Thursday, 12th December 2024

CWRC ಆದೇಶ ಪ್ರಶ್ನಿಸಿ ಸುಪ್ರೀಂ​ಗೆ ಮೇಲ್ಮನವಿ ಸಲ್ಲಿಸುತ್ತೇವೆ: ಸಿಎಂ ಸಿದ್ದರಾಮಯ್ಯ

Siddaramaiah

ಚಾಮರಾಜನಗರ: CWRC ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ಮತ್ತೆ 3,000 ಕ್ಯೂಸೆಕ್ ನೀರು ಹರಿಸುವಂತೆ ಸಭೆಯ ನಂತರ ಸೂಚಿಸಿತ್ತು.

CWRC ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸುತ್ತೇವೆ. ಸದ್ಯ ನಮ್ಮ ಬಳಿ ನೀರು ಇಲ್ಲ, ಕಾನೂನು ತಜ್ಞರ ಸಲಹೆ ಪಡೆದಿದ್ದೇವೆ ಎಂದು ಹೇಳಿದರು.

ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಯಾವುದೇ ರಾಜಿಯಿಲ್ಲ. ಕಾವೇರಿ ನೀರು ವಿಚಾರದಲ್ಲಿ ಬಿಜೆಪಿ, ಜೆಡಿಎಸ್ ರಾಜಕೀಯ ಮಾಡುತ್ತಿವೆ. ನಾವು ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸುವುದಾಗಿ ತಿಳಿಸಿದರು.