ಸುರತ್ಕಲ್: ಅನ್ಯಕೋಮಿನ ಯುವಕ ಬೆದರಿಕೆ (threat) ಹಾಕುತ್ತಿದ್ದ ಹಿನ್ನೆಲೆಯಲ್ಲಿ ಯುವತಿಯೊಬ್ಬಳು ಮಾತ್ರೆ ಸೇವಿಸಿ ಆತ್ಮಹತ್ಯೆಗೆ (Self harming) ಯತ್ನಿಸಿದ್ದಾಳೆ. ದಕ್ಷಿಣ ಕನ್ನಡ ಜಿಲ್ಲೆಯ (Dakshina Kannada news) ಕೋಮು ಸೂಕ್ಷ್ಮ ಪ್ರದೇಶವಾದ ಸುರತ್ಕಲ್‌ನಲ್ಲಿ ಘಟನೆ ನಡೆದಿದ್ದು, ಪೊಲೀಸ್ ಠಾಣೆಯಲ್ಲಿ ಪ್ರಕರಣ (Crime news) ದಾಖಲಾಗಿದೆ.
ಇಲ್ಲಿನ ಇಡ್ಯಾ ಗ್ರಾಮದ 21 ವರ್ಷದ ಯುವತಿ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ಸಂಬಂಧ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯುವತಿಯ ಅಣ್ಣ ಕಿಶನ್ ಎಂಬವರಿಗೆ ಫೇಸ್‌ಬುಕ್ ಮೆಸೆಂಜರ್‌ನಲ್ಲಿ ‘ನಿನ್ನ ತಂಗಿಯನ್ನು ಬಿಡುವುದಿಲ್ಲ’ ಎಂಬ ಸಂದೇಶ ಅ.22ರ ರಾತ್ರಿ 1 ಗಂಟೆ ಸುಮಾರಿಗೆ ಬಂದಿದೆ. ಈ ವಿಷಯವನ್ನು ತಿಳಿದ ಯುವತಿ, ‘ನಾನು ಸತ್ತರೆ ನನ್ನ ಸಾವಿಗೆ ಶಾರೀಕ್ ಮತ್ತು ನೂರ್‌ಜಹಾನ್ ಕಾರಣ’ ಎಂದು ಡೆತ್‌ನೋಟ್ ಬರೆದಿಟ್ಟು 10 ಡೋಲೊ-650 ಮಾತ್ರೆ ಸೇವಿಸಿದ್ದಾರೆ. ಪ್ರಸ್ತುತ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯ ಸ್ಥಿರವಾಗಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಪ್ರಕರಣದ ಸಂಬಂಧ ತನಿಖೆ ಮುಂದುವರಿದಿದೆ ಎಂದು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ.
‘ಯುವತಿ ಡೆತ್‌ನೋಟ್‌ನಲ್ಲಿ ಹೆಸರು ಉಲ್ಲೇಖಿಸಿರುವ ವ್ಯಕ್ತಿಗಳು ಆಕೆಗೆ ನಿರಂತರ ಬೆದರಿಕೆ ಒಡ್ಡುತ್ತಿದ್ದರು. ಈ ಕುರಿತು ಆಕೆಯ ಕುಟುಂಬಸ್ಥರು ಠಾಣೆಗೆ ದೂರು ಸಹ ನೀಡಿದ್ದರು’ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ‘ಅನ್ಯಕೋಮಿನ ಯುವಕ ಅಶ್ಲೀಲ ಮೆಸೇಜ್ ಕಳುಹಿಸಿ, ಕಿರುಕುಳ ನೀಡಿರುವ ಪರಿಣಾಮ ಯುವತಿ ಆತ್ಮಹತ್ಯೆಗೆ ಯತ್ನಿಸಿದ್ದು, ಘಟನೆಯಲ್ಲಿ ಪೊಲೀಸರ ವೈಫಲ್ಯ ಕಾಣುತ್ತಿದೆ. ಫೇಸ್‌ಬುಕ್ ಮೆಸೆಂಜರ್ ಮೂಲಕ ತನ್ನೊಂದಿಗೆ ಬರದಿದ್ದರೆ 24 ತುಂಡು ಮಾಡಿ ಬಿಸಾಡುವೆ ಎಂದು ಯುವಕ ಬೆದರಿಕೆ ಹಾಕಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಸ್ಥಳೀಯ ಶಾಸಕ ಡಾ. ವೈ. ಭರತ್ ಶೆಟ್ಟಿ ಒತ್ತಾಯಿಸಿದ್ದಾರೆ.
ಇದನ್ನೂ ಓದಿ: Self Harming: ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಪತಿ, ಇಬ್ಬರು ಮಕ್ಕಳು ಆತ್ಮಹತ್ಯೆ