ಬಾಗೇಪಲ್ಲಿ: ಪಟ್ಟಣದ ನೂತನವಾಗಿ ಆಯ್ಕೆಯಾದ ಅಧ್ಯಕ್ಷೆ ಎ.ಶ್ರೀನಿವಾಸ್ ಹಾಗೂ ಉಪಾಧ್ಯಕ್ಷ ಸುಜಾತ ನರಸಿಂಹ ನಾಯ್ಡು ಅವರ ಪದಗ್ರಹಣ ಸಮಾರಂಭ ನಡೆಯಿತು.
ನೂತನ ಅಧ್ಯಕ್ಷ ಎ.ಶ್ರೀನಿವಾಸ್ ಅಧಿಕಾರ ಸ್ವೀಕರಿಸಿ ಮಾತನಾಡಿ, ಪಟ್ಟಣದ ಸಮಸ್ಯೆಗಳ ನಿವಾರಣೆಗೆ ಶಾಸಕ ಎಸ್. ಎನ್. ಸುಬ್ಬಾರೆಡ್ಡಿ ಅವರ ಮಾರ್ಗದರ್ಶನದಲ್ಲಿ ಕೆಲಸ ಮಾಡೋಣ. ಎಲ್ಲರೂ ಪುರಸಭೆ ಸದಸ್ಯರು ಸೇರಿ ಆಡಳಿತಕ್ಕೆ ಸಹಕಾರ ನೀಡುವಂತೆ ಕೋರಿದರು.
ಶಾಸಕ ಎಸ್. ಎನ್.ಸುಬ್ಬಾರೆಡ್ಡಿ ನೂತನ ಪುರಸಭೆ ಅದ್ಯಕ್ಷ ಹಾಗೂ ಉಪಾಧ್ಯಕ್ಷಕರಿಗೆ ಅಭಿನಂದನೆ ಸಲ್ಲಿಸಿ ಮಾತನಾಡಿ, ಅಧ್ಯಕ್ಷ ಮತ್ತು ಉಪಾಧ್ಯಕ್ಷರು ಇಂದಿನಿಂದ ಪಟ್ಟಣದ ಸಮಸ್ಯೆಗಳ ನಿವಾರಣೆಗೆ ಒಳ್ಳೆಯ ರೀತಿಯಲ್ಲಿ ಕೆಲಸ ಮಾಡಿ, ಜನರ ಸಮಸ್ಯೆಗಳಿಗೆ ಸ್ಪಂದಿಸಿ. ಅಲ್ಲದೆ ಅಧ್ಯಕ್ಷ ಉಪಾಧ್ಯಕ್ಷರು ಹಾಗೂ ಪುರಸಭೆ ಅಧಿಕಾರಿಗಳು ಮತ್ತು ಸಿಬ್ಬಂದಿ ಜನರು ಕರೆ ಮಾಡಿದರೆ ಕರೆ ಸ್ವೀಕರಿಸಿ ಜನರ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಹೇಳಿದರು,
ಈ ಸಂದರ್ಭದಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷ ಎ.ನಂಜುಂಡಪ್ಪ, ಶ್ರೀನಿವಾಸ್ ರೆಡ್ಡಿ, ಶ್ರೀನಾಥ್, ಗಡ್ಡಂ ರಮೇಶ್, ಅಶೋಕ, ಮನ್ಸೂರ್, ಗುಲ್ನಾಜ್ ಬೇಗಂ,ರೇಷ್ಮಾ ಬಾನು,ಪುರಸಭೆ ಮುಖ್ಯಾಧಿಕಾರಿ ಶ್ರೀನಿವಾಸ್ ಹಾಗೂ ಪುರಸಭೆ ಸಿಬ್ಬಂದಿ ವರ್ಗ ಹಾಜರಿದ್ದರು.