Sunday, 8th September 2024

ಮಹಾಪರಿನಿರ್ವಾಣ ದಿನ: ಸಂವಿಧಾನ ಶಿಲ್ಪಿಗೆ ಜಿಲ್ಲಾಡಳಿತದಿಂದ ಗೌರವ ಸಲ್ಲಿಕೆ

ಕಲಬುರಗಿ: ಮಹಪರಿನಿರ್ವಾಣ ದಿನ ಹಿನ್ನೆಲೆಯಲ್ಲಿ ಮಂಗಳವಾರ ಕಲಬುರಗಿ ನಗರದ ಜಗತ್ ವೃತ್ತದಲ್ಲಿರುವ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಜಿಲ್ಲಾಡಳಿತದಿಂದ ಮಾಲಾರ್ಪಣೆ ಮಾಡುವ ಮೂಲಕ ಗೌರವ ಸಲ್ಲಿಸಲಾ ಯಿತು.

ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಇಶಾ ಪಂತ್, ಡಿ.ಸಿ.ಪಿ ಅಡ್ಡೂರು ಶ್ರೀನಿವಾಸಲು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ್ ಡಿ. ಬದೋಲೆ ಆದಿಯಾಗಿ ಎಲ್ಲರೂ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.

66ನೇ ಮಹಾಪರಿನಿರ್ವಾಣ ದಿನದ ಅಂಗವಾಗಿ ಕರ್ನಾಟಕ ರಾಜ್ಯ ಸರ್ಕಾರಿ, ಅರೆ ಸರಕಾರಿ, ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡ ನೌಕರರ ಸಂಘ, ಕಲಬುರಗಿ ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಆಯೋ ಜಿಸಿದ ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್, ದೇಶಕ್ಕೆ ಅಂಬೇಡ್ಕರ್ ಕೊಡುಗೆ ಅನನ್ಯ. ಭಾವಿ ಪ್ರಜೆಗಳಾದ ಮಕ್ಕಳಲ್ಲಿ ಅಂಬೇಡ್ಕರ್ ಅವರ ಆದರ್ಶ ತತ್ವಗಳನ್ನು ಬಿತ್ತಬೇಕಿದೆ. ಮಕ್ಕಳು ಅಂಬೇಡ್ಕರ್ ಅವರ ಕುರಿತು ಹೆಚ್ಚಿನ ಅಧ್ಯಯನ ಮಾಡಬೇಕು ಮತ್ತು ಅವರ ಆದರ್ಶ ಗುಣಗಳನ್ನು ಬದುಕಿನಲ್ಲಿ ಅಳವಡಿಸಿ ಕೊಳ್ಳಬೇಕು ಎಂದ ಕರೆ ನೀಡಿದರು.

ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯ ಅಧೀಕ್ಷಕ ಅಭಿಯಂತ ಡಾ. ಸುರೇಶ ಶರ್ಮಾ, ಕಲಬುರಗಿ ಸರಕಾರಿ ಮಹಾವಿದ್ಯಾಲಯ ಪ್ರಾಂಶುಪಾಲ ಡಾ. ವಿಜಯಕುಮಾರ ಸಾಲಿಮನಿ, ಡಿ.ಹೆಚ್.ಓ. ಡಾ.ರಾಜಶೇಖರ ಮಾಲಿ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪಿ.ಶುಭ, ಎ.ಸಿ.-ಎಸ್.ಟಿ. ನೌಕರರ ಸಂಘದ ಅಧ್ಯಕ್ಷ ಸೋಮಶೇಖರ ಎಸ್. ಮದನಕರ್, ಪ್ರಧಾನ ಕಾರ್ಯದರ್ಶಿ ಬಾಬು ಎ. ಮೌರ್ಯ, ಜಂಟಿ ಕಾರ್ಯದರ್ಶಿ ವಿಜಯಕುಮಾರ ನಾಗೂರ,  ಖಜಾಂಚಿ ವಿಠ್ಠಲ ಗೋಳಾ, ಸಂಜಯ ಕುಮಾರ ಸೇರಿದಂತೆ ವಿವಿಧ ಸಮಾದ ಮುಖಂಡರು, ನೌಕರರು, ಸಂಘಟನೆಗಳ ಪದಾಧಿಕಾರಿಗಳು ಸಂವಿಧಾನ ಪಿತಾಮಹನಿಗೆ ಗೌರವ ಸಲ್ಲಿಕೆಯಲ್ಲಿ ಭಾಗಿಯಾಗಿದ್ದರು.

ಇದಕ್ಕೂ ಮುನ್ನ ಸಿದ್ದಾರ್ಥ ವಿಹಾರ ಟ್ರಸ್ಟಿನ ಪೂಜ್ಯ ಬೌದ್ಧ ಬಿಕ್ಕು ಸಂಘಾನಂದ ಭಂತೇಜಿ ನೇತೃತ್ವದಲ್ಲಿ ಡಾ.ಬಿ.ಆರ್. ಅಂಬೇ ಡ್ಕರ್ ಪ್ರತಿಮೆಗೆ ಬುದ್ಧ ವಂದನೆ ಸಲ್ಲಿಸಲಾಯಿತು. ಡಿ.ಸಿ. ಯಶವಂತ ವಿ. ಗುರುಕರ್ ಅವರು ಪಂಚಶೀಲ ಮತ್ತು ಎಸ್.ಪಿ. ಇಶಾ ಪಂತ್ ಅವರು ನೀಲಿ ಧ್ವಜಾರೋಹಣ ಮಾಡಿದರು.

error: Content is protected !!