ಸೋಲು ಗೆಲುವು ಸಹಜ ಕ್ರೀಡೆಗಳಲ್ಲಿ ಭಾಗವಹಿಸುವುದು ಮುಖ್ಯ ಪ್ರಾಂಶುಪಾಲ ಸಿ .ಎಂ. ಮುನಿಕೃಷ್ಣ
ಚಿಕ್ಕಬಳ್ಳಾಪುರ: ಕ್ರೀಡೆಗಳಲ್ಲಿ ಭಾಗವಹಿಸುವ ಮೂಲಕ ದೈಹಿಕ ಹಾಗೂ ಮಾನಸಿಕವಾಗಿ ಸದೃಢತೆ ಕಾಪಾಡಿ ಕೊಳ್ಳಬೇಕು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಮಂಜುಳ ತಿಳಿಸಿದರು.
ನಗರದ ಹೊರವಲಯದಲ್ಲಿರುವ ಕೆ ವಿ ಕ್ಯಾಂಪಸ್ ಕ್ರೀಡಾಂಗಣದಲ್ಲಿ ದಿ ಗೋಲ್ಡನ್ ಗ್ಲೀಮ್ಸ್ ಕಾಲೇಜು ವತಿಯಿಂದ ಪದವಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಕ್ರೀಡಾ ಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.
ವಿದ್ಯಾರ್ಥಿಗಳು ಆರೋಗ್ಯಕರ ಜೀವನ ಶೈಲಿಯನ್ನು ಕಾಪಾಡಿಕೊಂಡು ಶಿಕ್ಷಣದಲ್ಲಿ ತೊಡಗಿಸಿಕೊಂಡು ಸಾಧನೆ ಮಾಡಬೇಕು ಎಂದು ಸಲಹೆ ನೀಡಿದರು.
ದಿನ ನಿತ್ಯ ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವುದರಿಂದ ಓದಿನಲ್ಲಿ ಏಕಾಗ್ರತೆ ಸಾಧಿಸಬಹುದು. ಒತ್ತಡ ನಿವಾರಿಸಿಕೊಂಡು ಸಾಧನೆಯ ಹಾದಿಯಲ್ಲಿ ಸಾಗಲು ಸಾಧ್ಯ ಎಂದರು.
ಪ್ರಸ್ತುತ ದಿನಗಳಲ್ಲಿ ಟಿ ವಿ,ಮೊಬೈಲ್ ಫೋನ್ ,ಚಟದಿಂದಾಗಿ ಯುವಕರು ದೈಹಿಕ ಚಟುವಟಿಕೆಗಳಲ್ಲಿ ಭಾಗವಹಿಸು ವುದಕ್ಕೆ ನಿರಾಸಕ್ತಿ ತೋರುತ್ತಿದ್ದಾರೆ .
ಇದರಿಂದಾಗಿ ಚಿಕ್ಕ ವಯಸ್ಸಿನಲ್ಲಿಯೇ ನಾನಾ ರೀತಿಯ ರೋಗಗಳಿಗೆ ತುತ್ತಾಗುತ್ತಿದ್ದು, ಮಾನಸಿಕವಾಗಿ ದುರ್ಬಲ ರಾಗುತ್ತಿದ್ದಾರೆ. 30 ರ ವಯೋಮಾನಕ್ಕೆ ಹೃದಯ ಸಂಬಂಧಿ ಕಾಯಿಲೆಯಿಂದ ಅಕಾಲಿಕ ಮರಣಕ್ಕೆ ತುತ್ತಾಗುವುದು ಸಾಮಾನ್ಯವಾಗಿಬಿಟ್ಟಿದೆ. ಇದು ಒಳ್ಳೆಯ ಬೆಳವಣಿಗೆ ಅಲ್ಲ ಎಂದು ಕಳವಳ ವ್ಯಕ್ತಪಡಿಸಿದರು.
ಉತ್ತಮ ಆರೋಗ್ಯ ಹೊಂದಿ ಆರೋಗ್ಯಕರ ಜೀವನ ಸಾಗಿಸಲು ಜಂಕ್ ಫುಡ್ ನಿಂದು ದೂರವಿರಬೇಕು.ತಂಬಾಕು ಸೇವನೆ ಮಾಡಬಾರದು,ಪೌಷ್ಟಿಕ ಆಹಾರ ಜತೆಗೆ ದೈಹಿಕ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಇದೇ ವೇಳೆ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.
ಕೆ ವಿ ದೈಹಿಕ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಆರ್ ವೆಂಕಟೇಶ್ ಮಾತನಾಡಿ, ಕ್ರೀಡೆಗಳಲ್ಲಿ ಭಾಗ ವಹಿಸುವಿಕೆ ಕೇವಲ ಒಂದು ದಿನಕ್ಕೆ ಸೀಮಿತವಾಗಬಾರದು. ಇದನ್ನು ನಿರಂತರ ಅಭ್ಯಾಸವಾಗಿಸಿಕೊಳ್ಳಬೇಕು. ಇದಲ್ಲದೆ ಕ್ರೀಡಾಪಟುಗಳು ಸೋಲು ಗೆಲುವಿನ ಬಗ್ಗೆ ಯೋಚಿಸದೆ ಕ್ರೀಡೆಗಳಲ್ಲಿ ಭಾಗವಹಿಸುವ ಮೂಲಕ ದೈಹಿಕವಾಗಿ ಮಾನಸಿಕವಾಗಿ ಸದೃಢವಾಗಬೇಕು ಎಂದರು. ಇನ್ನು ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರ ತರುವ ಎಲ್ಲ ಪ್ರಯತ್ನ ಕಾಲೇಜಿನ ಆಡಳಿತ ಮಂಡಳಿ ಮಾಡಿದ್ದು ಅವರ ಈ ಕಾರ್ಯ ಶ್ಲಾಘನೀಯ ಎಂದರು.
ಕಾಲೇಜಿನ ಪ್ರಾಂಶುಪಾಲರಾದ ಸಿಎಂ ಮುನಿಕೃಷ್ಣ ಮಾತನಾಡಿ ಕಾಲೇಜಿನ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಕಾಲಕಾಲಕ್ಕೆ ಪಠ್ಯೇತರ ಚಟುವಟಿಕೆಗಳನ್ನು ಆಯೋಜಿಸಲಾಗುತ್ತಿದೆ .ಅತ್ಯುತ್ತಮ ಕ್ರೀಡಾಪ್ರತಿಭೆಗಳನ್ನಾಗಿ ರೂಪಿಸಬೇಕೆನ್ನುವ ಉದ್ದೇಶದಿಂದ ಹಾಗೂ ಅವರಲ್ಲಿ ಅಡಗಿರುವ ಪ್ರತಿಭೆಯನ್ನು ಹೊರ ತರುವ ಎಲ್ಲ ಪ್ರಯತ್ನ ಮಾಡಿದ್ದೇವೆ.ವಿದ್ಯಾರ್ಥಿಗಳು ಮಾನಸಿಕವಾಗಿ ಆರೋಗ್ಯ ಕಾಪಾಡಿಕೊಳ್ಳುವ ಜೊತೆಗೆ ಶಾರೀರಿಕವಾಗಿ ದೈಹಿಕವಾಗಿ ಸದೃಢವಾಗಬೇಕು.ಆಗ ಮಾತ್ರ ಉತ್ತಮ ಪ್ರಜೆಗಳಾಗಿ ಹೊರಹುಮ್ಮಲು ಸಾಧ್ಯ ಎಂಬುದನ್ನು ಮನಗಂಡಿರುವ ನಾವು ನಮ್ಮ ಕಾಲೇಜಿನಲ್ಲಿ ಶಿಕ್ಷಣದ ಜೊತೆಗೆ ನಿರಂತರವಾಗಿ ಕ್ರೀಡಾ ಚಟುವಟಿಕೆಗಳನ್ನು ಆಯೋಜಿಸಲಾಗುತ್ತಿದೆ. ಇದರಲ್ಲಿ ಭಾಗವಹಿಸುವಾಗ ಸೋಲು ಗೆಲುವು ಸಹಜ ಎಂಬ ಅರಿವಿನೊಂದಿಗೆ ಕ್ರೀಡೆಗಳಲ್ಲಿ ಭಾಗವಹಿಸುವುದು ಮುಖ್ಯ ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.ಈ ಸಂದರ್ಭದಲ್ಲಿ ಕಾಲೇಜಿನ ಆಡಳಿತಾಧಿಕಾರಿ ಆರ್. ಮೋಹನ್,ಉಪನ್ಯಾಸಕರಾದ ಪದ್ಮಾಕರ ಪಾಟೀಲ್,ಕೀರ್ತಿ ಮೇರಿ,ಟಿ ಎಂ ಮೋಹನ್,ಇನ್ನಿತರರು ಉಪಸ್ಥಿತರಿದ್ದರು.
22ಸಿಬಿಪಿಎಂ1 ಚಿಕ್ಕಬಳ್ಳಾಪುರ ನಗರದ ಭಾಗವಹಿಸುವುದು ಮುಖ್ಯ ಪ್ರಾಂಶುಪಾಲ ಸಿ .ಎಂ. ಮುನಿಕೃಷ್ಣ
ಚಿಕ್ಕಬಳ್ಳಾಪುರ :ಕ್ರೀಡೆಗಳಲ್ಲಿ ಭಾಗವಹಿಸುವ ಮೂಲಕ ದೈಹಿಕ ಹಾಗೂ ಮಾನಸಿಕವಾಗಿ ಸದೃಢತೆ ಕಾಪಾಡಿಕೊಳ್ಳಬೇಕು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಮಂಜುಳ ತಿಳಿಸಿದರು.
ನಗರದ ಹೊರವಲಯದಲ್ಲಿರುವ ಕೆ ವಿ ಕ್ಯಾಂಪಸ್ ಕ್ರೀಡಾಂಗಣದಲ್ಲಿ ದಿ ಗೋಲ್ಡನ್ ಗ್ಲೀಮ್ಸ್ ಕಾಲೇಜು ವತಿಯಿಂದ ಪದವಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಕ್ರೀಡಾ ಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.
ವಿದ್ಯಾರ್ಥಿಗಳು ಆರೋಗ್ಯಕರ ಜೀವನ ಶೈಲಿಯನ್ನು ಕಾಪಾಡಿಕೊಂಡು ಶಿಕ್ಷಣದಲ್ಲಿ ತೊಡಗಿಸಿಕೊಂಡು ಸಾಧನೆ ಮಾಡಬೇಕು ಎಂದು ಸಲಹೆ ನೀಡಿದರು.
ದಿನ ನಿತ್ಯ ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವುದರಿಂದ ಓದಿನಲ್ಲಿ ಏಕಾಗ್ರತೆ ಸಾಧಿಸಬಹುದು.ಒತ್ತಡವನ್ನು ನಿವಾರಿಸಿಕೊಂಡು ಸಾಧನೆಯ ಹಾದಿಯಲ್ಲಿ ಸಾಗಲು ಸಾಧ್ಯ ಎಂದರು .
ಪ್ರಸ್ತುತ ದಿನಗಳಲ್ಲಿ ಟಿ ವಿ,ಮೊಬೈಲ್ ಫೋನ್ ,ಚಟದಿಂದಾಗಿ ಯುವಕರು ದೈಹಿಕ ಚಟುವಟಿಕೆಗಳಲ್ಲಿ ಭಾಗವಹಿಸುವುದಕ್ಕೆ ನಿರಾಸಕ್ತಿ ತೋರುತ್ತಿದ್ದಾರೆ .
ಇದರಿಂದಾಗಿ ಚಿಕ್ಕ ವಯಸ್ಸಿನಲ್ಲಿಯೇ ನಾನಾ ರೀತಿಯ ರೋಗಗಳಿಗೆ ತುತ್ತಾಗುತ್ತಿದ್ದು, ಮಾನಸಿಕವಾಗಿ ದುರ್ಬಲರಾಗುತ್ತಿದ್ದಾರೆ.30 ರ ವಯೋಮಾನಕ್ಕೆ ಹೃದಯ ಸಂಬಂಧಿ ಕಾಯಿಲೆಯಿಂದ ಅಕಾಲಿಕ ಮರಣಕ್ಕೆ ತುತ್ತಾಗುವುದು ಸಾಮಾನ್ಯವಾಗಿಬಿಟ್ಟಿದೆ. ಇದು ಒಳ್ಳೆಯ ಬೆಳವಣಿಗೆ ಅಲ್ಲ ಎಂದು ಕಳವಳ ವ್ಯಕ್ತಪಡಿಸಿದರು.
ಉತ್ತಮ ಆರೋಗ್ಯ ಹೊಂದಿ ಆರೋಗ್ಯಕರ ಜೀವನ ಸಾಗಿಸಲು ಜಂಕ್ ಫುಡ್ ನಿಂದು ದೂರವಿರಬೇಕು.ತಂಬಾಕು ಸೇವನೆ ಮಾಡಬಾರದು,ಪೌಷ್ಟಿಕ ಆಹಾರ ಜತೆಗೆ ದೈಹಿಕ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಇದೇ ವೇಳೆ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.
ಕೆ ವಿ ದೈಹಿಕ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಆರ್ ವೆಂಕಟೇಶ್ ಮಾತನಾಡಿ ಕ್ರೀಡೆಗಳಲ್ಲಿ ಭಾಗವಹಿಸುವಿಕೆ ಕೇವಲ ಒಂದು ದಿನಕ್ಕೆ ಸೀಮಿತವಾಗಬಾರದು. ಇದನ್ನು ನಿರಂತರ ಅಭ್ಯಾಸವಾಗಿಸಿಕೊಳ್ಳಬೇಕು. ಇದಲ್ಲದೆ ಕ್ರೀಡಾಪಟುಗಳು ಸೋಲು ಗೆಲುವಿನ ಬಗ್ಗೆ ಯೋಚಿಸದೆ ಕ್ರೀಡೆಗಳಲ್ಲಿ ಭಾಗವಹಿಸುವ ಮೂಲಕ ದೈಹಿಕವಾಗಿ ಮಾನಸಿಕವಾಗಿ ಸದೃಢವಾಗಬೇಕು ಎಂದರು.ಇನ್ನು ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರ ತರುವ ಎಲ್ಲ ಪ್ರಯತ್ನ ಕಾಲೇಜಿನ ಆಡಳಿತ ಮಂಡಳಿ ಮಾಡಿದ್ದು ಅವರ ಈ ಕಾರ್ಯ ಶ್ಲಾಘನೀಯ ಎಂದರು.