Sunday, 8th September 2024

ಶಾಸಕ ಡಾ.ಶಿವರಾಜ್ ಪಾಟೀಲ್ ತಂದೆ ವಿಧಿವಶ

ರಾಯಚೂರು: ರಾಯಚೂರು ನಗರ ಶಾಸಕ ಡಾ.ಶಿವರಾಜ್ ಪಾಟೀಲ್‌ರ ತಂದೆ ವೀರನಗೌಡ ಮಾಲಿಪಾಟೀಲ್ ಸಾನಬಾಳ (84) ವಿಧಿವಶರಾಗಿದ್ದಾರೆ.

ಕಳೆದ ಎರಡು ತಿಂಗಳಿನಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ವೀರನಗೌಡ ಮಾಲಿಪಾಟೀಲ್ ಆಸ್ಪತ್ರೆಗೆ ದಾಖಲಾಗಿ ದ್ದರು. ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

ಇಂದು ಮಧ್ಯಾಹ್ನ 2 ಗಂಟೆವರೆಗೆ ರಾಯಚೂರು ನಗರದ ಸ್ವಗೃಹದಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ನೀಡಲಾಗಿತ್ತು. ಸಂಜೆ ಐದು ಗಂಟೆಗೆ ನೀರಮಾನ್ವಿಯಲ್ಲಿ ಅಂತ್ಯಸಂಸ್ಕಾರ ವಿಧಿ ವಿಧಾನಗಳೊಂದೆ ನೆರವೇರಿಸಲಾಗುವುದು ಎಂದು ಶಿವರಾಜ್ ಪಾಟೀಲ್ ಕುಟುಂಬಸ್ಥರು ತಿಳಿಸಿದ್ದಾರೆ.

error: Content is protected !!