಾಲೂಕಿನಲ್ಲೂ ಹಾಲು ಉತ್ಪಾದಕರ ಸಂಘ ಸ್ಥಾಪಿಸುವ ಗುರಿ ಹೊಂದಿ ದ್ದೇನೆ. ತುಮಕೂರು ಹಾಲು ಒಕ್ಕೂಟದ ಚುನಾವಣೆ ಮುಂದಿನ ತಾ.ಪಂ., ಜಿ.ಪಂ. ಚುನಾವಣೆಗಳಿಗೆ ದಿಕ್ಸೂಚಿ ಯಾಗಿದೆ. ಆದ್ದರಿಂದ ಜೆಡಿಎಸ್ ಹಾಗೂ ಬಿಜೆಪಿ ಮುಖಂಡರು ಪ್ರತಿಷ್ಠೆಯಾಗಿ ತೆಗೆದುಕೊಂಡು ಕೆಲಸ ಮಾಡಬೇಕಾಗಿದೆ ಎಂದರು.
ರಾಜ್ಯ ಜೆಡಿಎಸ್ ಪರಿಷತ್ ಸದಸ್ಯ ಆರ್.ಉಗ್ರೇಶ್ ಮಾತನಾಡಿ ತುಮಕೂರು ಹಾಲು ಒಕ್ಕೂಟದ ನಿರ್ದೇಶಕರ ಸ್ಥಾನಕ್ಕೆ ನ. ೧೦ ರಂದು ಚುನಾವಣೆಯ ನಡೆಯಲಿದೆದ್ದು, ಜೆಡಿಎಸ್ ಪಕ್ಷದ ಎಲ್ಲಾರು ಒಗ್ಗಟ್ಟಾಗಿ ಎಸ್.ಆರ್.ಗೌಡ ಅವರ ಗೆಲುವಿಗೆ ಶ್ರಮಿಸಬೇಕು. ಕಳೆದ ೧೦ ವರ್ಷಗಳಿಂದ ತುಮಕೂರು ಹಾಲು ಒಕ್ಕೂಟದ ನಿರ್ದೇಶಕರಾಗಿದ್ದ ಎಸ್.ಆರ್.ಗೌಡ ಅವರು ತಾಲೂಕಿನಲ್ಲಿ ಕ್ಷೀರಕ್ರಾಂತಿಯನ್ನೇ ಮಾಡಿದ್ದಾರೆ. ನೂರಾರು ಹೈನುಗಾರರ ಮಕ್ಕಳಿಗೆ ವಿದ್ಯಾರ್ಥಿ ವೇತನ, ಹಾಸ್ಟೆಲ್ ಸೌಲಭ್ಯ ಒದಗಿಸಿದ್ದಾರೆ. ಮೃತಪಟ್ಟ ಹೈನುಗಾರರ ಕುಟುಂಬಗಳಿಗೆ ಪರಿಹಾರ ಕೊಡಿಸಿದ್ದಾರೆ. ಮೃತಪಟ್ಟ ರಾಸುಗಳಿಗೆ ಪರಿಹಾರ ಕೊಡಿಸಿದ್ದಾರೆ. ಆದ್ದರಿಂದ ಮತ್ತೊಮ್ಮೆ ಎಸ್.ಆರ್.ಗೌಡ ಅವರನ್ನು ಜಿಲ್ಲೆಯಲ್ಲಿಯೇ ಹೆಚ್ಚಿನ ಸಂಖ್ಯೆಯಲ್ಲಿ ಮತ ನೀಡಿ ಗೆಲ್ಲಿಸಬೇಕು ಎಂದರು.
ಈ ಸಂದರ್ಭದಲ್ಲಿ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಚಂಗಾವರ ಮಾರಣ್ಣ, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಮುದಿಮಡು ರಂಗಶಾಮಯ್ಯ, ತಾಲೂಕು ಜೆಡಿಎಸ್ ಅಧ್ಯಕ್ಷ ಸತ್ಯಪ್ರಕಾಶ್, ಮಧುಗಿರಿ ವಿಭಾಗದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಯಂಜಲಗೆರೆ ಮೂರ್ತಿ, ಬಿಜೆಪಿ ಗ್ರಾಮಂತರ ಅಧ್ಯಕ್ಷ ಹೊನ್ನಗೊಂಡನಹಳ್ಳಿ ಚಿಕ್ಕಣ್ಣ, ನಗರ ಅಧ್ಯಕ್ಷ ಗಿರಿಧರ್, ಮಾಜಿ ತಾ.ಪಂ. ಉಪಾಧ್ಯಕ್ಷ ರಂಗನಾಥ್ ಗೌಡ, ಶಿರಾ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ಗುಮ್ಮನಹಳ್ಳಿ ಈರಣ್ಣ, ಮಾಜಿ ಪಿ.ಎಲ್.ಡಿ. ಬ್ಯಾಂಕ್ ಅಧ್ಯಕ್ಷರಾದ ಟಿ.ಡಿ.ಮಲ್ಲೇಶ್, ನರಸಿಂಹೇಗೌಡ, ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ರೆಹಮತ್, ಹೆಮಂತ್ ಕುಮಾರ್, ಮುಖಂಡರಾದ ಮದಲೂರು ಮೂರ್ತಿ ಮಾಸ್ಟರ್, ಕೊಟ್ಟ ಶ್ರೀನಿವಾಸ ಗೌಡ, ನಿಸರ್ಗ ಸುರೇಶ್, ಸತ್ಯನಾರಾಯಣ, ಮುದ್ದುಗಣೇಶ್, ಸುನಿಲ್‌ಕುಮಾರ್, ಇನಂಗೊಲ್ಲಹಳ್ಳಿ ಶಿವಣ್ಣ, ಸೇರಿದಂತೆ ಹಲವರು ಹಾಜರಿದ್ದರು.