Sunday, 15th December 2024

ರಾಜ್ಯಪಾಲ ಗೆಹ್ಲೋಟ್’ಗೆ ಕೋವಿಡ್ ಸೋಂಕು: ಜಂಬೂಸವಾರಿಗೆ ಗೈರು

ಮೈಸೂರು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್’ಗೆ ಕೋವಿಡ್ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ದಸರಾ ಜಂಬೂ ಸವಾರಿ ಹಾಗೂ ಪಂಜಿನ‌ ಕವಾಯತು ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ.

ಹೇಳಿಕೆ‌ ನೀಡಿದ ಸಿಎಂ‌ ಬಸವರಾಜ ಬೊಮ್ಮಾಯಿ, “ಸಂಪ್ರದಾಯದಂತೆ ರಾಜ್ಯಪಾಲರು ಪ್ರತಿ ವರ್ಷ ದಸರಾ ಮಹೋತ್ಸವದ ಪಂಜಿನ ಕವಾಯತಿನಲ್ಲಿ ಭಾಗವಹಿಸಬೇಕಿತ್ತು.

ಆದರೆ, ಅವರಿಗೆ ಕೋವಿಡ್ ಸೋಂಕಾಗಿರುವ ಹಿನ್ನೆಲೆಯಲ್ಲಿ ದಸರಾ ಜಂಬೂಸವಾರಿ ಮೆರವಣಿಗೆ ಹಾಗೂ ಪಂಜಿನ ಕವಾಯತು ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ ಎಂದು ಮಾಹಿತಿ ನೀಡಿದರು. ಸುತ್ತೂರು ಮಠಕ್ಕೆ ಭೇಟಿ ನೀಡುವ ಸಿಎಂ ಬೊಮ್ಮಾಯಿ ನಂತರ ದಸರಾ ಮಹೋತ್ಸವದಲ್ಲಿ ಭಾಗವಹಿಸಲಿದ್ದಾರೆ.

ಮೊದಲಿಗೆ ಮಧ್ಯಾಹ್ನ ಅರಮನೆ ಮುಂಭಾಗದ ಕೋಟೆ ಆಂಜನೇಯ ದೇವಾಲಯದ ಬಳಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸುತ್ತಾರೆ.