ಹುಬ್ಬಳ್ಳಿ: ಪಶ್ಚಿಮ ಪದವೀಧರರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರ ಅವರ ಪರವಾಗಿ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಪ್ರಚಾರ ನಡೆಸಿದರು.
ಮಯೂರಿ ಬಡವಣೆಯ ಚಿನ್ಮಯ ಮಹಾವಿದ್ಯಾಲಯದಲ್ಲಿ ಪ್ರಚಾರ ನಡೆಸಿದ ಅವರು, ‘ಸಂಕನೂರ ಅವರಿಗೆ ಪ್ರಥಮ ಪ್ರಾಶಸ್ತ್ಯ ದ ಮತ ನೀಡಬೇಕು. ಅವರನ್ನು ಆಯ್ಕೆ ಮಾಡುವ ಮೂಲಕ ಯಡಿಯೂರಪ್ಪ ಹಾಗೂ ನನ್ನ ಕೈ ಬಲ ಪಡಿಸಬೇಕು’ ಎಂದರು.
‘ಕಳೆದ ಚುನಾವಣೆಯಲ್ಲಿ ಅಂದಾಜು 3 ರಿಂದ 4 ಸಾವಿರ ಮತಗಳು ತಿರಸ್ಕೃತಗೊಂಡಿವೆ. ಈ ಬಾರಿ ಸರಿಯಾಗಿ ಮತ ಚಲಾ ಯಿಸಬೇಕು’ ಎಂದು ಹೇಳಿದರು.
ಹುಬ್ಬಳ್ಳಿಯಲ್ಲಿ ಹೂಡಿಕೆದಾರರ ಸಮಾವೇಶ ಮಾಡುವ ಮೂಲಕ ಅಂದಾಜು 30 ಸಾವಿರ ಜನರಿಗೆ ಉದ್ಯೋಗ ಒದಗಿಸಲು ಮುಂದಾಗಿದ್ದೇವೆ. ನಿರುದ್ಯೋಗಿ ಪದವೀಧರರಿಗೆ ಉದ್ಯೋಗ ಕಲ್ಪಿಸಲು ಸರ್ವ ಪ್ರಯತ್ನ ಮಾಡಲಾಗುತ್ತಿದೆ’ ಎಂದರು. ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ್, ಮಹೇಶ ಟೆಂಗಿನಕಾಯಿ, ಸಂತೋಷ ಚವ್ಹಾಣ, ಮಲ್ಲಿಕಾರ್ಜುನ ಸಾವಕಾರ, ದತ್ತಮೂರ್ತಿ ಕುಲಕರ್ಣಿ, ಮಹೇಂದ್ರ ಕೌತಾಳ, ರವಿ ನಾಯಕ, ವಸಂತ ನಾಡಜೋಶಿ ಇದ್ದರು.