ಹಾಸನ: ಮಾಜಿ ಸಚಿವ, ಜೆಡಿಎಸ್ ನಾಯಕ ಎಚ್. ಡಿ. ರೇವಣ್ಣ ಪುತ್ರ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಬಂಧಿಸಲಾಗಿದೆ. ಸೂರಜ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತನಿಖೆಯನ್ನು ಕರ್ನಾಟಕ ಸರ್ಕಾರ ಸಿಐಡಿಗೆ ವಹಿಸಿದೆ.
ಭಾನುವಾರ ಹಾಸನದ ಹೊಳೆನರಸೀಪುರದ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದ್ದ ಪ್ರರಕಣದ ಸಂಬಂಧ ಸೂರಜ್ ರೇವಣ್ಣ ಬಂಧಿಸಲಾಗಿದೆ.
ಸದ್ಯ ಆರೋಪಿಯ ವೈದ್ಯಕೀಯ ಪರೀಕ್ಷೆ ಹಾಸನದ ಹಿಮ್ಸ್ ಆಸ್ಪತ್ರೆಯಲ್ಲಿ ನಡೆಯುತ್ತಿದೆ.
ಈ ನಡುವೆ ಕರ್ನಾಟಕ ಸರ್ಕಾರ ಸೂರಜ್ ರೇವಣ್ಣ ವಿರುದ್ಧದ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ಆದೇಶಿಸಿದೆ. ಸೂರಜ್ ರೇವಣ್ಣ ವಿರುದ್ಧ ಐಪಿಸಿ ಸೆಕ್ಷನ್ 377, 342, 506 ಅಡಿ ಕೇಸ್ ದಾಖಲಾಗಿದ್ದು, ಸದ್ಯ ಆರೋಪಿ ಹಾಸನ ಪೊಲೀಸರ ವಶದಲ್ಲಿದ್ದಾರೆ.
ಜೆಡಿಎಸ್ ನಾಯಕ, ಎಂಎಲ್‌ಸಿ ಸೂರಜ್ ರೇವಣ್ಣ ವಿರುದ್ಧದ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸುವ ಕುರಿತು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಆರ್. ಹಿತೇಂದ್ರ ಆದೇಶ ಹೊರಡಿಸಿದ್ದಾರೆ.