ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಹಿನ್ನೆಲೆಯಲ್ಲಿ ನಗರದ ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತದಲ್ಲಿನ ಸರ್ದಾರ್ ಪಟೇಲರ ಪುತ್ಥಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಲಾರ್ಪಣೆ ಮಾಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಉತ್ಸವಕ್ಕೆ ಸ್ವಾಗತಿಸಲು ಸರ್ದಾರ್ ಪಟೇಲ್ ಅವರ ವೃತ್ತದಲ್ಲಿ ಗೊಂದಳಿ, ಮೇರು ಕೋಲಾಟ, ಡೊಳ್ಳು ಕುಣಿತ, ಹಲಗಿ ವಾದ್ಯ ಮತ್ತು ಹೆಜ್ಜೆ ಮೇಳದ ನೃತ್ಯ ಸೇರಿ ವಿವಿಧ ಕಲಾ ತಂಡಗಳು ಉತ್ಸವಕ್ಕೆ ಮೆರುಗು ನೀಡಿತು.
ಈ ಸಂದರ್ಭದಲ್ಲಿ ಸಚಿವರಾದ ಕೆಜೆ ಜಾರ್ಜ್, ಭೈರತಿ ಸುರೇಶ್, ಮುನಿಯಪ್ಪ, ಪ್ರಿಯಾಂಕ್ ಖರ್ಗೆ, ಕೆಕೆಆರಡಿಬಿ ಅಧ್ಯಕ್ಷ ಡಾ.ಅಜಯ್ ಸಿಂಗ್, ಮುಖ್ಯಮಂತ್ರಿ ಸಲಹೆಗಾರ,ಶಾಸಕ ಬಿ.ಆರ್.ಪಾಟೀಲ್, ಶಾಸಕರಾದ ಎಂ.ವೈ.ಪಾಟೀಲ್, ವಿಧಾನ ಪರಿಷತ್ ಸದಸ್ಯ ಶಶೀಲ್ ನಮೋಶಿ, ಕಲಬುರಗಿ ಲೋಕಸಭಾ ಸಂಸದ ರಾಧಾಕೃಷ್ಣ ದೊಡ್ಡಮನಿ, ಜಿಲ್ಲಾಧಿ ಕಾರಿ ಫೌಜೀಯಾ ತರನ್ನುಮ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.
ಇದನ್ನೂ ಓದಿ: Kalaburagi: ಸಂಪುಟದ ಮೇಲೆ ಗರಿಗೆದರಿದ ಶ್ರೀಸಾಮಾನ್ಯ ನಿರೀಕ್ಷೆ !