ಬೆಂಗಳೂರು: ರಾಜ್ಯದ ಪರಿಶಿಷ್ಟ ಜಾತಿ, ಪಂಗಡಗಳ ಸಮುದಾಯದವರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಗಿಫ್ಟ್ ನೀಡಲಾಗಿದೆ. ಎಸ್ಸಿ, ಎಸ್ಟಿ ಸಮುದಾಯದ ಜನರಿಗೆ ವಿರಳ ಮತ್ತು ದುಬಾರಿ ವೆಚ್ಚದ ಚಿಕಿತ್ಸೆ ಸೇವೆಗಳನ್ನು ಒದಗಿಸಲು 35 ಕೋಟಿ ರೂ ಗಳ ಕಾರ್ಪಸ್ ಫಂಡ್ ಸ್ಥಾಪಿಸುವುದಾಗಿ ಸಿಎಂ ಸಿದ್ಧರಾಮಯ್ಯ ಘೋಷಣೆ ಮಾಡಿದ್ದಾರೆ.
ಎಸ್ಸಿ, ಎಸ್ಟಿ ಹಾಗೂ ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರ ವಸತಿ ಶಾಲೆಗಳು ಹಾಗೂ ವಿದ್ಯಾರ್ಥಿ ನಿಲಯಗಳ ನಿರ್ಮಾಣ ಕ್ಕಾಗಿ ಒಟ್ಟು 2,710 ಕೋಟಿ ರ ಅನುದಾನ ನೀಡಲಾಗುವುದು ಎಂದರು.
ಸಮಾಜ ಕಲ್ಯಾಣ, ಪರಿಶಿಷ್ಟ ಪಂಗಡಗಳ, ಹಿಂದುಳಿದ ವರ್ಗಗಳ ಮತ್ತು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳು ಹಾಗೂ ವಿದ್ಯಾರ್ಥಿನಿಲಯಗಳ ವಿದ್ಯಾರ್ಥಿಗಳ ಭೋಜನ ಮಾಸಿಕ ಭೋಜನ ವೆಚ್ಚ ತಲಾ 100 ರೂ ಹೆಚ್ಚಳ ಮಾಡಲಾಗುವುದು ಎಂದರು.
ಕ್ರೈಸ್ಟ್ ಅಡಿಯಲ್ಲಿ 638 ಕೋಟಿ ರೂಗಳ ಅಂದಾಡು ವೆಚ್ಚದಲ್ಲಿ ಒಟ್ಟು 29 ವಸತಿ ಶಾಲಾ ಸಂಕೀರ್ಣಗಳ ನಿರ್ಮಾಣ ಮಾಡಲಾಗು ತ್ತದೆ. 20 ಹೋಬಳಿಗಳಲ್ಲಿ ಹೊಸ ವಸತಿ ಶಾಲೆಗಳನ್ನು ಪ್ರಾರಂಭಿಸಲಾಗುತ್ತದೆ ಎಂದರು.
18 ವಿದ್ಯಾರ್ಥಿನಿಗಳಯಗಳಿಗೆ ಸ್ವಂತ ಕಟ್ಟಡಗಳ ನಿರ್ಮಾಣ ಮಾಡಲಾಗುತ್ತದೆ. 31 ಹೊಸ ಮೆಟ್ರಿಕ್ ನಂತರ ವಸತಿ ನಿಲಯ ಮಂಜೂರು ಮಾಡಲಾಗುವುದು ಎಂದರು.