ಬೆಂಗಳೂರು: ಪ್ರಜ್ವಲ್ ರೇವಣ್ಣ ಅತ್ಯಾಚಾರ ಮಾಡಲು ಸಮರ್ಥರೇ ಅಥವಾ ಇಲ್ಲವೇ ಎಂಬುದನ್ನು ತನಿಖೆಯಲ್ಲಿ ಪತ್ತೆ ಹಚ್ಚಲು ಪ್ರಮುಖ ವೈದ್ಯಕೀಯ ವಿಧಾನವಾಗಿರುವ ಪುರುಷತ್ವ ಪರೀಕ್ಷೆಗೆ ಕೋರ್ಟ್ ಒಪ್ಪಿಗೆ ನೀಡಿದೆ.
ಹೀಗಾಗಿ, ಎಸ್ಐಟಿ ಅಧಿಕಾರಿಗಳು ಅವರನ್ನು ಬೌರಿಂಗ್ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪುರುಷತ್ವ ಪರೀಕ್ಷೆ ನಡೆಸುತ್ತಿದ್ದಾರೆ.
ಸಾವಿರಾರು ಹೆಣ್ಣು ಮಕ್ಕಳನ್ನು ವಯಸ್ಸಿನ ಭೇದವಿಲ್ಲದೇ ಅತ್ಯಾಚಾರ ಮಾಡಿರುವುದಲ್ಲದೇ ದೌರ್ಜನ್ಯ ಎಸಗಿರುವ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ಎಸ್ಐಟಿ ಪೊಲೀಸರು ಮೇ 31ರಂದು ರಾತ್ರಿ ಬಂಧಿಸಿದ್ದರು. ಆದರೆ ಚುನಾವಣಾ ಫಲಿತಾಂಶ ಬರುವ ತನಕ ಕಾದಿದ್ದ ಅಧಿಕಾರಿಗಳು ಕೋರ್ಟ್ ಅನುಮತಿ ಪಡೆದು ಪುರುಷತ್ವ ಪರೀಕ್ಷೆ ನಡೆಸುತ್ತಿದ್ದಾರೆ.
ಪೊಲೀಸರ ವಶದಲ್ಲಿದ್ದ ಪ್ರಜ್ವಲ್ ರೇವಣ್ಣ ತಾನು ಸಂಸದ ಎಂಬ ಅಹಂನಲ್ಲಿ ತನಿಖೆಗೆ ಅಸಹಾಕಾರ ನೀಡುತ್ತಿದ್ದ. ಹೀಗಾಗಿ ತನಿಖೆಯಲ್ಲಿ ಹೆಚ್ಚಿನ ಪ್ರಗತಿ ನಡೆಯುತ್ತಿರಲಿಲ್ಲ.
ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು ಪ್ರಜ್ವಲ್ಗೆ ಹಾಸನದ ಜನರು ತಕ್ಕ ಶಿಕ್ಷೆ ಕೊಟ್ಟಿದ್ದಾರೆ. ಅದೇ ರೀತಿ ಪ್ರಜ್ವಲ್ ಅವರ ಎಸ್ಐಟಿ ಕಸ್ಟಡಿ ಅವಧಿ ಶುಕ್ರವಾರಕ್ಕೆ ಮುಕ್ತಾಯಗೊಳ್ಳಲಿದೆ. ಹೀಗಾಗಿ, ಒಂದು ದಿನ ಮುಂಚಿತವಾಗಿ ಅಧಿಕಾರಿಗಳು ಪರೀಕ್ಷೆ ನಡೆಸಿದ್ದಾರೆ.