ತುಮಕೂರು: ಕೇಂದ್ರ ಮತ್ತು ರಾಜ್ಯ ಸರಕಾರಗಳ ರೈತ,ಕಾರ್ಮಿಕ,ಯುವಜನ ಜನವಿರೋಧಿ ನೀತಿಗಳನ್ನು ಖಂಡಿಸಿ, ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾಸಮಿತಿ ವತಿಯಿಂದ ಬೆಂಗಳೂರಿನ ಪ್ರೀಡಂ ಪಾರ್ಕಿನಲ್ಲಿ ನ.26ರಿಂದ 28ರವರೆಗೆ 72 ಗಂಟೆಗಳ ಬೃಹತ ಆಹೋರಾತ್ರಿ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಹಾಗೂ ರಾಜ್ಯ ಉಪಾಧ್ಯಕ್ಷ ಎ.ಗೋವಿಂದರಾಜು ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ರೈತರಿಗೆ,ಕಾರ್ಮಿಕರಿಗೆ ಕೊಟ್ಟ ಭರವಸೆಯನ್ನು ಈಡೇರಿಸಿದೆ,ಮಾತಿಗೆ ತಪ್ಪಿರುವ ಎರಡು ಸರಕಾರಗಳ ವಿರುದ್ದ ಸುಮಾರು 50 ಸಾವಿರಕ್ಕೂ ಹೆಚ್ಚು ಜನ ರೈತರು, ಕಾರ್ಮಿಕರು, ಯುವಜನರು ಈ ಹೋರಾಟದಲ್ಲಿ ಭಾಗಿಯಾಗುತ್ತಿದ್ದು,ಇದಕ್ಕಾಗಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ರೈತ ತÀಂಘ ಹಾಗೂ ವಿವಿಧ ಕಾರ್ಮಿಕ ಸಂಘಟನೆಗಳು ಸಭೆ, ಕರಪತ್ರ ಹಂಚಿಕೆ,ಜಾಗೃತಿ ಸಭೆಗಳನ್ನು ನಡೆಸಲಾಗಿದೆ ಎಂದರು.
ಕೇಂದ್ರ ಸರಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದ ಕೃಷಿ ಕಾಯ್ದೆಗಳನ್ನು ಇಡೀ ದೇಶದಲ್ಲಿ ಮೊದಲ ಬಾರಿಗೆ ಬಿ.ಎಸ್.ಯಡಿಯೂರಪ್ಪ ಕರ್ನಾಟಕ ದಲ್ಲಿ ಜಾರಿಗೆ ತಂದಿದರು.ಇದರ ವಿರುದ್ದ ಹೋರಾಟ ಆರಂಭವಾದಾಗ ಅಂದು ವಿರೋಧಪಕ್ಷದ ನಾಯಕರಾಗಿದ್ದ ಇಂದಿನ ಸಿ.ಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷರಾಗಿದ್ದ ಡಿ.ಕೆ.ಶಿವಕುಮಾರ್ ಅವರು,ಹೋರಾಟಗಾರರೊಂದಿಗೆ ಬೆಂಬಲ ಸೂಚಿಸಿ,ಸಭೆಗಳಲ್ಲಿ ಪಾಲ್ಗೊಂಡು, ನಮ್ಮ ಸರಕಾರ ಅಧಿಕಾರಕ್ಕೆ ಬಂದರೆ ಮೂರು ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವ ಭರವಸೆ ನೀಡಿದ್ದರು.ಆದರೆ ಸರಕಾರ ಬಂದು ಐದು ತಿಂಗಳು ಕಳೆದರೂ ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ.ಸರಕಾರ ಕೊಟ್ಟ ಮಾತಿಗೆ ತಪ್ಪಿದೆ.ಹಾಗಾಗಿ ರಾಜ್ಯ ಸರಕಾರದ ವಿರುದ್ದವೂ ಹೋರಾಟ ನಡೆಯಲಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಶಂಕರಪ್ಪ,ಸಂಘಟನಾ ಕಾರ್ಯದರ್ಶಿ ರವೀಶ್, ಜಿಲ್ಲಾ ಮಹಿಳಾ ಅಧ್ಯಕ್ಷ ನಾಗರತ್ನಮ್ಮ, ಕೆ.ಎನ್.ವೆಂಕಟೇಗೌಡ,ಪಾ ವಗಡ ಪೂಜಾರಪ್ಪ,ಚಿಕ್ಕಬೋರೇಗೌಡ,ನರಸಿಂಹಮೂ ರ್ತಿ, ಲೋಕೇಶ್, ಅರಕೆರೆ ಮಂಜು, ಭಾಗ್ಯಮ್ಮ ಹಾಗೂ ಎಲ್ಲಾ ತಾಲೂಕು ಅಧ್ಯಕ್ಷರು, ಕಾರ್ಯದರ್ಶಿಗಳು ಪಾಲ್ಗೊಂಡಿದ್ದರು.