Wednesday, 11th December 2024

ಕರೋನಾಗೆ ರಾಜ್ಯದಲ್ಲಿ ಓರ್ವ ಬಲಿ

#corona

ಬೆಂಗಳೂರು : ಕಿಲ್ಲರ್ ಕರೋನಾಗೆ ರಾಜ್ಯದಲ್ಲಿ ಓರ್ವ ಬಲಿಯಾಗಿದ್ದಾನೆ.

ಜೆ ಎನ್ 1 ಉಪತಳಿ ಆತಂಕದ ನಡುವೆಯೇ ಸೋಂಕಿಗೆ 64 ವರ್ಷದ ವ್ಯಕ್ತಿ ಮೃತಪಟ್ಟಿದ್ದಾನೆ. ಚಾಮರಾಜಪೇಟೆ ಖಾಸಗಿ ಆಸ್ಪತ್ರೆಯಲ್ಲಿ 64 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಮೃತ ವೃದ್ದ ಬೆಂಗಳೂರಿನ ಚಾಮರಾಜಪೇಟೆ ನಿವಾಸಿಯಾಗಿದ್ದು, ಮುಂಜಾಗ್ರತಾ ಕ್ರಮಕೈಗೊಳ್ಳಲು ಆರೋಗ್ಯ ಇಲಾಖೆ ಸೂಚನೆ ನೀಡಿದೆ.ಕಡ್ಡಾಯವಾಗಿ ಮಾಸ್ಕ್ ಧರಿಸಿ ಎಚ್ಚರಿಕೆಯಿಂದ ಇರುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.