Thursday, 12th December 2024

ನೂರಕ್ಕೂ ಹೆಚ್ಚು ಅಭ್ಯರ್ಥಿಗಳ ಮೊದಲ ಪಟ್ಟಿ ನಾಳೆ ಬಿಡುಗಡೆ: ಡಿಕೆಶಿ

ಮಂಡ್ಯ: ಕಾಂಗ್ರೆಸ್‌ ಪಕ್ಷದ ನೂರಕ್ಕೂ ಹೆಚ್ಚು ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ನಾಳೆ ಬಿಡುಗಡೆ ಮಾಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದರು.

ಅವರು ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಮಠಕ್ಕೆ ತೆರಳಿ ಮಂಗಳವಾರ ಕಾಲ ಭೈರವೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡುತ್ತ ಈ ಬಗ್ಗೆ ತಿಳಿಸಿದ್ದರು. ಇದೇ ವೇಳೆ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕರ್ನಾ ಟಕಕ್ಕೆ ಭೇಟಿ ನೀಡಿ ದೆಹಲಿಗೆ ವಾಪಸ್ ಆದ ಬಳಿಕ ಅಭ್ಯರ್ಥೀಗಳ ಪಟ್ಟಿಯನ್ನು ಬಿಡುಗಡೆ ಮಡಲಾಗುವುದು ಎಂದು ತಿಳಿಸಲಾಗಿತ್ತು, ಅದರಂತೆ ನಾಳೆ ಯುಗಾದಿ ಹಬ್ಬದಂದು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಡಿಕೆಶಿ ತಿಳಿಸಿದರು.

ಸಿದ್ದರಾಮಯ್ಯ ಅವರು ಬಯಸಿದ ಕ್ಷೇತ್ರದಲ್ಲಿ ಸ್ಪರ್ಧೆಗೆ ಅವಕಾಶವಿದೆ.

ಕೋಲಾರ, ವರುಣ, ಬಾದಾಮಿ, ಚಾಮುಂಡೇಶ್ವರಿ ಯಾವುದಾದರೂ ಕ್ಷೇತ್ರವನ್ನು ಆಯ್ಕೆ ಮಾಡಲಿ. ಅವರ ಅನುಕೂಲ ನೋಡಿಕೊಂಡು ತೀರ್ಮಾನ ಮಾಡಲಿ. ಎಲ್ಲಿ ತೀರ್ಮಾನ ಮಾಡ್ತಾರೋ ಅಲ್ಲೇ ಅವಕಾಶ ಕೊಡ್ತೀವಿ ಎಂದರು.