ಚಿಕ್ಕಬಳ್ಳಾಪುರ: ಫೆಬ್ರವರಿ-೨೦೨೩ ರ ಮಾಹೆಯಲ್ಲಿ ಸಾರ್ವಜನಿಕ ವಿತರಣಾ ಪದ್ದತಿಯಡಿ ಅಂತ್ಯೋದಯ, ಆದ್ಯತಾ ಮತ್ತು ಆದ್ಯತೇತರ ಪಡಿತರ ಚೀಟಿಗಳಿಗೆ ವಿತರಣೆಯಾಗುವ ವಿವರಗಳ ಕುರಿತು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕಿ ಪಿ. ಸವಿತ ತಿಳಿಸಿದ್ದಾರೆ.
ಅಂತ್ಯೋದಯ (ಎಎವೈ) ಪಡಿತರ ಚೀಟಿಗೆ ಒಂದು ತಿಂಗಳಿಗೆ ೩೫ ಕೆ.ಜಿ ಅಕ್ಕಿಯನ್ನು ಉಚಿತವಾಗಿ ವಿತರಿಸಲಾಗುವುದು. ರಾಗಿ ಮತ್ತು ಗೋಧಿ ನೀಡುತ್ತಿಲ್ಲ.
ಬಿ.ಪಿ.ಎಲ್ ಪಡಿತರ ಚೀಟಿಯ ಪ್ರತಿ ಸದಸ್ಯನಿಗೆ ಕೇಂದ್ರ ಸರ್ಕಾರದಿಂದ ೫ ಕೆ.ಜಿ, ರಾಜ್ಯ ಸರ್ಕಾರದಿಂದ ಜನವರಿ ಮಾಹೆಯ ೧ ಕೆ.ಜಿ. ಮತ್ತು ಫೆಬ್ರವರಿ ಮಾಹೆಯ ೧ ಕೆ.ಜಿ. ಅಕ್ಕಿ ಸೇರಿ ಒಟ್ಟು ೭ ಕೆ.ಜಿ ಅಕ್ಕಿಯನ್ನು ಉಚಿತವಾಗಿ ವಿತರಿಸಲಾಗುವುದು. ರಾಗಿ ಮತ್ತು ಗೋಧಿ ನೀಡುತ್ತಿಲ್ಲ.
ಎಪಿಎಲ್ Wiಟಟiಟಿgಟಿess ನೀಡಿರುವ ಪಡಿತರ ಚೀಟಿಯ ಏಕ ಸದಸ್ಯನನ್ನು ಹೊಂದಿ ರುವ ಪಡಿತರ ಚೀಟಿಗೆ ಒಂದು ತಿಂಗಳಿಗೆ ಪ್ರತಿ ಕೆ.ಜಿಗೆ ೧೫ ರೂಗಳಂತೆ ೫ ಕೆ.ಜಿ. ಹಾಗೂ ಎರಡು/ಎರಡಕ್ಕಿಂತ ಹೆಚ್ಚು ಸದಸ್ಯರನ್ನು ಹೊಂದಿರುವ ಪಡಿತರ ಚೀಟಿಗೆ ೧೦ ಕೆ.ಜಿ. ಅಕ್ಕಿ ವಿತರಿಸಲಾಗುವುದು. ರಾಗಿ ಮತ್ತು ಗೋಧಿ ನೀಡುತ್ತಿಲ್ಲ.
ಪೋರ್ಟಬಿಲಿಟಿ: ಅಂತರ್ ರಾಜ್ಯ/ಅಂತರ್ ಜಿಲ್ಲೆ ಪೋರ್ಟಬಿಲಿಟಿ ಜಾರಿಯಲ್ಲಿರುವುದರಿಂದ ಯಾವುದೇ ವರ್ಗದ ಪಡಿತರ ಚೀಟಿದಾರರು ಯಾವುದೇ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
………….
ಇಂದು ಸಖಿ ಒನ್ ಸ್ಟಾಪ್ ಸೆಂಟರ್ ಮತ್ತು ಸರ್ಕಾರಿ ಬಾಲಕಿಯರ ಬಾಲಮಂದಿರ ಕಟ್ಟಡಗಳ ಉದ್ಘಾಟನಾ ಸಮಾರಂಭ
ಚಿಕ್ಕಬಳ್ಳಾಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚಿಕ್ಕಬಳ್ಳಾಪುರ ಇವರ ಸಂಯುಕ್ತಾಶ್ರಯದಲ್ಲಿ ಸಖಿ ಒನ್ ಸ್ಟಾಪ್ ಸೆಂಟರ್ ಮತ್ತು ರ‍್ಕಾರಿ ಬಾಲಕಿಯರ ಬಾಲಮಂದಿರ ಕಟ್ಟಡಗಳ ಉದ್ಘಾಟನಾ ಸಮಾರಂಭವನ್ನು ಫೆಬ್ರವರಿ ೦೮ ರಂದು ಬೆಳಿಗ್ಗೆ ೧೧:೦ ಗಂಟೆಗೆ ಸಖಿ ಒನ್ ಸ್ಟಾಪ್ ಸೆಂಟರ್ ಹಳೆಯ ಜಿಲ್ಲಾ ಆಸ್ಪತ್ರೆ ಆವರಣ ದಲ್ಲಿ ಹಾಗೂ ರ‍್ಕಾರಿ ಬಾಲಕಿಯರ ಬಾಲಮಂದಿರ ಡ್ರೀಮ್ ಸಿಟಿ ಲೇಔಟ್ ನಲ್ಲಿ ಹಮ್ಮಿಕೊಳ್ಳಲಾಗಿದೆ.
ಉದ್ಘಾಟನೆಯನ್ನು ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ನಾಗರಾಜ್ (ಎಂ.ಟಿ.ಬಿ) ನೆವೇರಿಸಲಿದ್ದಾರೆ.ಅಧ್ಯಕ್ಷತೆಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಕೆ.ಸುಧಾಕರ್ ವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Read E-Paper click here