Sunday, 12th January 2025

Chikkaballapur News: ಯುವ ದಿನೋತ್ಸವ ಹಾಗೂ ಕ್ರೀಡಾಕೂಟದ ಬಹುಮಾನ ವಿತರಣೆ ಕಾರ್ಯಕ್ರಮ

ಬಾಗೇಪಲ್ಲಿ: ಆಧ್ಯಾತ್ಮಿಕ ಲೋಕದ ಮಹಾನ್ ಚೇತನ, ಭವ್ಯ ಭಾರತದ ಹೆಮ್ಮೆಯ ಪುತ್ರ, ಯುವಕರ ಪಾಲಿನ ಸ್ಪೂರ್ತಿಯ ಚಿಲುಮೆ ಸ್ವಾಮಿ ವಿವೇಕಾನಂದರ ತತ್ವಾದರ್ಶಗಳು ಎಂದೆಂದಿಗೂ ಜೀವಂತ ಎಂದು ಹಿರಿಯ ವಕೀಲರಾದ ಎ.ಜಿ.ಸುಧಾಕರ್ ಹೇಳಿದರು.

ಪಟ್ಟಣದ ಜ್ಞಾನದೀಪ್ತಿ ಶಾಲೆಯನ್ನು  ಯುವ ದಿನೋತ್ಸವ ಹಾಗೂ ವಾರ್ಷಿಕ ಕ್ರೀಡಾ ಕೂಟ ಬಹುಮಾನ ವಿತರಣೆ ಕಾರ್ಯಕ್ರಮ ದಲ್ಲಿ ಮಾತನಾಡಿ, ಸ್ವಾಮಿ ವಿವೇಕಾನಂದರು ಸಿಡಿಲ ಸನ್ಯಾಸಿ, ಭವ್ಯ ಭಾರತ ನಿರ್ಮಾಣದ ಸಂಕಲ್ಪ ತೊಟ್ಟ ಅದಮ್ಯ ಚೇತನ ವ್ಯಕ್ತಿಯಾಗಿದ್ದರು. ಅವರ ಹುಟ್ಟು ಹಬ್ಬದ ದಿನದ ಪ್ರಯುಕ್ತ ರಾಷ್ಟ್ರೀಯ ಯುವ ದಿನ ವನ್ನು ಆಚರಿಸುತ್ತಿರುವುದು ಹೆಮ್ಮೆಯ ವಿಚಾರವಾಗಿದೆ. ಸ್ವಾಮಿ ವಿವೇಕಾನಂದರ ಆದರ್ಶ ಮತ್ತು ತತ್ವಗಳನ್ನು ಇಂದಿನ ಯುವ ಜನತೆ ಅಳವಡಿಸಿಕೊಂಡು ಅವುಗಳನ್ನು ಪಾಲಿಸಬೇಕು ಎಂದು ಹೇಳಿದ್ದಾರೆ.

ಈ ಮಹಾನ್ ವ್ಯಕ್ತಿಯ ಜನ್ಮ ದಿನದ ಸವಿ ನೆನಪಿಗಾಗಿ ನಮ್ಮ ಭಾರತದಲ್ಲಿ ಪ್ರತಿವರ್ಷ ಜನವರಿ 12 ರಂದು ರಾಷ್ಟ್ರೀಯ ಯುವ ದಿನವನ್ನು ಆಚರಿಸಲಾಗುತ್ತದೆ.

ಈ ಸಂದರ್ಭದಲ್ಲಿ ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಶಾಲಾ ಮಕ್ಕಳಿಂದ ಸಂಸ್ಕೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಶಾಲೆಯ ಮುಖ್ಯಸ್ಥರಾದ ಕೆ.ಟಿ.ವೀರಾಂಜನೇಯಲು, ಆರ್.ವೆಂಕಟರಾಮ್, ಎ.ಕೆ.ನಿಂಗಪ್ಪ ಸಿದ್ದಲಿಂಗಯ್ಯ, ಮುಖ್ಯ ಶಿಕ್ಷಕರಾದ ಹರೀಶ್ ಹಾಗೂ ಪೋಷಕರು ಹಾಗೂ ಶಾಲಾ ಮಕ್ಕಳು ಹಾಜರಿದ್ದರು.

ಇದನ್ನೂ ಓದಿ: Chikkamagaluru News

Leave a Reply

Your email address will not be published. Required fields are marked *