ಬೆಂಗಳೂರು: ಏ.27ರ ಶನಿವಾರದಿಂದ ಮೇ 25 ರವರೆಗೆ ಹೈಕೋರ್ಟ್ ಗೆ ಬೇಸಿಗೆ ರಜೆ ನೀಡಲಾಗಿದೆ.
ಈ ಅವಧಿಯಲ್ಲಿ ತುರ್ತು ಪ್ರಕರಣಗಳ ವಿಚಾರಣೆ ನಡೆಸಲು ಬೆಂಗಳೂರು ಪ್ರಧಾನ ಪೀಠ, ಧಾರವಾಡ ಮತ್ತು ಕಲಬುರಗಿಯಲ್ಲಿ ವಿಭಾಗೀಯ ಮತ್ತು ಏಕ ಸದಸ್ಯ ನ್ಯಾಯಮೂರ್ತಿಗಳನ್ನು ಒಳಗೊಂಡ ರಜಾಕಾಲೀನ ಪೀಠಗಳು ಕಾರ್ಯನಿರ್ವಹಿಸುತ್ತವೆ.
ರಜೆ ಅವಧಿಯಲ್ಲಿ ತಡೆಯಾಜ್ಞೆ, ಮಧ್ಯಂತರ ನಿರ್ದೇಶನ ಮತ್ತು ತಾತ್ಕಾಲಿಕ ಪ್ರತಿಬಂಧಕಾದೇಶ ಮೊದಲಾದ ಪ್ರಕರಣಗಳ ವಿಚಾರಣೆ ಮಾತ್ರ ನಡೆಸ ಲಾಗುತ್ತದೆ. ಮೇಲ್ಮನವಿ, ಕ್ರಿಮಿನಲ್ ಮೇಲ್ಮನವಿ, ಕ್ರಿಮಿನಲ್ ಅರ್ಜಿ, ಸಿವಿಲ್ ರೂಪದ ಅರ್ಜಿಗಳ ವಿಚಾರಣೆ ಇರುವುದಿಲ್ಲ. ಇ- ಫೈಲಿಂಗ್ ಪೋರ್ಟಲ್ ಮೂಲಕ ಇ ಫೈಲಿಂಗ್ ಮಾಡಬಹುದಾಗಿದೆ ಎಂದು ಹೈಕೋರ್ಟ್ ರಿಜಿಸ್ಟ್ರಾರ್(ನ್ಯಾಯಾಂಗ) ಎಂ. ಚಂದ್ರಶೇಖರ ರೆಡ್ಡಿ ತಿಳಿಸಿದ್ದಾರೆ.