ಚಿಕ್ಕಬಳ್ಳಾಪುರ : ಮನೆಯಲ್ಲಿ ವಿದ್ಯುತ್ ಬರುತ್ತಿಲ್ಲವೆಂದು ಸರಿಪಡಿಸಲು ಹೋದ ಸಂದರ್ಭದಲ್ಲಿ ವಿದ್ಯುತ್ ಶಾಕ್‌ಗೆ ತುತ್ತಾಗಿ ಪಿಯುಸಿ ಓದುತ್ತಿದ್ದ ಕಾಲೇಜು ವಿದ್ಯಾರ್ಥಿಯೋರ್ವ ಸಾವನ್ಪಪ್ಪಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಕುರ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ.
ಚಿಕ್ಕಬಳ್ಳಾಪುರ ತಾಲೂಕಿನ ಕುರ್ಲಹಳ್ಳಿ ಗ್ರಾಮದಲ್ಲಿ ಶುಕ್ರವಾರ ಈ ಘಟನೆ ನಡೆದಿದ್ದು ೧೭ ವರ್ಷದ ಯಶ್ವಂತ್ ಎಂಬ ಬಾಲಕ ಅಕಾಲಿಕ ಸಾವಿಗೆ ತುತ್ತಾಗಿದ್ದಾನೆ. ಈತ ನಗರದ ಸರಕಾರಿ ಜೂನಿಯರ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ ದಸರಾ ರಜೆಯಿದ್ದ ಕಾರಣ ಮನೆಯಲ್ಲಿಯೇ ಉಳಿಸಿದ್ದ ಎನ್ನಲಾಗಿದೆ. ಕಳೆದ ನಾಲ್ಕು ದಿನಗಳಿಂದ ಸತತವಾಗಿ ಸುರಿದ ಮಳೆಯ ಕಾರಣವಾಗಿ ತನ್ನ ಮನೆಯಲ್ಲಿ ಕರೆಂಟ್ ಇಲ್ಲವಾಗಿತ್ತು ಎನ್ನಲಾಗಿದೆ. ಇದನ್ನು ಸರಿಪಡಿಸಲು ಯಶವಂತ್ ತಾನೇ ಮುಂದಾದ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶಿಸಿ ಸ್ಥಳದಲ್ಲೇ ಮೃತ ಪಟ್ಟಿದ್ದಾನೆ.
ತಾಲೂಕಿನ ಕುರ್ಲಹಳ್ಳಿ ಗ್ರಾಮದ ನರಸಿಂಹಪ್ಪ ಹಾಗೂ ನಾಗಮಣಿ ದಂಪತಿಗಳ ಏಕೈಕ ಪುತ್ರನಾಗಿದ್ದ ಯಶ್ವಂತ್ ವಿಧಿಯಾಟಕ್ಕೆ ಬಲಿಯಾಗುವ ಮೂಲಕ ಹೆತ್ತವರು ಕಣ್ಣೀರಲ್ಲಿ ಕೈತೊಳೆಯುವಂತೆ ಮಾಡಿದ್ದಾನೆ.
ವಿಷಯ ತಿಳಿಯುತ್ತಿದ್ದಂತೆ ಕುರ್ಲಹಳ್ಳಿ ಗ್ರಾಮಕ್ಕೆ ಭೇಟಿ ನೀಡಿದ್ದ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿ ಮೃತ ದೇಹವನ್ನು ಜಿಲ್ಲಾಸ್ಪತ್ರೆಗೆ ರವಾನಿಸಿದ್ದು ಈ ಸಂಬ0ಧ ಅಸಹಜ ಸಾವಿನ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.