Saturday, 20th April 2024

ಹತ್ಯೆ ಪ್ರಕರಣ: ಶಿವಮೊಗ್ಗದಲ್ಲಿ ಫೆ.23 ರವರೆಗೆ ಕರ್ಫ್ಯೂ ಜಾರಿ

ಶಿವಮೊಗ್ಗ: ಬಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಶಿವಮೊಗ್ಗದಲ್ಲಿ ಫೆ.23 ರ ಬೆಳಿಗ್ಗೆಯವರೆಗೆ ಕರ್ಫ್ಯೂ ಜಾರಿ ಮಾಡಲಾಗಿದೆ.

ನಗರದ ಸೀಗೆಹಟ್ಟಿ ನಿವಾಸಿ ಹರ್ಷ (24) ನ ಮೇಲೆ ಮಾರಕಾಸ್ತ್ರಗಳಿಂದ ಹತ್ಯೆಗೈದು ನಾಲ್ವರು ದುಷ್ಕರ್ಮಿಗಳು ಕಾರಿನಲ್ಲಿ ಪರಾರಿಯಾಗಿದ್ದರು. ಹಲ್ಲೆ ನಡೆಯುತ್ತಿದ್ದಂತೆ ಎರಡು ಗುಂಪುಗಳ ನಡುವೆ ನಗರದಲ್ಲಿ ಕಲ್ಲು ತೂರಾಟ ನಡೆದಿದೆ. ಈ ವೇಳೆ ನಗರದ ದೊಡ್ಡಪೇಟೆ ಪೊಲೀಸ್‌ ಠಾಣಾ ಪೊಲೀಸರು ಲಾಠಿ ಚಾರ್ಜ್‌ ‌ಮಾಡಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಈ ಹಿನ್ನೆಲೆ ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಶಿವಮೊಗ್ಗ ದಲ್ಲಿ ಫೆ.23 ರ ಬೆಳಿಗ್ಗೆಯವರೆಗೆ ಕರ್ಫ್ಯೂ ಜಾರಿ ಮಾಡಲಾಗಿದೆ ಮುನ್ನೆಚ್ಚರಿಕಾ ಕ್ರಮ ವಾಗಿ ನಗರದ ಶಾಲಾ ಕಾಲೇಜುಗಳಿಗೆ ಡಿಸಿ ಡಾ.ಸೆಲ್ವಮಣಿ ರಜೆ ಘೋಷಿಸಿದ್ದಾರೆ.

ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷನನ್ನು ಕೊಲೆ ಮಾಡಿರುವ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಶಿವಮೊಗ್ಗ ಜಿಲ್ಲೆಯವರೇ ಎಂಬ ಮಾಹಿತಿ ಲಭ್ಯವಾಗಿದೆ. ಹಂತಕರ ಪತ್ತೆಗೆ 3 ವಿಶೇಷ ಪಡೆಯನ್ನು ರಚಿಸಲಾಗಿತ್ತು. ಘಟನೆ ನಡೆದ 24 ಗಂಟೆಯೊಳಗೆ ಆರೋಪಿಗಳನ್ನು ಬಂಧಿಸ ಲಾಗಿದೆ.

ಶಿವಮೊಗ್ಗದಲ್ಲಿ ನಡೆದ ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ ರಾಜಕೀಯ ತೀವ್ರತೆ ಕಾಣುತ್ತಿದೆ. ಕಾರ್ಯಕರ್ತನ ಹತ್ಯೆ ಖಂಡಿಸಿ ಫೆ.23 ರಂದು ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಲಾಗಿದೆ. ಹರ್ಷನ ಹತ್ಯೆ ಖಂಡಿಸಿ ದುಷ್ಕರ್ಮಿಗಳ ವಿರುದ್ದ ಕಠಿಣ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆಗೆ ಕರೆ ನೀಡಲಾಗಿದೆ.

error: Content is protected !!