Thursday, 26th December 2024

Chikkaballapur News: ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹುದ್ದೆಯ ಪರೀಕ್ಷೆ ಲೋಪದೋಷವಾಗದಂತೆ ನಡೆಸಲು ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ಸೂಚನೆ

ಚಿಕ್ಕಬಳ್ಳಾಪುರ : ೨೦೨೩-೨೪ನೇ ಸಾಲಿನ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳ ಆಯ್ಕೆಯ ಪೂರ್ವಭಾವಿ ಪರೀಕ್ಷೆಯು ಇದೇ ಡಿಸೆಂಬರ್ ಮಾಹೆಯ ೭ ಮತ್ತು ೮ ರಂದು ರಾಜ್ಯಾದ್ಯಂತ ನಡೆಯುತ್ತಿದ್ದು, ಸದರಿ ಪರೀಕ್ಷೆಯು ಜಿಲ್ಲೆಯಲ್ಲಿ ಯಾವುದೇ ಲೋಪದೋಷವಾಗದಂತೆ ಸುಮಗವಾಗಿ ಮತ್ತು ಸುವ್ಯವಸ್ಥಿತವಾಗಿ ನಡೆಯಬೇಕು ಎಂದು ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ಅವರು ಪರೀಕ್ಷಾ ಕರ್ತವ್ಯಕ್ಕೆ ನೇಮಿಸಲ್ಪಟ್ಟ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಬುಧವಾರ  “ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.  

ಚಿಕ್ಕಬಳ್ಳಾಪುರ ತಾಲ್ಲೂಕು ಕೇಂದ್ರ ಸ್ಥಾನದಲ್ಲಿ ಡಿಸೆಂಬರ್ ೭ ರ ಶನಿವಾರ ದಂದು ೧೦ ಪರೀಕ್ಷಾ ಕೇಂದ್ರಗಳಲ್ಲಿ ೪,೧೪೯ ವಿದ್ಯಾರ್ಥಿಗಳು ಕನ್ನಡ ಭಾಷಾ ಪರೀಕ್ಷೆಯನ್ನು ಬರೆಯಲಿದ್ದಾರೆ ಮತ್ತು ಡಿಸೆಂಬರ್ ೮ರ ಭಾನುವಾರ ದಂದು ೧೭ ಪರೀಕ್ಷಾ ಕೇಂದ್ರಗಳಲ್ಲಿ ೬,೮೪೧ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯನ್ನು ಬರೆಯಲಿದ್ದಾರೆ. ಪರೀಕ್ಷೆ ನಡೆಯುವ ಕೊಠಡಿಗಳಲ್ಲಿ ಬೆಳಕು, ಕುಡಿಯುವ ನೀರು, ಕೊಠಡಿಗಳ ಸ್ವಚ್ಚತೆ, ಗಾಳಿಯ ವ್ಯವಸ್ಥೆ, ಶೌಚಾಲಯ, ಸುಸ್ಥಿಯಲ್ಲಿರುವ ಗಡಿಯಾರ ಸೇರಿದಂತೆ ಮೂಲಭೂತ ಸೌಕರ್ಯಗಳು ವ್ಯವಸ್ಥೆಯಾಗಬೇಕೆಂದು ಅಧಿಕಾರಿಗಳಿಗೆ ತಿಳಿಸಿದರು.

ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹುದ್ದೆಯ ಪರೀಕ್ಷೆ ನಡೆಯಲಿರುವ ಕೇಂದ್ರಗಳಿಗೆ ನೇಮಿಸಲ್ಪಟ್ಟ ಸಂಬAಧಪಟ್ಟ ಅಧಿಕಾರಿಗಳು ಒಂದು ದಿನ ಮುಂಚಿತವಾಗಿ ಭೇಟಿ ನೀಡಿ, ಸಿಸಿ ಕ್ಯಾಮರಾ, ವಿದ್ಯುತ್ ಸಂಪರ್ಕ, ಡೆಸ್ಕ್ ಗಳ ಸುಸ್ಥಿತಿಯಲ್ಲಿರುವಂತೆ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳಬೇಕು. ಪರೀಕ್ಷಾ ದಿನದಂದು ಸಂವೀಕ್ಷಕರಿಗೆ ಪ್ರಶ್ನೆ ಪತ್ರಿಕೆ ಮತ್ತು ಒಎಂಆರ್ ಉತ್ತರ ಹಾಳೆಗಳು ವಿತರಣೆಯಾಗಿರುವುದನ್ನು ಖಾತರಿ ಪಡಿಸಿಕೊಳ್ಳವುದು ಹಾಗೂ ಆಯೋಗವು ನೀಡಲಾದ ಪರೀಕ್ಷೆಗೆ ಸಂಬAಧಿಸಿದ ಸಮಯ ಪಾಲನೆ ಹಾಗೂ ನಿರ್ದೇಶನಗಳನ್ನು ನಿಖರವಾಗಿ ಪಾಲಿಸಬೇಕು. ಪರೀಕ್ಷೆಯನ್ನು ಗೌಪ್ಯತೆಯಿಂದಲೂ, ನಿಯಮಬದ್ಧವಾದ ನಿರ್ವಹಣೆಯಿಂದಲೂ ಕೈಗೊಂಡು ಪರೀಕ್ಷಾ ದಕ್ಷತೆಯನ್ನು ಕಾಪಾಡಬೇಕು ಎಂದರು.

ಪರೀಕ್ಷಾ ದಿನದಂದು ಮಾರ್ಗಾಧಿಕಾರಿಗಳ ತಂಡದ ಬೆಂಗಾವಲಿಗೆ, ಪ್ರತಿ ಪರೀಕ್ಷಾ ಕೇಂದ್ರಕ್ಕೆ ಅವಶ್ಯಕತೆಗೆ ಅನುಗುಣವಾಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆಯನ್ನು ಕಲ್ಪಿಸಬೇಕು ಹಾಗೂ ಪರೀಕ್ಷಾ ಕೇಂದ್ರ ಸುತ್ತಮುತ್ತಲಿನ ೨೦೦ ಮೀಟರ್ ವ್ಯಾಪ್ತಿಯ ಪ್ರದೇಶವನ್ನು ಸಾರ್ವಜನಿಕ ನಿಷೇಧಿತವಾಗಬೇಕು. ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರ ಸುತ್ತ-ಮುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆ ಕ್ರಮವಹಿಸಬೇಕು. ಗುರುತು ಪತ್ತೆ ಹಚ್ಚಲು ಸಾಧ್ಯವಾಗದ ರೀತಿಯಲ್ಲಿ ವಸ್ತç ಧರಿಸಿ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳನ್ನು ಫ್ರಿಸ್ಕಿಂಗ್ ಮಾಡಿಸತಕ್ಕದ್ದು, ಹಾಗೂ ಪರೀಕ್ಷಾರ್ಥಿಗಳು ಕೊಠಡಿಯೊಳಗೆ ಮೊಬೈಲ್ ಫೋನ್ ಇನ್ನಿತರ ಎಲೆಕ್ಟ್ರಾನಿಕ್ ಉಪಕರಣಗಳನ್ನು ತೆಗೆದುಕೊಂಡು ಬರಬಾರದು, ಪ್ರವೇಶ ಪತ್ರದಲ್ಲಿ ನೀಡಿರುವ ಸೂಚನೆಗಳನ್ನು ಪಾಲಿಸಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್ ಜಿ.ಟಿ ನಿಟ್ಟಾಲಿ, ಅಪರ ಜಿಲ್ಲಾಧಿಕಾರಿ ಡಾ. ಎನ್ ಭಾಸ್ಕರ್, ಉಪ ಪೊಲೀಸ್ ವರಿಷ್ಟಾಧಿಕಾರಿ ಶಿವ ಕುಮಾರ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮರಿಸ್ವಾಮಿ, ವಿಷಯ ಪರೀವಿಕ್ಷಕರಾದ ಜಮೀರ್ ಪಾಷ, ಎಲ್ಲಾ ಕಾಲೇಜುಗಳ ಪ್ರಾಂಶುಪಾಲರು, ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.