Tuesday, 23rd April 2024

ದಸರಾ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳು ಸಂಚಾರ ಅ.20 ರಿಂದ

ಳ್ಳಾರಿ: ಹುಬ್ಬಳ್ಳಿಯಲ್ಲಿ ಕೇಂದ್ರ ಕಛೇರಿ ಹೊಂದಿರುವ ನೈಋತ್ಯ ರೈಲ್ವೆ ದಸರಾ ಹಬ್ಬದ ಪ್ರಯುಕ್ತ ಹಲವು ಮಾರ್ಗಗಳಲ್ಲಿ ವಿಶೇಷ ರೈಲುಗಳನ್ನು ಓಡಿಸುತ್ತಿದೆ. ಬೆಂಗಳೂರು ನಗರಿಂದ ವಿವಿಧ ಸ್ಥಳಗಳಿಗೆ ವಿಶೇಷ ರೈಲುಗಳು ಸಂಚಾರ ನಡೆಸುತ್ತಿವೆ.

ವಾರಾಂತ್ಯದ ರಜೆ, ದಸರಾ ಹಬ್ಬದ ಸಂದರ್ಭದಲ್ಲಿಉಂಟಾಗುವ ಪ್ರಯಾಣಿಕರ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು ವಿಶೇಷ ರೈಲುಗಳನ್ನು ಘೋಷಣೆ ಮಾಡಿದೆ. ಅಕ್ಟೋಬರ್ 20 ರಿಂದ 24, 25ರ ತನಕ ವಿಶೇಷ ರೈಲುಗಳು ಓಡಲಿವೆ.

ಬಳ್ಳಾರಿಯ ಸಂಸದ ವೈ.ದೇವೇಂದ್ರಪ್ಪ ದಸರಾ ಸಂದರ್ಭದಲ್ಲಿ ಬೆಂಗಳೂರು ನಗರ ಮತ್ತು ಬಳ್ಳಾರಿ, ವಿಜಯನಗರಕ್ಕೆ ವಿಶೇಷ ರೈಲು ಓಡಿಸಬೇಕು ಎಂದು ಮನವಿ ಮಾಡಿದ್ದಾರೆ. ವಿಜಯನಗರ ಸಾಮಾಜ್ಯದ ಕಾಲದಿಂದಲೂ ಸಂಭ್ರಮದಿಂದ ಈ ಹಬ್ಬವನ್ನು ಆಚರಿಸಲಾಗುತ್ತದೆ ಎಂದು ಪತ್ರದಲ್ಲಿ ವಿವರಣೆ ನೀಡಿದ್ದಾರೆ.

ಹೆಚ್ಚಿನ ಜನರು ಬಳ್ಳಾರಿ, ವಿಜಯನಗರ, ಕೊಪ್ಪಳ ಜಿಲ್ಲೆಗೆ ಬೆಂಗಳೂರು ನಗರದಿಂದ ಸಂಚಾರ ನಡೆಸುತ್ತಾರೆ. ಈ ಸಂದರ್ಭದಲ್ಲಿ ಉಂಟಾಗುವ ಪ್ರಯಾಣಿಕರ ದಟ್ಟಣೆ ಕಡಿಮೆ ಮಾಡಲು ವಿಶೇಷ ರೈಲು ಓಡಿಸಬೇಕು ಎಂದು ಕೋರಿದ್ದಾರೆ.

Leave a Reply

Your email address will not be published. Required fields are marked *

error: Content is protected !!