Sunday, 28th April 2024

ಸಿಎಂ ಬಿಎಸ್’ವೈ ಪರೋಕ್ಷವಾಗಿ ಕುಟುಕಿದ ಸಚಿವ ಸಿ.ಟಿ.ರವಿ

ಚಿಕ್ಕಮಗಳೂರು: 75 ವರ್ಷ ನಂತರ ಅಧಿಕಾರ ರಾಜಕೀಯದಿಂದ ನಿವೃತ್ತಿ, ಒಬ್ಬ ವ್ಯಕ್ತಿಗೆ ಒಂದೇ ಹುದ್ದೆ ಎಂಬ ಅಲಿಖಿತ ನಿಯಮ ಬಿಜೆಪಿ ಪಕ್ಷದೊಳಗಿದೆ. ಅಲಿಖಿತ ನಿಯಮಗಳನ್ನು ಕೆಲವೊಮ್ಮೆ ಬದಲಾಯಿಸಿದ ನಿದರ್ಶನಗಳು ಇವೆ. ಅದು ಪಕ್ಷದ ವರಿಷ್ಠರ ಮಂಡಳಿ ನಿರ್ಧಾರ. ಸಚಿವ ಸ್ಥಾನದಲ್ಲಿ ಮುಂದುವರೆಯಬೇಕೆ, ಬೇಡವೇ ಎಂಬುದು ವರಿಷ್ಠರ ತೀರ್ಮಾನಕ್ಕೆ ಬಿಟ್ಟಿದ್ದು ಎಂದು ಸಚಿವ ಸಿ.ಟಿ.ರವಿ ತಿಳಿಸಿದರು.

ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಷ್ಟ್ರ ರಾಜಕಾರಣದ ಬಗ್ಗೆ ವೈಯಕ್ತಿಕ ನಿರೀಕ್ಷೆ ಇರಲಿಲ್ಲ, ಪಕ್ಷದ ವರಿಷ್ಠರ ಮುಂದೇ ಅಭಿಪ್ರಾಯ ವ್ಯಕ್ತಪಡಿಸಿರಲಿಲ್ಲ, ಅನಿರೀಕ್ಷಿತವಾಗ ಅವಕಾಶ ಬಂದಿದೆ. ರಾಷ್ಟ್ರ ರಾಜಕೀಯದಲ್ಲಿ ಸ್ಥಾನ ಸಿಕ್ಕಿರುವುದು ನನ್ನ ಜೀವನದ ದೊಡ್ಡ ತಿರುವು ಎಂದರು.

ಇಂದು ವರಿಷ್ಠರು ದೊಡ್ಡ ಜವಬ್ದಾರಿ ನೀಡಿದ್ದಾರೆ. ಜವಾಬ್ದಾರಿ ನಿಭಾಯಿಸುವುದು ಅಷ್ಟು ಸುಲಭವಲ್ಲ ಎಂಬ ಅರಿವು ನನಗಿದೆ. ಅನಂತ್‌ ಕುಮಾರ್ ಅವರ ಬಳಿಕ ದೊಡ್ಡ ಹುದ್ಧೆ ಚಿಕ್ಕಮಗಳೂರಿಗೆ ದೊರಕಿರುವುದು ನನ್ನ ಸೌಭಾಗ್ಯ ಎಂದ ಅವರು ಸ್ಥಾನಕ್ಕೆ ನ್ಯಾಯ ಒದಗಿಸುವ ಕೆಲಸ ಮಾಡುತ್ತೇನೆ ಎಂದರು.

Leave a Reply

Your email address will not be published. Required fields are marked *

error: Content is protected !!