Friday, 10th January 2025

Chikkaballapur News: ಜ್ಞಾನವೃದ್ಧಿಗೆ ಪ್ರತಿಭಾ ಪರೀಕ್ಷೆ ಸಹಕಾರಿ: ಬ್ಲೂಮ್ಸ್ ಉಪ ಪ್ರಾಂಶುಪಾಲ ಗೋವಿಂದ ರಾಜು

ಬಾಗೇಪಲ್ಲಿ: ಮಕ್ಕಳಲ್ಲಿ ಹುದುಗಿರುವ ಪ್ರತಿಭೆ ಅರಳಲು  ಪ್ರತಿಭಾ ಪರೀಕ್ಷೆಗಳು ಸಹಕಾರಿಯಾಗಿವೆ. ಇದರಿಂದ ವಿದ್ಯಾರ್ಥಿಗಳ ಬರವಣಿಗೆ ಶೈಲಿ, ಜ್ಞಾನ ವೃದ್ಧಿಯಾಗುತ್ತದೆ ಎಂದು ಪಟ್ಟಣದ ಬ್ಲೂಮ್ಸ್ ಅಕಾಡೆಮಿ ಪದವಿ ಪೂರ್ವ ಕಾಲೇಜಿನ ಉಪ ಪ್ರಾಂಶುಪಾಲ ಗೋವಿಂದ ರಾಜು  ತಿಳಿಸಿದರು.

ಬಾಗೇಪಲ್ಲಿ ತಾಲ್ಲೂಕು ಕಸಬಾ ಹೋಬಳಿ ಘಂಟಂವಾರಿಪಲ್ಲಿ ಸರ್ಕಾರಿ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ಪ್ರತಿಭಾ ಪರೀಕ್ಷೆಯಲ್ಲಿ ಅತ್ಯುನ್ನತ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಹಾಗೂ ಪದಕ ವಿತರಿಸಲಾಯಿತು.

ಪಟ್ಟಣದ ಬ್ಲಮ್ಸ್ ಪದವಿ ಪೂರ್ವ ಕಾಲೇಜಿನಲ್ಲಿ ಮಂಡಳಿ ಮತ್ತು ಉಪನ್ಯಾಸಕರ ಸಹಯೋಗದಲ್ಲಿ ಹತ್ತನೇ ತರಗತಿ ಮಕ್ಕಳಿಗಾಗಿ ಹಮ್ಮಿಕೊಂಡಿದ್ದ ಪ್ರತಿಭಾ ಪರೀಕ್ಷೆ”ಯಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಹಾಗೂ ಪದಕ ವಿತರಣೆ ಮಾಡಿ ಮಾತನಾಡಿದ ಅವರು, ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆ ಹಾಗೂ ಮುಂದಿನ ಮಾರ್ಚ್ ತಿಂಗಳಲ್ಲಿ ನಡೆಯುವ ಎಸ.ಎಸ.ಎಲ್.ಸಿ ಪರೀಕ್ಷೆ ಧೈರ್ಯದಿಂದ ಎದುರಿಸಲು “ಪ್ರತಿಭಾ ಪರೀಕ್ಷೆ” ನಡೆಸುವುದರಿಂದ ಜ್ಞಾನ ವೃದ್ಧಿಗೆ ಅನುಕೂಲವಾಗುತ್ತದೆ. ಅಷ್ಟೇ ಅಲ್ಲದೆ ವಿದ್ಯಾರ್ಥಿಗಳಲ್ಲಿ ಸ್ಪರ್ಧೆಯ ಗುಣ ಬೆಳೆಸಲು ಸಹಕಾರಿಯಾಗುತ್ತದೆ ಎಂದು ಹೇಳಿದರು. ಮುಂದಿನ ದಿನಗಳಲ್ಲಿ ನೆಡೆಯುವ ಎಸ್. ಎಸ್.ಎಲ್.ಸಿ ಪರೀಕ್ಷೆ ಹಾಗೂ ವಿಧ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕಿ ಜಿ.ರಾಮಸುಬ್ಬಮ್ಮ ಮಾತನಾಡಿ ಬ್ಲಮ್ಸ್ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ನಮ್ಮ ಶಾಲೆ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ  ಟ್ಯಾಲೆಂಟ್ ಪರೀಕ್ಷೆ ನಡೆಸಿ ಉತ್ತಮ ಅಂಕಗಳನ್ನು ಗಳಿಸಿದ ವಿಧ್ಯಾರ್ಥಿಗಳನ್ನು ಆತ್ಮೀಯವಾಗಿ ಪ್ರಶಸ್ತಿ ಪತ್ರ ಹಾಗೂ ಪದಕ ವಿತರಣೆ ಮಾಡಿದ ಬ್ಲೂಮ್ಸ್ ಅಕಾಡೆಮಿ ಕಾಲೇಜು ಆಡಳಿತ ಮಂಡಳಿಗೆ ಅಭಿನಂದನೆ ಸಲ್ಲಿಸಿ ಮಾತನಾಡಿ ವಿದ್ಯಾರ್ಥಿಗಳಲ್ಲಿ ಶ್ರದ್ಧೆ, ಬದ್ಧತೆ ಹಾಗೂ ಸಮಯಪಾಲನೆ ಇದ್ದರೆ ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯ ಎಂದು ತಿಳಿಸಿದರು.

ವಿದ್ಯಾರ್ಥಿಗಳು ಸಮಯವನ್ನು ವ್ಯರ್ಥ ಮಾಡದೆ ಶಿಸ್ತುಬದ್ಧವಾಗಿ ಓದಿನ ಕಡೆ ಹೆಚ್ಚು ಗಮನ ಹರಿಸಬೇಕು ಹಾಗೂ ಇಂತಹ ಪ್ರತಿಭೆ ಪರೀಕ್ಷೆಗಳಿಂದ ಪ್ರತಿಯೊಂದು ವಿದ್ಯಾರ್ಥಿಗಳಲ್ಲಿ ಸ್ಪರ್ಧೆ ಮನೋಭಾವನೆ ಬೆಳೆಯುತ್ತದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಬ್ಲೂಮ್ಸ್ ಅಕಾಡೆಮಿ ಕಾಲೇಜು ಉಪನ್ಯಾಸಕರು, ಹಿರಿಯ ಶಿಕ್ಷಕಿ ಎನ್.ಎನ್.ಸಂದ್ಯಾ,ದೈಹಿಕ ಶಿಕ್ಷಣದ ಶಿಕ್ಷಕ ಸಿ.ನಾರಾಯಣ ಸ್ವಾಮಿ, ಸಿಬ್ಬಂದಿ ವರ್ಗದ ರಾಮಚಂದ್ರಪ್ಪ ಹಾಗೂ ಶಾಲಾ ಮಕ್ಕಳು ಹಾಜರಿದ್ದರು.

ಇದನ್ನೂ ಓದಿ: chikkaballapurnews