Saturday, 12th October 2024

ಶಿಕ್ಷಣ ಪ್ರೇಮಿ ಪರಮೇಶ್ವರ್ 71ನೇ ಹುಟ್ಟುಹಬ್ಬದ ಆಚರಣೆ

ತುಮಕೂರು: ಶಿಕ್ಷಣ ಪ್ರೇಮಿ, ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ. ಜಿ. ಪರಮೇಶ್ವರ್ ಅವರ ೭೧ನೇ ಹುಟ್ಟುಹಬ್ಬ ವನ್ನು ನಗರದ ಹೆಗ್ಗೆರೆಯಲ್ಲಿ ಸರಳವಾಗಿ ಆಚರಿಸಲಾಯಿತು.

ಹೆಗ್ಗೆರೆಯ ತಮ್ಮ ನಿವಾಸದಲ್ಲಿ ಅಭಿಮಾನಿಗಳು ರ‍್ಪಡಿಸಿದ್ದ ಸರಳ ಹುಟ್ಟುಹಬ್ಬ ಕರ‍್ಯಕ್ರಮ ದಲ್ಲಿ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡ ನಂತರ ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ನನಗೆ ಇಂದಿಗೆ ೭೧ ರ‍್ಷ ತುಂಬಿದೆ. ಅತ್ಯಂತ ಸರಳವಾಗಿ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದೇನೆ. ರಾಜ್ಯದ ನಾನಾ ಜಿಲ್ಲೆಗಳಿಂದ ಅಭಿಮಾನಿಗಳು, ಕರ‍್ಯರ‍್ತರು ಮನೆಗೆ ಬಂದು ಶುಭಾ ಶಯ ಕೋರಿದ್ದಾರೆ. ಯಾರ ಕೈಗೂ ಸಿಗದೆ ತಪ್ಪಿಸಿಕೊಂಡು ಹೋಗಲು ಪ್ಲಾನ್ ಮಾಡಿದ್ದೆ. ಆದರೆ ಅಭಿಮಾನಿಗಳಿಗೆ ನಿರಾಸೆಯಾಗ ಬಾರದು ಎಂಬ ಉದ್ದೇಶದಿಂದ ಇಲ್ಲಿಯೇ ಉಳಿದುಕೊಂಡಿದ್ದೇನೆ ಎಂದರು.

ನನಗೆ ಸಿದ್ದರಾಮೋತ್ಸವ ಮಾದರಿಯಲ್ಲಿ ಅಷ್ಟೊಂದು ಅದ್ದೂರಿಯಾಗಿ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳಲು ಆಸಕ್ತಿ ಇಲ್ಲ. ಹಾಗೆಯೇ ಸಿದ್ದರಾಮಯ್ಯನವರಿಗೂ ಆಸಕ್ತಿ ಇರಲಿಲ್ಲ. ಅವರ ಅಭಿಮಾನಿಗಳು ಸೇರಿ ಹುಟ್ಟುಹಬ್ಬ ಆಚರಣೆ ಮಾಡಿದ್ದಾರೆ ಎಂದರು.

ಮುಂದಿನ ದಿನಗಳಲ್ಲಿ ಬಿಜೆಪಿ ಪಕ್ಷ ಕೂಡಾ ಸಮಾವೇಶ ಮಾಡಬಹುದು. ರಾಜಕೀಯವಾಗಿ ಅದು ಸಹಜ ಬೆಳವಣಿಗೆ. ಚುನಾವಣೆ ಹತ್ತಿರ ಬರುತ್ತಿದ್ದಂತೆ ಅದು ಸ್ವಾಭಾವಿಕ ಬೆಳವಣಿಗೆ ಎಂದ ಅವರು, ನಾನು ರಾಜಕೀಯವಾಗಿ ಇನ್ನೂ ಎತ್ತರಕ್ಕೆ ತಲುಪುವ ಕಾಲನ್ನು ಈಗಲೇ ಹೇಳಲು ಆಗುವುದಿಲ್ಲ. ಯಾವುದನ್ನೂ ಕೂಡ ಊಹೆ ಮಾಡುವುದಕ್ಕಾಗಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಹಣ್ಣು ವಿತರಣೆ: ರ‍್ನಾಟಕ ಡಾ.ಜಿ.ಪರಮೇಶ್ವರ್ ಯುವ ಸೈನ್ಯದ ವತಿಯಿಂದ ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರ ೭೧ನೇ ಹುಟ್ಟು ಹಬ್ಬ ವನ್ನು ಜಿಲ್ಲಾಸ್ಪತ್ರೆಯ ಒಳರೋಗಿಗಳಿಗೆ ಹಣ್ಣು ಹಂಪಲ, ಬ್ರೆಡ್ ವಿತರಿಸುವ ಮೂಲಕ ಆಚರಿಸಿ ದರು.

ರಕ್ತದಾನ ಶಿಬಿರ: ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರ ೭೧ನೇ ಹುಟ್ಟು ಹಬ್ಬದ ಅಂಗವಾಗಿ ನಗರದ ಬೀರೇಶ್ವರ ಕಲ್ಯಾಣಮಂಟಪದಲ್ಲಿ ಜಿಲ್ಲಾ ಛಲವಾದಿ ಮಹಾಸಭಾ ಮತ್ತು ಶ್ರೀಸಿದ್ದರ‍್ಥ ವೈದ್ಯಕೀಯ ಮಹಾವಿದ್ಯಾಲಯದ ಸಹಯೋಗ ದಲ್ಲಿ ಉಚಿತ ರಕ್ತದಾನ ಮತ್ತು ಸಸಿ ನೆಡುವ ಕರ‍್ಯಕ್ರಮವನ್ನು ಆಯೋಜಿಸಲಾಗಿತ್ತು. ಸುಮಾರು ೫೦ ಯೂನಿಟ್ಗೂ ಹೆಚ್ಚು ರಕ್ತವನ್ನು ಸಂಗ್ರಹಿಸಿ, ಶ್ರೀಸಿದ್ದರ‍್ಥ ರಕ್ತನಿಧಿ ಕೇಂದ್ರಕ್ಕೆ ನೀಡಲಾಯಿತು.

***

ಸಿದ್ದರಾಮೋತ್ಸವದ ಮೂಲಕ ಕಾಂಗ್ರೆಸ್ ಪಕ್ಷದ ಸಂಘಟನೆಗೆ ಅನುಕೂಲವಾಗಿದೆ. ಸುಮಾರು ೧೦ ಲಕ್ಷಕ್ಕೂ ಹೆಚ್ಚು ಜನ ದಾವಣಗೆರೆಯಲ್ಲಿ ಸೇರಿದ್ದರು. ಹಾಗಾಗಿ ನಮಗೂ ಕೂಡ ಒಂದು ರೀತಿಯ ಬಲ ಬಂದಿದೆ

ಡಾ.ಜಿ.ಪರಮೇಶ್ವರ್, ಮಾಜಿ ಡಿಸಿಎಂ.