Wednesday, 29th May 2024

ಆಕ್ಸಿಜನ್ ಬಸ್ ಗೆ ಚಾಲನೆ ನೀಡಿದ ಡಿಸಿಎಂ ಲಕ್ಷ್ಮಣ ಸವದಿ

ಕೊಪ್ಪಳ: ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಕೊಪ್ಪಳ ವಿಭಾಗದ ವತಿಯಿಂದ ನೂತನವಾಗಿ ತಯಾರಿಸಲಾದ ಆಕ್ಸಿಜನ್ ಬಸ್ಸನ್ನು ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಜಿಲ್ಲಾ ಆಸ್ಪತ್ರೆಯಲ್ಲಿ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಸಂಸದ ಕರಡಿ ಸಂಗಣ್ಣ, ಶಾಸಕರಾದ ಕೆ. ರಾಘವೇಂದ್ರ ಹಿಟ್ನಾಳ, ಪರಣ್ಣ ಮುನವಳ್ಳಿ, ಹಾಲಪ್ಪ ಆಚಾರ್ ಹಾಗೂ ಬಸವರಾಜ ದಢೇಸೂಗೂರು, ಕಾಡಾ ಅಧ್ಯಕ್ಷ ತಿಪ್ಪೇರುದ್ರಸ್ವಾಮಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಾಂತೇಶ ಪಾಟೀಲ, ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್, ಜಿಪಂ ಸಿಇಒ ರಘುನಂದನ್ ಮೂರ್ತಿ, ಎಸ್ಪಿ ಟಿ. ಶ್ರೀಧರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಟಿ.ಲಿಂಗರಾಜು, ಕೆ.ಎಸ್.ಆರ್.ಟಿ.ಸಿ ಕೊಪ್ಪಳ ವಿಭಾಗೀಯ ನಿಯಂತ್ರಣಾಧಿಕಾರಿ ಎಂ.ಎ. ಮುಲ್ಲಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!