Wednesday, 11th December 2024

ಆ.22ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ

ಬೆಂಗಳೂರು: ಆಗಸ್ಟ್.22ರಂದು ಮಹತ್ವದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ಸಿಎಂ ಸಿದ್ಧರಾಮಯ್ಯ ಕರೆದಿದ್ದಾರೆ.

ಮುಡಾ ಹಗರಣದಲ್ಲಿ ಸಿಎಂ ಸಿದ್ಧರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದು, ಇದನ್ನು ಖಂಡಿಸುವ ನಿರ್ಧಾರವನ್ನು ಈಗಾಗಲೇ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ. ಈ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಆ.22ರ ಗುರುವಾರ ಸಂಜೆ.4 ಗಂಟೆಗೆ ವಿಧಾನಸೌಧದ ಸಮ್ಮೇಳನಾ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ತಿಳಿಸಿದೆ.

ಇನ್ನೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ಆ.22ರಂದು ನಡೆಸಿದ ಬಳಿಕ, ಶಾಸಕರ ಅಭಿಪ್ರಾಯವನ್ನು ಪಡೆದು, ಆ.23ರಂದು ದೆಹಲಿಗೆ ಸಿಎಂ ಸಿದ್ಧರಾಮಯ್ಯ ತೆರಳಲಿದ್ದಾರೆ. ದೆಹಲಿಯಲ್ಲಿ ಕಾಂಗ್ರೆಸ್ ನಾಯಕರನ್ನು ಭೇಟಿಯಾಗಲಿರುವ ಅವರು, ರಾಜ್ಯದ ಪ್ರಸ್ತುತ ರಾಜಕೀಯ ವಿದ್ಯಾಮಾನಗಳ ಬಗ್ಗೆ ಮಾಹಿತಿಯನ್ನು ನೀಡಲಿದ್ದಾರೆ.