Friday, 20th September 2024

ಮಲಗಿದ್ದಾಗ ಸಿಲಿಂಡರ್ ಸ್ಫೋಟ: ಏಳು ಜನರಿಗೆ ಗಾಯ

ಬೆಳಗಾವಿ: ಗೋಕಾಕ್ ತಾಲೂಕಿನ ‌ಅಕ್ಕತಂಗೇರಹಾಳ ಗ್ರಾಮದಲ್ಲಿನ ಮನೆಯಲ್ಲಿಸಿಲಿಂಡರ್ ಸ್ಫೋಟಗೊಂಡು 9 ತಿಂಗಳ ಹಸುಗೂಸು ಸೇರಿ ಒಂದೇ ಕುಟುಂಬದ ಏಳು ಜನರಿಗೆ ಗಂಭೀರ ಗಾಯಗೊಂಡಿದ್ದಾರೆ.

ಸಿಲಿಂಡರ್ ಸ್ಫೋಟದ ಭೀಕರತೆಗೆ ಮನೆಯ ಹೆಂಚುಗಳು ಹಾರಿ ಹೋಗಿದ್ದು, ಮನೆಯಲ್ಲಿನ ವಸ್ತುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.

ರಾಜಶ್ರೀ ನಿರ್ವಾಣಿ, ಅಶೋಕ ನಿರ್ವಾಣಿ, ಸೋಮನಗೌಡ ನಿರ್ವಾಣಿ, ದೀಪಾ ನಿರ್ವಾಣಿ ಮತ್ತು ಮಕ್ಕಳಾದ ನವೀನ ನಿರ್ವಾಣಿ, ವಿದ್ಯಾ ನಿರ್ವಾಣಿ, 9 ತಿಂಗಳ ಮಗು ಬಸನಗೌಡ ನಿರ್ವಾಣಿ ಗಾಯಗೊಂಡವರು. ಈ ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯವಾಗಿದ್ದು, ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ‌ದಾಖಲಿಸಲಾಗಿದೆ. ಇನ್ನುಳಿದವರನ್ನು ಸ್ಥಳೀಯ ಆಸ್ಪತ್ರೆಗೆ ‌ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮನೆಯಲ್ಲಿ ರಾತ್ರಿ ಮಲಗಿದ್ದಾಗ ಸಿಲಿಂಡರ್ ಸೋರಿಕೆ ಆಗಿದೆ. ವಾಸನೆ ಬಂದು ಹಿನ್ನೆಲೆ ಮೊಬೈಲ್​ ಟಾರ್ಚ್ ಆನ್ ಮಾಡಿ ನೋಡಲು ಹೋದಾಗ ಏಕಾಏಕಿ ‌ಸ್ಫೋಟಗೊಂಡಿದೆ ಎಂದು ತಿಳಿದು ಬಂದಿದೆ. ಅಂಕಲಗಿ ಪೊಲೀಸ್ ‌ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.