Sunday, 8th September 2024

ಮುಂಗಾರು ಬೆಳೆ ಸಮೀಕ್ಷೆಗೆ ಮನವಿ 

ತುಮಕೂರು: ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ತಮ್ಮ ಜಮೀನಿನ ಬೆಳೆ ವಿವರವನ್ನು “ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್”ನಲ್ಲಿ ದಾಖಲಿಸ ಬೇಕೆಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಗುಬ್ಬಿ ತಾಲ್ಲೂಕಿನ ರೈತರಲ್ಲಿ ಮನವಿ ಮಾಡಿದ್ದಾರೆ.
ಬೆಳೆ ಸಮೀಕ್ಷೆಯಲ್ಲಿ ದಾಖಲಿಸುವ ಮಾಹಿತಿಯನ್ನು ಬೆಳೆ ಸಾಲ, ಬೆಳೆ ವಿಮೆ, ಬೆಂಬಲ ಬೆಲೆ ಖರೀದಿ, ಬೆಳೆ ಪರಿಹಾರ ಮತ್ತು ವಿವಿಧ ಇಲಾಖೆಗಳ ಸವಲತ್ತುಗಳನ್ನು ಪಡೆಯಲು ಹಾಗೂ ಪಹಣ ಯಲ್ಲಿ ಬೆಳೆ ವಿವರ ದಾಖಲಿಸಲು ಉಪಯೋಗಿಸಿಕೊಳ್ಳಲಾಗುವುದು. ಸ್ವತಃ ರೈತರೇ ತಮ್ಮ ಮೊಬೈಲ್ ಆಪ್ ಮೂಲಕ ಸಕಾಲಿಕವಾಗಿ ಬೆಳೆ ವಿವರಗಳನ್ನು ತಂತ್ರಾ0ಶದಲ್ಲಿ ಅಪ್‌ಲೋಡ್ ಮಾಡುವುದರಿಂದ ನ್ಯೂನ್ಯತೆಗಳನ್ನು ಕಡಿಮೆ ಮಾಡಬಹುದು ಹಾಗೂ ಸೌಲಭ್ಯಗಳಿಂದ ವಂಚಿತರಾಗುವುದನ್ನು ತಪ್ಪಿಸಬಹುದಾಗಿದೆ.
ರೈತ ಭಾಂಧವರು ಮೊಬೈಲ್ ಆ್ಯಪ್ ಬಳಸಿ ಬೆಳೆದಿರುವ ಬೆಳೆಗಳಿಗೆ ಸ್ವತಃ ತಾವೇ ಬೆಳೆ ಸಮೀಕ್ಷೆ ಮಾಡಿ ಬೆಳೆ ವಿವರಗಳನ್ನು ದಾಖಲಿಸಬಹ್ಮದಾಗಿದೆ. ಅಥವಾ ಮೊಬೈಲ್ ಆಪ್ ಬಳಸಲು ನೇಮಕವಾದ ಖಾಸಗಿ ನಿವಾಸಿಗಳ ಸಹಾಯ ಪಡೆಯಬಹುದಾಗಿದೆ.
ರೈತರ ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್ ಬಳಸುವ ವಿಧಾನ: ಪ್ಲೇ ಸ್ಟೋರ್‌ನಲ್ಲಿ “ಮುಂಗಾರು ರೈತರ ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್ 2024-25” ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಬೇಕು. ಇ-ಏಙಅ ಮೂಲಕ ಆಧಾರ್ ದೃಢೀಕರಿಸಲು ಆಧಾರ್ ಸಂಖ್ಯೆ ನಮೂದಿಸಿ, ಆಧಾರ್ ಸಂಖ್ಯೆಗೆ ಜೋಡಣೆಯಾದ ಮೊಬೈಲ್ ಸಂಖ್ಯೆಗೆ ಬರುವ ಔಖಿP ದಾಖಲಿಸಿ ಸಲ್ಲಿಸಬೇಕು. ನಂತರ ಮೊಬೈಲ್ ಸಂಖ್ಯೆಯನ್ನು ನಮೂದಿಸಿ ಸಕ್ರಿಯಗೊಳಿಸಬೇಕು. ನಮೂದಿಸಿದ ಮೊಬೈಲ್ ಸಂಖ್ಯೆಗೆ ಔಖಿP ಬರುತ್ತದೆ. ಸದರಿ ಔಖಿP ಯನ್ನು ದಾಖಲಿಸಿ ಸಲ್ಲಿಸಬೇಕು. ಬಳಿಕ ಮೊಬೈಲ್ ಆಪ್ ಫ್ರೂಟ್ಸ್ ತಂತ್ರಾAಶಕ್ಕೆ ಸಂಪರ್ಕಗೊAಡಿದ್ದ ರೈತರ ಗುರುತಿನ ಸಂಖ್ಯೆ (ಈIಆ) ಯಲ್ಲಿ ಸೇರ್ಪಡೆಯಾದ ಎಲ್ಲಾ ಪಹಣಿ ವಿವರ, ಪಾಲಿಗಾನ್ ಹಾಗೂ ಜಿ.ಐ.ಎಸ್. ಮ್ಯಾಪ್ ಸ್ವಯಂಚಾಲಿತವಾಗಿ ಡೌನ್ ಲೋಡ್ ಆಗಿ, ಎಲ್ಲಾ ಸರ್ವೇ ನಂಬರ್‌ಗಳ ವಿವರ ಕಾಣ ಸುತ್ತದೆ. ಬೆಳೆ ಸಮೀಕ್ಷೆ ಪ್ರಾರಂಭಿಸಲು ಸರ್ವೆ ನಂಬರ್ ಆಯ್ಕೆ ಮಾಡಬೇಕು. ಸದರಿ ಸರ್ವೇ ನಂಬರ್‌ನ ಗಡಿ ರೇಖೆಯೊಳಗೆ ನಿಂತು ವಿವರವನ್ನು ದಾಖಲಿಸಿ, ತಾವು ಬೆಳೆದ ಬೆಳೆಯ ವಿಸ್ತೀರ್ಣದ ಜೊತೆಗೆ ಪ್ರತಿ ಬೆಳೆಯ ಎರಡು ಫೋಟೋ ತೆಗೆದು ಮಾಹಿತಿಯನ್ನು ಅಪ್‌ಲೋಡ್ ಮಾಡಬೇಕು.
ಎಲ್ಲಾ ರೈತರು ಈ ಯೋಜನೆಯ ಸದುಪಯೋಗ ಪಡೆದುಕೊಂಡು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ವಿವರವನ್ನು ನಿಗಧಿತ ಸಮಯದೊಳಗೆ ಅಪ್‌ಲೋಡ್ ಮಾಡಬೇಕು. ಹೆಚ್ಚಿನ ಮಾಹಿತಿಗಾಗಿ ಟೋಲ್ ಫ್ರೀ ಸಂಖ್ಯೆ:18004253553 ಅಥವಾ ಬೆಳೆ ಸಮೀಕ್ಷೆಗೆ ನಿಯೋಜಿತಗೊಂಡ ಗ್ರಾಮದ ಖಾಸಗಿ ನಿವಾಸಿ ಅಥವಾ ಕಂದಾಯ, ಕೃಷಿ, ತೋಟಗಾರಿಕೆ, ರೇಷ್ಮೆ ಮತ್ತು ಸಾಂಖ್ಯಿಕ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಬೇಕೆ೦ದು ಅವರು ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!