ಚಿಕ್ಕನಾಯಕನಹಳ್ಳಿ: ಸಂವಿಧಾನದ ಆದರ್ಶ, ತತ್ವಗಳನ್ನು ಯುವಜನತೆ ಅಳವಡಿಸಿಕೊಳ್ಳಬೇಕು ಎಂದು ಪ್ರಾಂಶುಪಾಲ ಡಾ. ಸಿ.ಜಿ. ಶಿವಕುಮಾರ್ ಹೇಳಿದರು.
ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ರಾಜ್ಯಶಾಸ್ತ್ರ ವಿಭಾಗ ಹಾಗೂ ಕಾಲೇಜು ಶಿಕ್ಷಣ ಇಲಾಖೆ ಸಹಯೋಗ ದಲ್ಲಿ ಆಯೋಜಿಸಿದ್ದ ಸಂವಿಧಾನ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಭಾರತ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಅಳವಡಿಸಿ ಕೊಂಡಿದೆ. ಎಲ್ಲ ವರ್ಗದವರಿಗೂ ಅನ್ವಯವಾಗುವಂತಹ ಸಂವಿಧಾನವನ್ನು ಕೊಟ್ಟ ಕೀರ್ತಿ ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ಸಲ್ಲತ್ತದೆ ಎಂದು ತಿಳಿಸಿದರು.
ಶರಣ ಸಾಹಿತ್ಯ ಪರಿಷತ್ತಿನ ತಾಲೂಕು ಅಧ್ಯಕ್ಷ ಪ್ರೊ.ಎಚ್.ಎಸ್. ಬಸವರಾಜು ಹೊನ್ನೇಬಾಗಿ ಮಾತನಾಡಿ, ಸಮಾಜದಲ್ಲಿ ನಡೆಯುವ ಅನ್ಯಾಯ, ದೌರ್ಜನ್ಯಗಳನ್ನು ಯುವಕರು ಪ್ರಶ್ನಿಸಬೇಕು ಎಂದರು.
ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪಿ. ಅರುಣಕುಮಾರ ಮಾತನಾಡಿ, ಸಂವಿಧಾನದ ಬಗ್ಗೆ ತಿಳಿದುಕೊಳ್ಳುವುದು ಪ್ರತಿಯೊಬ್ಬ ಪ್ರಜೆಯ ಆದ್ಯ ಕರ್ತವ್ಯವಾಗಿದೆ ಎಂದು ಹೇಳಿದರು.
ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪಿ. ಅರುಣಕುಮಾರ್ ಮಾತನಾಡಿದರು. ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಪ್ರೊ. ನಾಗರಾಜಕುಮಾರ್ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರಿಗೆ ಸಂವಿಧಾನದ ಪ್ರಸ್ತಾವನೆ ಬೋಧಿಸಿದರು.
ವಿದ್ಯಾರ್ಥಿಗಳಿಗೆ “ಜನರ ಆಶೋತ್ತರಗಳನ್ನು ಈಡೇರಿಸುವಲ್ಲಿ ಸಂವಿಧಾನದ ಪಾತ್ರ”, ನಿರೀಕ್ಷೆಗಳು ಮತ್ತು ಸವಾಲುಗಳು” ಕುರಿತು ಪ್ರಬಂಧ ಸ್ಪರ್ಧೆ ಆಯೋಜಿಸಲಾಗಿತ್ತು. ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಐಕ್ಯುಎಸಿ ಸಂಚಾಲಕ ಜಿ. ಪ್ರದೀಪ್, ಪ್ರಾಧ್ಯಾಪಕರಾದ ಡಾ. ಶ್ರೀನಿವಾಸಪ್ಪ, ಡಾ.ಜ್ಞಾನದೇವ, ಡಾ. ಗೋವಿಂದರಾಯ, ಡಾ. ಶೇಖರ್, ಮಮತಾ, ನಾಗರಾಜ್, ಸಿದ್ದರಾ ಮೇಶ್ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.