ಬಾಗೇಪಲ್ಲಿ: ಅ.೧೭ ರಂದು ರಾಷ್ಟಿçÃಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ”ಮಹರ್ಷಿ ವಾಲ್ಮೀಕಿ ಜಯಂತಿ ಯಾವುದೋ ಒಂದು ವರ್ಗ ಸೀಮಿತಗೊಳಿಸದೆ ಎಲ್ಲರೂ ಸೇರಿ ಅರ್ಥಪೂರ್ಣವಾಗಿ ಆಚರಿಸಲು ಸಹಕಾರ ನೀಡಬೇಕು ಎಂದು ತಹಶಿಲ್ದಾರ್ ಮನೀಷಾ ಮಹೇಶ್ ಪತ್ರಿ ಹೇಳಿದರು.
ಬಾಗೇಪಲ್ಲಿ ಪಟ್ಟಣದ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ತಾಲ್ಲೂಕು ಆಡಳಿತ ವತಿಯಿಂದ ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಮಹರ್ಷಿ ವಾಲ್ಮೀಕಿ ಸೇರಿದಂತೆ ವಿವಿಧ ಮಹನೀಯರ ಜಯಂತಿ ವಿಜೃಂಭಣೆಯಿಂದ ಮಾಡುವ ಬದಲಿಗೆ ಅರ್ಥ ಪೂರ್ಣವಾಗಿ ಆಚರಿಸಿದಾಗ ಮಾತ್ರ ಜಯಂತಿ ಆಚರಣೆಗೆ ಗೌರವ ಬರಲಿದೆ ಎಂದರು.
ಸಮುದಾಯದ ಹಿರಿಯ ಮುಖಂಡ, ಜಿ.ಪಂ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಬೂರಗ ಮಡುಗು ಲಕ್ಷ್ಮೀ ನರಸಿಂಹಪ್ಪ ಮಾತನಾಡಿ ಮಹರ್ಷಿ ವಾಲ್ಮೀಕಿಯು ರಾಮಾಯಣದಲ್ಲಿ ವಿವಿಧ ಪಾತ್ರಗಳ ಮೂಲಕ ಬದುಕಿನ ಪ್ರತಿ ಹಂತದಲ್ಲೂ ಅನುಸರಿಸಬೇಕಾದ ನೀತಿ ಬೋಧಿಸಿದ್ದು ಪ್ರತಿಯೊಬ್ಬರೂ ಅವರ ಆದರ್ಶ ಮೈಗೂಡಿಸಿಕೊಳ್ಳಬೇಕು. ಇದೇ ಅ.೧೭ರಂದು ನಡೆಯಲಿರುವ ಮಹರ್ಷಿ ವಾಲ್ಮೀಕಿ ಜಯಂತಿ ಅರ್ಥಪೂರ್ಣವಾಗಿ ಆಚರಿಸಲು ಸಮುದಾಯದ ಮುಖಂಡರು ಶ್ರಮಿಸಬೇಕು ಹಾಗೂ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಯನ್ನು ಈ ಹಿಂದಿನಂತೆ ಅರ್ಥಪೂರ್ಣ ವಾಗಿ ಆಚರಿಸಲು ತಾಲ್ಲೂಕು ಆಡಳಿತ ಸಂಪೂರ್ಣ ಸಹಕಾರ ನೀಡಬೇಕು ಎಂದರು.
ಬೆಳಿಗ್ಗೆ ೮ಕ್ಕೆ ಪಟ್ಟಣದ ಮಹರ್ಷಿ ವಾಲ್ಮೀಕಿ ದೇವಾಲಯದಲ್ಲಿ ಗಣ್ಯರಿಂದ ಪೂಜೆ ಸಲ್ಲಿಸಲಾಗುತ್ತದೆ. ನಂತರ ಗೂಳೂರು ವೃತ್ತದಿಂದ ಸಾಂಸ್ಕೃತಿಕ ಕಲಾತಂಡಗಳು ಹಾಗೂ ಪೂರ್ಣಕುಂಭದೊಂದಿಗೆ ಪಲ್ಲಕ್ಕಿ ಮೆರವಣಿಗೆ ಪ್ರಮುಖ ರಸ್ತೆಗಳ ಮೂಲಕ ಸಾಗಿ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಸಲು ತೀರ್ಮಾನಿಸಲಾಯಿತು.
ಮಹರ್ಷಿ ವಾಲ್ಮೀಕಿ ಅವರ ವಿಚಾರಧಾರೆಗಳ ಕುರಿತು ಭಾಷಣ, ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿರುವ ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ವಿವಿಧ ಕ್ಷೇತ್ರಗಳ ಸಮುದಾಯದ ಸಾಧಕರಿಗೆ ಸನ್ಮಾನ ನಡೆಯಲಿದೆ” ಎಂದು ತಿಳಿಸಿದರು.
ಈ ಸಂಧರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ರಮೇಶ್,ಸಮಾಜ ಕಲ್ಯಾಣ ಇಲಾಖೆ ಶೇಷಾದ್ರಿ,ಟಿ. ತಾಲ್ಲೂಕು ಆರೋಗ್ಯ ಅಧಿಕಾರಿಗಳಾದ ಡಾ. ಸತ್ಯನಾರಾಯಣ ರೆಡ್ಡಿ,ಲೋಕೋಪಯೋಗಿ ಇಲಾಖೆ ಪ್ರದೀಪ್, ಹಿಂದುಳಿದ ವರ್ಗಗಳ ಇಲಾಖೆ ಶಿವಪ್ಪ,ನಾಗರಾಜು,ವಿವಿಧ ಸಮುದಾಯಗಳ ಮುಖಂಡರಾದ ಬುರಗ ಮಡಗು ನರಸಿಂಹಪ್ಪ, ಡಿ. ಎಸ್.ಎಸ್. ಕಿರಣ್,ಕೋಟಪ್ಪ ಸೇರಿದಂತೆ ಇತರರು ಇದ್ದರು.
ಇದನ್ನೂ ಓದಿ: Chikkaballapur News: ಇಂದು ಗಾಂಧಿ ಭವನ ಕಟ್ಟಡ ಉದ್ಘಾಟನೆ ಮತ್ತು ಗಾಂಧಿ ಜಯಂತಿ ಅಂಗವಾಗಿ ಗಾಂಧಿ ನಡಿಗೆ ಕಾರ್ಯಕ್ರಮ