ರೇಣುಕಾ ಸ್ವಾಮಿ ಕೊಲೆ ಪ್ರಕರಣ
ಬೆಂಗಳೂರು/ಚಿತ್ರದುರ್ಗ: ನಗರದ ತುರುವನೂರು ರಸ್ತೆಯಲ್ಲಿತುವ ಬ್ಯಾಂಕ್ ಕಾಲೋನಿಯ ನಿವಾಸಿಗಳಾದ ಕೆಇಬಿ ನಿವೃತ್ತ ನೌಕರರಾದ ಶಿವಾನಂದ ಗೌಡ್ರು ಹಾಗೂ ರತ್ನಪ್ರಭ ಪುತ್ರ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನಕ್ಕೆ ಒಳಗಾಗಿದ್ದಾರೆ.
ಕಳೆದ ಎರಡು ದಿನಗಳಿಂದ ಮಗ ಮನೆಗೆ ಬಂದಿರಲಿಲ್ಲ. ರಾತ್ರಿ ಊಟಕ್ಕೆ ಬರುವುದಿಲ್ಲ ಎಂದು ತಾಯಿ ಬಳಿ ಹೇಳಿ ಹೋಗಿದ್ದ ರೇಣುಕಾಸ್ವಾಮಿ ಕೊಲೆಯಾಗಿದ್ದಾನೆ.
ಕೊಲೆಯಾದ ರೇಣುಕಾಸ್ವಾಮಿ ಒಂದು ವರ್ಷದ ಹಿಂದಷ್ಟೇ ಮದುವೆ ಆಗಿದ್ದರು. ಪತ್ನಿ ಐದು ತಿಂಗಳ ಗರ್ಭಿಣಿ. ಪತಿಯ ಕೊಲೆ ಮಾಹಿತಿ ಆಕೆಗೆ ತಿಳಿಸಿಲ್ಲ.
ಮೂರ್ನಾಲ್ಕು ವರ್ಷದಿಂದ ಅಪೊಲೊ ಮೆಡಿಕಲ್ ಶಾಪ್ ನಲ್ಲಿ ಕೆಲಸ ಮಾಡಿಕೊಂಡಿದ್ದರು. ಚಳ್ಳಕೆರೆ ಗೇಟ್ ಬಳಿಯಿರುವ ಬಾಲಾಜಿ ಬಾರ್ ಬಳಿ ರೇಣುಕಾಸ್ವಾಮಿ ಬೈಕ್ ಪತ್ತೆಯಾಗಿತ್ತು. ಬೆಂಗಳೂರಿನ ಕಾಮಾಕ್ಷಿ ಪಾಳ್ಯ ಪೊಲೀಸರು ಪೋಷಕರಿಗೆ ಪೋನ್ ಮಾಡಿ ಕರೆಸಿಕೊಂಡಿದ್ದಾರೆ.
ಬಂಧಿಸಬೇಡಿ ಎಂದು ಒತ್ತಡ: ನಟ ದರ್ಶನ್ ಹಾಗೂ ಪವಿತ್ರ ಗೌಡ ಸೇರಿದಂತೆ ಒಟ್ಟು 13 ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದೆ. ಇದೀಗ ಪೊಲೀಸ್ ಅಧಿಕಾರಿಗಳಿಗೆ ರಾಜಕಾರಣಿಗಳಿಂದ ಹಾಗೂ ಸ್ಯಾಂಡಲ್ ವುಡ್ ಹಿರಿಯರಿಂದ ದರ್ಶನನ್ನು ಬಂಧಿಸಬೇಡಿ ಎಂದು ಒತ್ತಡ ಹೇರುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಸ್ಯಾಂಡಲ್ ವುಡ್ ನ ಹಿರಿಯರಿಂದಲೂ ಬಂಧಿಸಿದಂತೆ ಒತ್ತಡ ಕೇಳಿಬಂದಿದೆ. ದರ್ಶನ್ ರನ್ನು ಆರೋಪಿ ಬದಲು ಸಾಕ್ಷಿಯನ್ನಾಗಿ ಮಾಡಿ ಎಂದು ಒತ್ತಡ ಹೇರುತ್ತಿದ್ದಾರೆ. ಈಗಾಗಲೇ ಪೊಲೀಸ್ ಫೈಲ್ ನಲ್ಲಿ ದರ್ಶನ್ ಪ್ರಮುಖ ಪಾತ್ರ ಎಂದು ಉಲ್ಲೇಖಿಸಿಲ್ಲಾಗಿದ್ದು, ದರ್ಶನ್ ಬಂಧಿಸಿದಂತೆ ಇದೀಗ ರಾಜಕಾರಣಿ ಗಳಿಂದ ಒತ್ತಡ ಕೇಳಿಬಂದಿದೆ.
*
ಅಶ್ಲೀಲ ಸಂದೇಶ ಕಳುಹಿಸಿದ ಆರೋಪ
ನಟಿ ಪವಿತ್ರಾ ಗೌಡರಿಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ ಆರೋಪದ ಮೇಲೆ ರೇಣುಕಾ ಸ್ವಾಮಿ ಎಂಬ ವ್ಯಕ್ತಿಯನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಇದುವರೆಗೂ ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ ಒಟ್ಟು 13 ಜನರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
ಈ ಮೊದಲು ಪವಿತ್ರ ಗೌಡರ ನೋ ಪೊಲೀಸರು ವಶಕ್ಕೆ ಪಡೆದಿದ್ದರು ಎಂಬ ಮಾಹಿತಿ ಲಭ್ಯವಾಗಿತ್ತು. ಇದೀಗ ಪೊಲೀಸರು ಸ್ಪಷ್ಟನೆ ನೀಡಿದ್ದು, ನಟ ದರ್ಶನ್ ಸೇರಿದಂತೆ ಪವಿತ್ರಾಗೌಡ ಹಾಗೂ 13 ಜನರನ್ನು ಬಂಧಿಸಲಾಗಿದೆ.
ಬೆಂಗಳೂರು ನಗರ ಆಯುಕ್ತ ಬಿ.ದಯಾನಂದ, “ಜೂನ್ 9 ರಂದು ಶವ ಪತ್ತೆಯಾಗಿದೆ. ಈ ಪ್ರಕರಣದಲ್ಲಿ ಇದೀಗ 13 ಜನರನ್ನು ಬಂಧಿಸಲಾಗಿದೆ. ಒಬ್ಬ ನಟನನ್ನು ವಶಕ್ಕೆ ತೆಗೆದುಕೊಳ್ಳಲಾಗುತ್ತದೆ. ತನಿಖೆಯ ನಂತರ ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದ್ದಾರೆ.
ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ರೇಣುಕಾಸ್ವಾಮಿ ಮೇಲೆ ಬೆಲ್ಟ್ ನಿಂದ ದರ್ಶನ್ ಹಲ್ಲೆ ಮಾಡಿದ್ದಾರೆ ಎಂಬ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ನನ್ನ ಗೆಳತಿಗೆ ಕೆಟ್ಟದಾಗಿ ಮೆಸೇಜ್ ಮಾಡ್ತೀಯಾ ಎಂದು ಪಟ್ಟಿ ಮಾದರಿಯ ವಸ್ತುವಿನಿಂದ ಹಲ್ಲೆ ನಡೆಸಿದ್ದರು ಎಂದು ವಿಚಾರಣೆಯ ವೇಳೆ ಮಾಹಿತಿ ಸಿಕ್ಕಿದೆ. ರೇಣುಕಾಸ್ವಾಮಿಯನ್ನ ಗೋಡೆಗೆ ಎತ್ತಿ ಎತ್ತಿ ಬಿಸಾಕಿದ್ದಾರಂತೆ ಎಂದು ತನಿಖೆಯ ವೇಳೆ ಬಹಿರಂವಾಗಿದೆ.
ಕೊಲೆ ಏಕೆ: ರೇಣುಕ ಸ್ವಾಮಿ ಕೊಲೆಗೂ ಮುನ್ನ ದರ್ಶನ್ ಮುಂದೆ ನಮ್ಮ ಬಾಸ್ ದರ್ಶನ್ ನಮ್ಮ ಬಾಸ್ ಸಂಸಾರವನ್ನು ಹಾಳು ಮಾಡಿದಕ್ಕೆ ಪವಿತ್ರ ಗೌಡಳಿಗೆ ಮೇಸೆಜ್ ಮಾಡಿದ್ದ ಎಂದು ಹೇಳಿದ್ದ ಎನ್ನಲಾಗಿದೆ.
ಚಿತ್ರದುರ್ಗ ಮೂಲದ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿದ ಆರೋಪದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ವಿಚಾರಣೆ ಒಳಪಡಿಸಿದಾಗ ಅವರು ದರ್ಶನ್ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಆರ್ ಆರ್ ನಗರದಲ್ಲಿ ಕೊಲೆ ಮಾಡಿ ದ್ದೇವೆ ಎಂದು ತಪ್ಪೊಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ಅಷ್ಟೇ ಅಲ್ಲದೇ ಕೊಲೆಗೆ ದರ್ಶನ್ ಸುಪಾರಿ ನೀಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.
ಸೆಕ್ಯೂರಿಟಿ ಗಾರ್ಡ್ ವಶಕ್ಕೆ
ನಟ ದರ್ಶನ್ ಸ್ನೇಹಿತಿ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ ಕಾರಣಕ್ಕಾಗೇ ಚಿತ್ರದುರ್ಗಿ ಮೂಲದ ರೇಣುಕಾಸ್ವಾಮಿ ಎಂಬಾತನನ್ನು ವಿನಯ್ ಎನ್ನುವವರಿಗೆ ಸೇರಿದ ಶೆಡ್ ಗೆ ಕರೆದೊಯ್ಯಲಾಗಿತ್ತು. ಕಿಡ್ನ್ಯಾಪ್ ಮಾಡಿ, ಅಲ್ಲಿ ಹಲ್ಲೆ ಕೂಡ ಮಾಡಲಾಗಿತ್ತು. ಈ ಹಲ್ಲೆಯ ವೇಳೆಯಲ್ಲಿ ಬಲವಾದ ರಾಡ್ ನಿಂದ ಹೊಡೆದ ಕಾರಣ, ರೇಣುಕಾಸ್ವಾಮಿ ಸಾವನ್ನಪ್ಪಿದ್ದರು.
ಘಟನೆ ಬಂಧಿತ ಆರೋಪಿ ವಿನಯ್ ಎಂಬುವರಿಗೆ ಸೇರಿದ ಶೆಡ್ ನಲ್ಲಿ ನಡೆದಿತ್ತು. ಈ ಹಿನ್ನಲೆಯಲ್ಲಿ ಶೆಡ್ ಬಳಿಯಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದಂತ ವ್ಯಕ್ತಿಯೊಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮರಣೋತ್ತರ ಪರೀಕ್ಷೆ,ರೇಣುಕಾಸ್ವಾಮಿ ಮೃತದೇಹದಲ್ಲಿ 15 ಕಡೆ ಗಾಯ
ವಿಕ್ಟೋರಿಯಾ ಆಸ್ಪತ್ರೆಯಲ್ಲಿ ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷೆ ನಡೆದಿದ್ದು ಪೊಲೀಸರು ವಿಕ್ಟೋರಿಯಾ ಆಸ್ಪತ್ರೆ ಶವಾಗಾರಕ್ಕೆ ರೇಣುಕಾಸ್ವಾಮಿ ಪೋಷಕರನ್ನ ಕರೆತಂದಿದ್ದಾರೆ.
ಮಗನ ಮೃತದೇಹದ ಗುರುತು ಪತ್ತೆ ಹಚ್ಚಿದ ಪೋಷಕರು ಮಗನ ಮೃತದೇಹ ಕಂಡು ಪೋಷಕರ ಕಣ್ಣೀರಿಟ್ಟಿದ್ದಾರೆ. ರೇಣುಕಾ ಸ್ವಾಮಿ ತಂದೆ ಕಾಶಿನಾಥ್ ಶಿವನಗೌಡ, ತಾಯಿ ರತ್ನಪ್ರಭಾ ಮಗನ ಮೃತದೇಹ ನೋಡಿ ಕಣ್ಣೀರಿಟ್ಟಿದ್ದಾರೆ.
ರೇಣುಕಾಸ್ವಾಮಿ ದೇಹದ ಮೇಲೆ ಸುಮಾರು 15 ಕಡೆ ಗಾಯವಾಗಿರುವುದು, 15 ಕಡೆ ಹಲ್ಲೆಯಾಗಿದೆ ಎಂದು ಪೊಲೀಸರಿಗೆ ವೈದ್ಯರು ಮಾಹಿತಿ ಕೊಟ್ಟಿದ್ದಾರೆ. ಮೂಗು, ಕಾಲು, ತಲೆ, ಬೆನ್ನು, ದವಡೆ ಸೇರಿದಂತೆ 15 ಕಡೆ ಗಾಯದ ಗುರುತು ಪತ್ತೆಯಾಗಿದೆ.
ಬಲವಾದ ವಸ್ತು, ಕಟ್ಟಿಗೆಯಿಂದ ರೇಣುಕಾಸ್ವಾಮಿ ಮೇಲೆ ಹಲ್ಲೆ ಮಾಡಲಾಗಿದೆ ಎನ್ನಲಾಗಿದೆ. ಮರಣೋತ್ತರ ಪರೀಕ್ಷೆ ವರದಿಯಲ್ಲಿ ಹಲ್ಲೆಯ ಸ್ವರೂಪ ಬೆಳಕಿಗೆ ಬಂದಿದೆ. ಎರಡ್ಮೂರು ದಿನದಲ್ಲಿ ಮರಣೋತ್ತರ ಪರೀಕ್ಷೆ ರಿಪೋರ್ಟ್ ಪೊಲೀಸರ ಕೈ ಸೇರಲಿದೆ.
ಪಟ್ಟಣಗೆರೆ ಗೋಡಾನ್ ನೊಳಗೆ ಎಫ್.ಎಸ್.ಎಲ್ ತಂಡವೂ ಹತ್ಯೆ ನಡೆದ ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದೆ. ಬೆರಳಚ್ಚು , ಶ್ವಾನದಳ ತಂಡ ಸಾಕ್ಷ್ಯ ಸಂಗ್ರಹ ಮಾಡುತ್ತಿದ್ದಾರೆ. ಮೃತ ದೇಹ ಹಸ್ತಾಂತರಕ್ಕೆ ತಂದೆ ತಾಯಿ ಬಳಿ ಸಹಿ ಪಡೆಯಲಾಗಿದೆ.