Sunday, 28th April 2024

ಧರ್ಮಸ್ಥಳ ಮೇಳದ ಹಿರಿಯ ಕಲಾವಿದ ಡಾ.ಶ್ರೀಧರ ಭಂಡಾರಿ ನಿಧನ

ಪುತ್ತೂರು: ಧರ್ಮಸ್ಥಳ ಮೇಳದ ಹಿರಿಯ ಕಲಾವಿದ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ,  ಡಾ.ಶ್ರೀಧರ ಭಂಡಾರಿ(73) ವರ್ಷ ಪುತ್ತೂರು ಅವರು ನಿಧನರಾದರು.

ಯಕ್ಷಗರಂಗದ ಸಿಡಿಲಮರಿ ಎಂದು ಹೆಸರು ಗಳಿಸಿದ್ದ ಶ್ರೀಧರ ಭಂಡಾರಿ ಅವರಿಗೆ ಕಾಲುನೋವು ಕಾಡಿತ್ತು. ತಂದೆ ಸಂಘಟಕ, ಕಲಾವಿದ ದಿ.ಪುತ್ತೂರು ಶೀನಪ್ಪ ಭಂಡಾರಿ ಅವರಿಂದ ಯಕ್ಷಗಾನ ಅಭ್ಯಸಿಸಿದ್ದ ಶ್ರೀಧರ ಅವರು ನಂತರದಲ್ಲಿ ಕುರಿಯ ವಿಠ್ಠಲ ಶಾಸ್ತ್ರಿ, ಹೊಸಹಿತ್ಲು ಮಾಲಿಂಗ ಭಟ್ಟರು, ಕೆ.ಗೋವಿಂದ ಭಟ್ ಸೇರಿದಂತೆ ಹಲವರಿಂದ ಯಕ್ಷಗಾನ ಕಲೆಯನ್ನು ಕರಗತ ಮಾಡಿ ಕೊಂಡರು. ಸಂಘಟಕರೂ ಆಗಿದ್ದ ಅವರು ಸುಬ್ರಹ್ಮಣ್ಯ ಮೇಳ, ಪುತ್ತೂರು ಮೇಳಗಳನ್ನು ನಡೆಸಿದ್ದರು.

ಅಭಿಮನ್ಯು, ಬಭ್ರುವಾಹನ, ಕೃಷ್ಣ, ಭಾರ್ಗವ ಸೇರಿದಂತೆ ಹಲವು ಪಾತ್ರಗಳು ಅವರಿಗೆ ಹೆಸರು ತಂದುಕೊಟ್ಟಿದ್ದವು.

ಶ್ರೀಧರ ಭಂಡಾರಿ ಅವರ ನಿಧನಕ್ಕೆ ಯಕ್ಷಗಾನ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!