ಬೆಂಗಳೂರು: ಸಾವರ್ಕರ್ ಕುರಿತ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಅವರ ಹೇಳಿಕೆಗೆ ಹಿಂದುಪರ ಸಂಘಟನೆಗಳು, ಬಿಜೆಪಿ ನಾಯಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಸಾವರ್ಕರ್ ಅವರು ಚಿತ್ಪಾವನ ಬ್ರಾಹ್ಮಣರಾಗಿದ್ದರಾದರೂ ಮಾಂಸಾಹಾರಿಯಾಗಿದ್ದರು ಮತ್ತು ಗೋಮಾಂಸ ಸೇವಿಸುತ್ತಿದ್ದರು ಎಂಬ ಆರೋಗ್ಯ ಸಚಿವರ ಹೇಳಿಕೆಗೆ ರಾಜ್ಯ ಬಿಜೆಪಿ ಕಿಡಿಕಾರಿದ್ದು, ಈ ಬಗ್ಗೆ ನಿಮಗೆ ಹೇಳಿದ್ಯಾರು ಎಂದು ಪ್ರಶ್ನಿಸಿದೆ.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ರಾಜ್ಯ ಬಿಜೆಪಿ, ಬ್ರಾಹ್ಮಣ ಸಮಾಜದ ವೀರ ಸಾವರ್ಕರ್ ಅವರು ಗೋಮಾಂಸ ಸೇವಿಸುತ್ತಿದ್ದರು ಎಂದು ನಿಮಗೆ ಬ್ರಾಹ್ಮಣ ಸಮಾಜದ ನಿಮ್ಮ ತಂದೆ ಗುಂಡೂರಾವ್ ಹೇಳಿದ್ದರೋ ಅಥವಾ ಮುಸ್ಲಿಂ ಸಮಾಜದ ನಿಮ್ಮ ಪತ್ನಿ ತಬಸ್ಸುಮ್ ಅವರು ಹೇಳಿದ್ದರೋ ಎಂದು ಆಕ್ರೋಶ ಹೊರಹಾಕಿದೆ.
ಕಾಂಗ್ರೆಸ್ ನಾಯಕರು, ವೀರ್ ಸಾವರ್ಕರ್ ಬಗ್ಗೆ ಸುಳ್ಳುಗಳನ್ನು ಹರಡುತ್ತಿದ್ದಾರೆ. ಭಾರತದ ಸ್ವಾತಂತ್ರ್ಯಕ್ಕಾಗಿ ಸಾವರ್ಕರ್ ಅವರ ತ್ಯಾಗಗಳನ್ನು ಕೀಳು ಮಟ್ಟದ ರಾಜಕೀಯಕ್ಕೆ ಬಳಸಿಕೊಳ್ಳುತ್ತಿದ್ದು, ಇದರಿಂದ ಮರಾಠರು ಮತ್ತು ಮಹಾರಾಷ್ಟ್ರದ ಬಗ್ಗೆ ಕಾಂಗ್ರೆಸ್‌ನ ದ್ವೇಷ ಸ್ಪಷ್ಟವಾಗಿ ಕಾಣುತ್ತದೆ ಎಂದು
‘Savarkar was a beef eater’?! 😡 Shocking to see Congress leaders like @dineshgrao spreading lies about Veer Savarkar ! His sacrifices for India’s freedom cannot be tarnished by cheap political narratives. Congress’s hatred for Marathas and Maharashtra is clearly visible!… pic.twitter.com/8Q2yNYY5Pb
— BJP Karnataka (@BJP4Karnataka) October 3, 2024
Gandhi Jayanti: ಬ್ರಾಹ್ಮಣ ಸಾವರ್ಕರ್ ಮಾಂಸಾಹಾರವನ್ನು ಬಹಿರಂಗವಾಗಿ ಸಮರ್ಥಿಸುತ್ತಿದ್ದರು; ದಿನೇಶ್ ಗುಂಡೂರಾವ್
ಬೆಂಗಳೂರಿನಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಸೋಮವಾರ ಆಯೋಜಿಸಿದ್ದ ‘ಗಾಂಧೀಜಿಯ ಹಂತಕ’ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಿವಾದಿತ ಹೇಳಿಕೆ ನೀಡಿದ್ದರು. ಬ್ರಾಹ್ಮಣ ಸಮಾಜದ ಸಾವರ್ಕರ್ ಅವರು ಮಾಂಸ ಸೇವಿಸುತ್ತಿದ್ದರು. ಮಾಂಸಹಾರ ಸೇವನೆಯನ್ನು ಅವರು ಬಹಿರಂಗವಾಗಿ ಸಮರ್ಥಿಸುತ್ತಿದ್ದರು. ಹಾಗೆ ನೋಡಿದರೆ ಸಾವರ್ಕರ್ ಒಂದು ರೀತಿಯಲ್ಲಿ ಮಾಡರ್ನಿಷ್ಟ್ ಆಗಿಯೂ ಕಾಣುತ್ತಾರೆ. ಆದರೆ ಮೂಲಭೂತವಾದಿಯಾಗಿದ್ದರು ಎಂಬುದರಲ್ಲಿ ಸಂಶಯವಿಲ್ಲ. ಮೂಲಭೂತವಾದ ನಮ್ಮ ಭಾರತ ದೇಶದ ಸಂಸ್ಕೃತಿಯಲ್ಲ. ಇದು ಯುರೋಪ್‌ನಿಂದ ಬಂದಿರುವಂತದ್ದು. ಸಾವರ್ಕರ್ ಯೂರೋಪ್‌ನಿಂದ ಸಾಕಷ್ಟು ಪ್ರಭಾವ ಹೊಂದಿದ್ದರು. ಆದರೆ ಗಾಂಧೀಜಿಯವರು ಸಸ್ಯಹಾರಿ. ನಮ್ಮ ಸಂಸ್ಕೃತಿ, ಸಂಪ್ರದಾಯಗಳ ಮೇಲೆ ಗಾಂಧೀಜಿಯವರಿಗೆ ಅಪಾರವಾದ ನಂಬಿಕೆ ಇತ್ತು ಎಂದಿದ್ದರು.