ಚಿಕ್ಕಬಳ್ಳಾಪುರ: ನಗರದ ರಸ್ತೆಬದಿಯಲ್ಲಿರುವ ಒಟ್ಟು 21 ವಿವಿಧ ಬೀದಿ ಬದಿ ತಿಂಡಿ ತಿನಿಸು ವ್ಯಾಪಾರಿಗಳು, ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಮತ್ತು ಬೇಕರಿಗಳಿಗೆ ಭೇಟಿ ನೀಡಿದ್ದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಅಂಕಿತಾಧಿಕಾರಿ ಡಾ. ಬಿ .ಧರ್ಮೇಂದ್ರ ನ್ಯೂನತೆಗಳು ಕಂಡುಬ೦ದ ವ್ಯಾಪಾರಿಗಳಿಗೆ ಒಟ್ಟು 08 ನೋಟೀಸ್ ಜಾರಿ ಮಾಡಿ ಒಟ್ಟು 11000 ರೂಗಳ ದಂಡ ವಿಧಿಸಿ ಎಚ್ಚರಿಕೆ ನೀಡಿದರು
ಚಿಕ್ಕಬಳ್ಳಾಪುರ ನಗರದಲ್ಲಿ ಸೆಪ್ಟೆಂಬರ್ 27ರಂದು ಸಂಜೆ 5 ಗಂಟೆಯಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಅಧಿಕಾರಿಗಳು ಹಾಗೂ ನಗರ ಸಭೆ ಆರೋಗ್ಯ ನಿರೀಕ್ಷಕರ ಸಹಯೋಗದಲ್ಲಿ ತಪಾಸಣಾ ವಿಶೇಷ ಆಂದೋ ಲನವನ್ನು ಹಮ್ಮಿಕೊಳ್ಳಲಾಗಿದ್ದು ಈ ವೇಳೆ ವಿವಿಧ ಮಳಿಗೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಆಹಾರ ಪದಾರ್ಥಗಳ ತಯಾರಕರು, ಮಾರಾಟಗಾರರು, ದಾಸ್ತಾನುದಾರರು ಶುಚಿತ್ವಕ್ಕೆ ಒತ್ತು ನೀಡಿ ಆಹಾರ ಸಿದ್ದಪಡಿಸುವ ಸ್ಥಳ, ವ್ಯಾಪಾರದ ಸ್ಥಳಗಳಲ್ಲಿ ಶುಚಿತ್ವ ಕಾಪಾಡಿಕೊಳ್ಳುವುದರ ಜೊತೆಗೆ ತಮ್ಮ ಆರೋಗ್ಯವನ್ನು ಸಹ ಉತ್ತಮವಾಗಿಟ್ಟುಕೊಳ್ಳಬೇಕು ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಅಂಕಿತಾಧಿಕಾರಿ ಡಾ. ಬಿ ಧರ್ಮೇಂದ್ರ ತಿಳಿಸಿದರು.
ಆಹಾರ ಸಿದ್ದಪಡಿಸುವ ಸ್ಥಳ, ವ್ಯಾಪಾರದ ಸ್ಥಳಗಳಲ್ಲಿ ಶುಚಿತ್ವ ಕಾಪಾಡಿಕೊಳ್ಳಬೇಕು. ತಮ್ಮ ಆರೋಗ್ಯವು ಸಹ ಉತ್ತಮವಾಗಿರಬೇಕು ಎಂದು ಆಹಾರ ಪದಾರ್ಥಗಳ ತಯಾರಕರು, ಮಾರಾಟಗಾರರು, ದಾಸ್ತಾನುದಾರರು ಶುಚಿತ್ವಕ್ಕೆ ಒತ್ತು ನೀಡಬೇಕು ಎಂದು ಜಾಗೃತಿ ಮೂಡಿಸಲಾಗಿದೆ. ಗ್ರಾಹಕರಿಗೆ ಶುದ್ಧವಾದ ಆಹಾರವನ್ನು ಮತ್ತು ನೀರನ್ನು ಪೂರೈಸಬೇಕು. ನಿಯಮಿತವಾಗಿ ಎಲ್ಲಾ ಕಾರ್ಮಿಕರಿಗೆ ಆರೋಗ್ಯ ತಪಾಸಣೆ ಮಾಡಿಸಲು ತಿಳಿಸಲಾಗಿದೆ ಎಂದರು.
ಈ ಸದರಿ ಆಂದೋಲನದಲ್ಲಿ ಆಹಾರ ಸುರಕ್ಷತಾಧಿಕಾರಿ ಹರೀಶ್, ಚಿಕ್ಕಬಳ್ಳಾಪುರ ತಾಲ್ಲೂಕು ಸಿ.ಎನ್ ಡಾ. ಸತ್ಯನಾರಾಯಣರೆಡ್ಡಿ, ನಗರಸಭೆಯ ಉಮಾಶಂಕರ್, ಆಹಾರ ಸುರಕ್ಷತಾಧಿಕಾರಿಗಳು ಮತ್ತು ಆರೋಗ್ಯ ನಿರೀಕ್ಷಕರು ಹಾಜರಿದ್ದರು.
ಇದನ್ನೂ ಓದಿ: Chikkaballapur News: ಮಾಜಿ ನಗರಸಭಾಧ್ಯಕ್ಷ ಹಾಗೂ ಸರ್‌ಎಂವಿ ಶಾಲೆಯ ಆಡಳಿತ ಮಂಡಳಿ ಮುಖ್ಯಸ್ಥ ಎಂ ಪ್ರಕಾಶ್ ಆಗ್ರಹ