Saturday, 27th July 2024

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನ.17ರಿಂದ ಪದವಿ ತರಗತಿಗಳು ಆರಂಭ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿ ತರಗತಿಗಳು ಇದೇ ತಿಂಗಳ ನ.17ರಿಂದ ಆರಂಭಗೊಳ್ಳಲಿವೆ ಎಂದು ದ.ಕ ಜಿಲ್ಲಾ ಅಪರ ಜಿಲ್ಲಾಧಿಕಾರಿ ಎಂ.ಜೆ ರೂಪ ತಿಳಿಸಿದರು.

ಕಚೇರಿ ಸಭಾಂಗಣದಲ್ಲಿ ಕೋವಿಡ್‌-19 ಹಿನ್ನಲೆಯಲ್ಲಿ ವಿಶ್ವವಿದ್ಯಾಲಯ, ಖಾಸಗಿ ವಿಶ್ವವಿದ್ಯಾಲಯ, ಸರ್ಕಾರಿ, ತಾಂತ್ರಿಕ, ಡಿಪ್ಲೋಮ, ಅನುದಾನ, ಅನುದಾನ ರಹಿತ ಕಾಲೇಜುಗಳ ಶೈಕ್ಷಣಿಕ ಚಟುವಟಿಕೆಗಳನ್ನು ಪ್ರಾರಂಭಿಸಲು ಪ್ರಾಮಾಣಿತ ವಿಧಾನ-ಮಾರ್ಗಸೂಚಿಯ ಕುರಿತ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕಾಲೇಜು ಪ್ರವೇಶಕ್ಕೆ ವಿದ್ಯಾರ್ಥಿಗಳು ಹಾಜರಾಗಲು ವಿದ್ಯಾರ್ಥಿಗಳ ಗುಂಪನ್ನು ವಿಂಗಡಣೆ ಮಾಡಿ ದಿನ ನಿತ್ಯ ಶೇ.50 ವಿದ್ಯಾರ್ಥಿ ಗಳಿಗೆ ಅವಕಾಶ ಹಾಗೂ ಉಳಿದ ವಿದ್ಯಾರ್ಥಿಗಳಿಗೆ ಆನ್‌ಲೈನ್‌ ತರಗತಿಗಳನ್ನು ನಡೆಸುವಂತೆ ಸೂಚಿಸಿದರು.

ಬೋಧಕರು, ವಿದ್ಯಾರ್ಥಿಗಳು ಹಾಗೂ ಇತರೆ ಸಿಬ್ಬಂದಿಗಳು ಕಡ್ಡಾಯವಾಗಿ 3 ದಿನಗಳ ಮುಂಚಿತವಾಗಿ ಕೋವಿಡ್‌-19 ಪರೀಕ್ಷೆ ಮಾಡಿಸಿ, ಪರೀಕ್ಷಾ ವರದಿ ನೆಗೆಟಿವ್‌ ಇದ್ದಲ್ಲಿ ಮಾತ್ರ ತರಗತಿಗೆ ಹಾಜರಾಗಬೇಕು. ಆರೋಗ್ಯ ಸಮಸ್ಯೆಗಳು ಕಂಡು ಬಂದಲ್ಲಿ 1077ನ್ನು ಸಂಪರ್ಕಿಸಬಹುದು ಎಂದರು.

ತರಗತಿಗಳಿಗೆ ಕಡ್ಡಾಯವಾಗಿ ಹಾಜರಾಗಬೇಕಾಗಿಲ್ಲ. ಹಾಜರಾಗಲು ಇಚ್ಛಿಸದ ವಿದ್ಯಾರ್ಥಿಗಳು ಆನ್‌ಲೈನ್‌ ತರಗತಿಗಳಲ್ಲಿ ಪಾಲ್ಗೊಳ್ಳಬಹುದಾಗಿದೆ. ಕಟ್ಟಡ, ಮುಖ್ಯದ್ವಾರ, ಶೌಚಾಲಯ ಹಾಗೂ ಎಲ್ಲ ಕೊಠಡಿ, ಪಿಠೋಪಕರಣ ಮತ್ತು ಪಠ್ಯ ಸಾಮಗ್ರಿ ಗಳನ್ನು ದಿನನಿತ್ಯ ಸ್ಯಾನಿಟೈಸ್‌ ಹಾಗೂ ಪೆನ್, ಬುಕ್, ಲ್ಯಾಪ್ ಟಾಪ್ ಹಂಚಿಕೊಳ್ಳುವಂತಿಲ್ಲ ಎಂದು ಅವರು ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!