Wednesday, 27th November 2024

ಶಿರಾ-ಅಮರಾಪುರ ರಸ್ತೆ ಅಭಿವೃದ್ಧಿಗೆ 75 ಕೋಟಿ ರೂ.; ಡಾ.ಸಿ.ಎಂ.ರಾಜೇಶ್ ಗೌಡ

ಲಕ್ಕನಹಳ್ಳಿಯಲ್ಲಿ ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಕಾರ್ಯಕ್ರಮ

ಶಿರಾ: ಶಿರಾ-ಅಮರಾಪುರ ರಸ್ತೆಯನ್ನು ರಾಜ್ಯ ಹೆದ್ದಾರಿಯಾಗಿ ಸುಮಾರು 75 ಕೋಟಿ ರೂ.ಗಳಲ್ಲಿ ಅಭಿವೃದ್ಧಿ ಪಡಿಸಲಾಗು ವುದು. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ವತಿಯಿಂದ ತಾಲ್ಲೂಕು ಕೇಂದ್ರವಾದ ಶಿರಾದಲ್ಲಿ ವಿಭಾಗೀಯ ಕಚೇರಿಯನ್ನು ಶೀಘ್ರ ದಲ್ಲಿ ಉದ್ಘಾಟನೆ ಮಾಡಲಾಗುವುದು ಎಂದು ಶಾಸಕ ಡಾ.ಸಿ.ಎಂ. ರಾಜೇಶ್ ಗೌಡ ತಿಳಿಸಿದರು.

ಅವರು ತಾಲ್ಲೂಕಿನ ಹುಲಿಕುಂಟೆ ಹೋಬಳಿ, ತಡಕಲೂರು ಗ್ರಾಮ ಪಂಚಾ ಯಿತಿ ವ್ಯಾಪ್ತಿಯ ಲಕ್ಕನಹಳ್ಳಿ ಗ್ರಾಮದಲ್ಲಿ ನಡೆದ ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು, ಸರಕಾರದ ಯೋಜನೆ ಗಳು, ಮೂಲಭೂತ ಸೌಕರ್ಯಗಳು ನೇರವಾಗಿ ಫಲಾನುಭವಿಗಳಿಗೆ ತಲುಪ ಬೇಕು ಎಂಬುದು ಸರಕಾರದ ಆಶಯವಾಗಿದ್ದು, ಈ ಹಿನ್ನೆಲೆಯಲ್ಲಿ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯಕಡೆ’ ಕಾರ್ಯಕ್ರಮದ ಮೂಲಕ ಅರ್ಹ ಫಲಾನುಭವಿಗಳಿಗೆ ಇದೊಂದು ಸೂಕ್ತ ವೇದಿಕೆಯಾಗಿದೆ.

ಕಳೆದ ಒಂದೂವರೆ ವರ್ಷದ ಹಿಂದೆ ಪ್ರಾರಂಭವಾದ ‘ಜಿಲ್ಲಾಧಿಕಾರಿ ನಡೆ ಹಳ್ಳಿಕಡೆ’ ಕಾರ್ಯಕ್ರಮ ಜಿಲ್ಲಾಧಿಕಾರಿಗಳು ಹಳ್ಳಿಗಳಿಗೆ ತೆರಳಿ ಗ್ರಾಮೀಣ ಭಾಗದಲ್ಲಿ ಇರುವ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಇತ್ಯರ್ಥಗೊಳಿಸಲು ಈ ಕಾರ್ಯಕ್ರಮ ರೂಪಿಸಲಾಯಿತು. ಕಂದಾಯ ಇಲಾಖೆ ಸೇರಿ ಯಾವುದೇ ಇಲಾಖೆಯ ಸಮಸ್ಯೆಗಳಿದ್ದಲ್ಲಿ ಈ ವೇದಿಕೆಯಲ್ಲಿ ಬಗೆಹರಿಸಿಕೊಳ್ಳಬಹುದಾಗಿದೆ ಎಂದು ಹೇಳಿದರು.

ತಾಲ್ಲೂಕಿನ ವಸತಿ ರಹಿತರಿಗೆ ವಸತಿ ಕಲ್ಪಿಸುವ ಉದ್ದೇಶದಿಂದ ಒಂದು ಸಾವಿರ ಹೆಚ್ಚು ವರಿ ಮನೆಗಳ ನಿರ್ಮಾಣಕ್ಕೆ ಆದ್ಯತೆ ನೀಡುವಂತೆ ವಸತಿ ಸಚಿವರಿಗೆ ಮನವಿ ಸಲ್ಲಿಸ ಲಾಗಿದೆ ಹಾಗೂ ಭೌಗೋಳಿಕವಾಗಿ ಹಾಗೂ ಜನಸಂಖ್ಯೆಯಲ್ಲಿ ಶಿರಾ ತಾಲ್ಲೂಕು ಎರಡನೇ ಸ್ಥಾನದಲ್ಲಿದ್ದು, ತಾಲ್ಲೂಕಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವುದರ ಜೊತೆಗೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ರೇಷ್ಮೆ ಅಭಿವೃದ್ಧಿ ಮಂಡಳಿ ನಿಗಮದ ಅಧ್ಯಕ್ಷ ಎಸ್.ಆರ್. ಗೌಡ ಮಾತನಾಡಿ, ಈ ಹಿಂದೆ ಹಳ್ಳಿಯ ಜನ ಸಮಸ್ಯೆಗಳ ಇತ್ಯರ್ಥ ಕ್ಕಾಗಿ ಜಿಲ್ಲಾಧಿಕಾರಿಗಳ ಕಚೇರಿಗೆ ಅಲೆಯುತ್ತಿದ್ದರು. ಇಂದು ಜಿಲ್ಲಾಧಿಕಾರಿಗಳೇ ಹಳ್ಳಿಯ ಕಡೆ ಬಂದು ಸಮಸ್ಯೆಗಳನ್ನು ಇತ್ಯರ್ಥ ಪಡಿಸಲು ಬಂದಿದ್ದಾರೆ. ರೈತರು, ನಾಗರೀಕರು ತಮ್ಮ ಗ್ರಾಮದ ಹಾಗೂ ತಮ್ಮ ವಯಕ್ತಿಕ ಸಮಸ್ಯೆ ಗಳನ್ನು ಇತ್ಯರ್ಥ ಗೊಳಿಸಬಹುದು.

ಇದು ಕೇವಲ ಕಂದಾಯ ಇಲಾಖೆಗೆ ಮಾತ್ರ ಸೀಮಿತವಾದ ಕಾರ್ಯಕ್ರಮವಲ್ಲ ಎಂದ ಅವರು, ಅನ್ನದಾತ ರೈತನ ಜಮೀನಿಗೆ ಸಂಬAಧಿಸಿದ ಸಮಸ್ಯೆಗಳು ಉಲ್ಬಣಗೊಳ್ಳುತ್ತಿದ್ದು, ಮಾತೃ ಇಲಾಖೆಯಾದ ಕಂದಾಯ ಇಲಾಖೆಯ ಮೂಲಕ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದರು.

ತೆಂಗಿನ ನಾರು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಬಿ.ಕೆ. ಮಂಜುನಾಥ್ ಮಾತನಾಡಿ ಸರಕಾರಿ ಸೌಲಭ್ಯಗಳನ್ನು ಅರ್ಹ ಫಲಾನುಭವಿ ಗಳಿಗೆ ತಲುಪಿಸುವುದು ಸರಕಾರದ ಉದ್ದೇಶವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ನಡೆ ಹಳ್ಳಿಕಡೆ ಕಾರ್ಯಕ್ರಮ ರೂಪಿಸಲಾಗಿದೆ ಎಂದರು.

ಕಂದಾಯ ಇಲಾಖೆ ವತಿಯಿಂದ ವೃದ್ದಾಪ್ಯ, ಅಂಗವಿಕಲ, ವಿಧವಾ ವೇತನ ಸೇರಿದಂತೆ ವಿವಿಧ ರೀತಿಯ ಮಾಸಾಶನ ಮಂಜೂ ರಾತಿ ಪತ್ರಗಳನ್ನು ಸಾಂಕೇತಿಕವಾಗಿ ಈ ಸಂದರ್ಭ ಶಾಸಕರು ಹಾಗೂ ಜಿಲ್ಲಾಧಿಕಾರಿಗಳು ಅರ್ಹ ಫಲಾನುಭವಿಗಳಿಗೆ ವಿತರಿಸಿದರು. ಕಾರ್ಮಿಕ ಇಲಾಖೆಯಿಂದ ೫ ಜನ ಫಲಾನುಭವಿ ಕಾರ್ಮಿಕರಿಗೆ ಮಷಿನ್ ಟೂಲ್ ಕಿಟ್ ಮತ್ತು ಮೆಡಿಸಿನ್ ಕಿಟ್‌ಗಳನ್ನು ನೀಡ ಲಾಯಿತು ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ೨೦೨೧-೨೨ನೇ ಸಾಲಿನ ಅಂಬೇಡ್ಕರ್, ಬಸವ ವಸತಿ ಯೋಜನೆಗಳ ೧೦ ಫಲಾನುಭವಿಗಳಿಗೆ ಕಾಮಗಾರಿ ಆರಂಭಕ್ಕೆ ಹಕ್ಕುಪತ್ರಗಳನ್ನು ವಿತರಿಸಲಾಯಿತು.

ರೈತರು/ ನಾಗರೀಕರು ತಮ್ಮ ಅಹವಾಲುಗಳನ್ನು ವೇದಿಕೆ ಮೇಲಿದ್ದ ಜಿಲ್ಲಾಧಿಕಾರಿಗಳ ಬಳಿ ತೆರಳಿ ಸಲ್ಲಿಸಿದರು. ಅಹವಾಲು ಗಳನ್ನು ಸ್ವೀಕರಿಸಿ ಮನವಿ ಆಲಿಸಿದ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು, ಸಂಬAಧಪಟ್ಟ ಅಧಿಕಾರಿಗಳನ್ನು ಕರೆಸಿ ಶೀಘ್ರ ವಾಗಿ ಜನರ ಸಮಸ್ಯೆಗಳನ್ನು ಇತ್ಯರ್ಥಗೊಳಿಸುವಂತೆ ಸೂಚಿಸಿದರು.

ಕಾರ್ಯಕ್ರಮಕ್ಕೂ ಮುನ್ನ ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ನಿಮಿತ್ತ ಜಿಲ್ಲೆಯ ಗಡಿ ಗ್ರಾಮ ಲಕ್ಕನಹಳ್ಳಿಗೆ ಆಗಮಿ ಸಿದ ಜಿಲ್ಲಾಧಿಕಾರಿಗಳಿಗೆ ಪೂರ್ಣಕುಂಭ ಸ್ವಾಗತ ಕೋರಿದ ಗ್ರಾಮಸ್ಥರು ಎತ್ತಿನಗಾಡಿಯ ಮೇಲೆ ಮೆರವಣಿಗೆ ಮೂಲಕ ವೇದಿಕೆ ಯವರೆಗೂ ಕರೆದೊಯ್ದರು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಕೆ. ಚನ್ನಬಸಪ್ಪ, ಉಪವಿಭಾಗಾಧಿಕಾರಿ ಸೋಮಪ್ಪ ಕಡಕೋಳ, ತಹಶೀಲ್ದಾರ್ ಎಂ. ಮಮತ, ಗ್ರಾ.ಪಂ. ಅಧ್ಯಕ್ಷೆ ನಾಗಮಣಿ, ಉಪಾಧ್ಯಕ್ಷೆ ಸುಶೀಲಮ್ಮ, ಮಂಜಣ್ಣ, ಬೆಜ್ಜಿಹಳ್ಳಿ ರಾಮಚಂದ್ರಪ್ಪ, ಮಂಜೇಶ್, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.