Wednesday, 6th November 2024

ಡಿ.ಕೆ.ಶಿ ಮೇಲಿನ ದ್ವೇಷಕ್ಕಾಗಿಯೇ ಸೂದ್ ಸಿಬಿಐ ನಿರ್ದೇಶಕರಾಗಿ ನೇಮಕ: ಕೆ.ಎನ್. ರಾಜಣ್ಣ

ತುಮಕೂರು : ಡಿ.ಕೆ. ಶಿವಕುಮಾರ್ ಅವರ ಮೇಲಿನ ದ್ವೇಷಕ್ಕಾಗಿಯೇ ಸಿಬಿಐ ನಿರ್ದೇಶಕ ರಾಗಿ ಪ್ರವೀಣ್ ಸೂದ್ ಅವರನ್ನು ನೇಮಿಸಲಾಗುತ್ತಿದೆ ಎಂದು ಮಧುಗಿರಿ ಕಾಂಗ್ರೆಸ್ ಶಾಸಕ ಕೆ.ಎನ್. ರಾಜಣ್ಣ ಹೊಸ ಬಾಂಬ್ ಸಿಡಿಸಿದ್ದಾರೆ.

ಡಿ.ಕೆ.ಶಿವಕುಮಾರ್ ಅವರ ಮೇಲಿನ ದ್ವೇಷಕ್ಕಾಗಿಯೇ ಸಿಬಿಐ ನಿರ್ದೇಶಕರಾಗಿ ಪ್ರವೀಣ್ ಸೂದ್ ಅವರನ್ನು ನೇಮಿಸಲಾಗುತ್ತಿದೆ. ಹೆದರಿಸುವುದು ಬ್ಲ್ಯಾಕ್ ಮೇಲ್ ರಾಜಕಾರಣ ಮಾಡುವುದು ಬಿಜೆಪಿಯ ಕೆಲಸ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ನೂರಕ್ಕೆ ನೂರರಷ್ಟು ಸಿದ್ದರಾಮಯ್ಯ ಸಿಎಂ ಆಗ್ತಾರೆ, ಹೈಕಮಾಂಡ್ ಒಲವು ಕೂಡ ಸಿದ್ದರಾಮಯ್ಯ ಪರ ಇದೆ. ಇಂದು ಸಿಎಂ ಆಯ್ಕೆ ಫೈನಲ್ ಆಗಲಿದ್ದು, ಮೇ. 18 ರಂದು ಸಿದ್ದರಾಮಯ್ಯ ನೂತನ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸ ಬಹುದು. ಮೊದಲಿಗೆ ಸಿದ್ದರಾಮಯ್ಯ ಒಬ್ಬರೇ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ.

ಬಳಿಕ ಸಚಿವ ಸಂಪುಟ ಸ್ವಲ್ಪ ತಡವಾಗಬಹುದು. ಮೊದಲ ಸಂಪುಟದಲ್ಲೇ ಅನ್ನಭಾಗ್ಯ ಯೋಜನೆ ಜಾರಿ ಮಾಡುತ್ತೇವೆ. ನಾನು ಸಚಿವನಾಗಲೇಬೇಕು. ಸಹಕಾರ ಸಚಿವ ಸ್ಥಾನವೇ ಬೇಕು ಎಂದರು.