Sunday, 24th September 2023

ಕಾಂಗ್ರೆಸ್ ಪಕ್ಷ ತೊರೆದ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ

ಚಿಕ್ಕಮಗಳೂರು: ಜಿಲ್ಲೆಯ ಎನ್.ಆರ್​.ಪುರ ತಾಲೂಕಿನ ನಾಗಲಾಪುರ ಸಮೀಪದ ರಾವುರು ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಪಕ್ಷ ಸೇರ್ಪಡೆಯಾಗಿದ್ದ ಕಾರ್ಯ ಕರ್ತನ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮಾರಣಾಂತಿಕ ಹಲ್ಲೆ ನಡೆಸಲಾಗಿದೆ.

ಶಿವು ಹಲ್ಲೆಗೊಳಗಾಗಿ ಆಸ್ಪತ್ರೆಗೆ ದಾಖಲಾದ ಬಿಜೆಪಿ ಕಾರ್ಯಕರ್ತನಾಗಿದ್ದು, ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡ ಹಿಂಬಾಲಕರು ಹಲ್ಲೆ ನಡೆಸಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.

ಕಾಂಗ್ರೆಸ್​ ಪಕ್ಷದಲ್ಲಿ ಸಕ್ರಿಯ ಕಾರ್ಯಕರ್ತನಾಗಿದ್ದ ಶಿವು ಕಳೆದ ತಿಂಗಳು ಪಕ್ಷ ತೊರೆದು ಬಿಜೆಪಿಗೆ ಸೇರ್ಪಡೆಗೊಂಡಿದ್ದರು. ಇದು ಶಾಸಕ ಟಿ.ಡಿ.ರಾಜೇಗೌಡ ಅವರ ಬೆಂಬಲಿಗರ ಕಣ್ಣು ಕೆಂಪಗಾಗಿಸಿದ್ದವು. ಬಿಜೆಪಿ ಸೇರಿದ ವಿಚಾರವಾಗಿ ಶಿವು ಜೊತೆ ಶಾಸಕರ ಹಿಂಬಾಲ ಕರು ಗಲಾಟೆ ಕೂಡ ಮಾಡಿದ್ದರು. ಕಿಡಿಗೇಡಿಗಳು ಮನೆಗೆ ನುಗ್ಗಿ ಶಿವು ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿ ಯಾಗಿದ್ದಾರೆ. ಗಾಯಾಳು ಶಿವುನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಪ್ರಕರಣ ಸಂಬಂಧ ನಾಲ್ವರು ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಎನ್​.ಆರ್​ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!