Thursday, 14th November 2024

ಇತ್ತೀಚಿನ ದಿನಗಳಲ್ಲಿ ಶಿಕ್ಷಣ ಎಂಬುದು ಅತ್ಯಮೂಲ್ಯವಾಗಿದೆ : ಡಾ.ಕೆ. ಶಿವಚಿತ್ತಪ್ಪ

ತುಮಕೂರು: ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಆತ್ಮವಿಶ್ವಾಸ, ಕೌಶಲ್ಯ, ಶ್ರದ್ದೆ, ಸಮಯಪ್ರಜ್ಞೆ ಇತ್ಯಾದಿಗಳ ಮೂಲಕ ಯಶಸ್ಸನ್ನು ಸಾಧಿಸಬಹುದು. ಉತ್ತಮ ಫಲಿತಾಂಶ ಪಡೆದವರು ಉದ್ಯೋಗವನ್ನು ಸುಲಭವಾಗಿ ಪಡೆಯಲು ಸಾಧ್ಯವಾಗುತ್ತದೆ. ಪಠ್ಯಕ್ರಮದ ಜೊತೆಗೆ ದೈಹಿಕ ಶಿಕ್ಷಣವು ಅಷ್ಟೇ ಪ್ರಮುಖವಾಗಿರುವುದರಿಂದ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ತೊಡಗಿಸಿಕೊಂಡ ಮಾತ್ರ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ ಶಿಕ್ಷಣ ಎಂಬುದು ಮೌಲ್ಯಯುತವಾಗಿದೆ ವಿದ್ಯಾರ್ಥಿಗಳು ಶ್ರದ್ದೆಯಿಂದ ಕಲಿತರೇ ಯಶಸ್ಸು ಕಟ್ಟಿಟಬುತ್ತಿ ಎಂದು ತುಮಕೂರು ವಿಶ್ವವಿದ್ಯಾಲಯದ ರಿಜಿಸ್ಟಾçರ್‌ರವರಾದ ಡಾ.ಕೆ.ಶಿವಚಿತ್ತಪ್ಪನವರು ತಿಳಿಸಿದರು.

ನಗರದ ಶಿರಾರಸ್ತೆಯ ಶ್ರೀದೇವಿ ಪಾಲಿಟೆಕ್ನಿಕ್ ಕಾಲೇಜಿನ ವತಿಯಿಂದ ಪ್ರಥಮ ವರ್ಷದ ಡಿಪ್ಲೋಮ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭವನ್ನು ಶ್ರೀದೇವಿ ಆಸ್ಪತ್ರೆಯ ಅಡಿಟೋ ರಿಯಂ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶ್ರೀದೇವಿ ಛಾರಿಟಬಲ್ ಟ್ರಸ್ಟ್ನ ಅಧ್ಯಕ್ಷರಾದ ಡಾ.ಎಂ.ಆರ್. ಹುಲಿನಾಯ್ಕರ್‌ರವರು ಮಾತನಾಡುತ್ತಾ ಪ್ರಥಮ ವರ್ಷದ ಡಿಪ್ಲೋಮೊ ವಿದ್ಯಾರ್ಥಿಗಳಿಗೆ ಶುಭಾಶಯಗಳನ್ನು ತಿಳಿಸಿದರು. ವಿದ್ಯಾರ್ಥಿಗಳು ಕಲಿಕೆ ಹಾಗೂ ಜ್ಞಾನದಿಂದ ಹೊಂದಿದರೆ ಮಾತ್ರ ಯಾವುದೇ ಕೆಲಸವು ಸುಗಮವಾಗುತ್ತದೆ ಎಂದರು. ಶಿಕ್ಷಣ ಎಂಬುದು ಮೌಲ್ಯಯುತವಾದ ಶಿಕ್ಷಣವಾಗಿದೆ ವ್ಯಕ್ತಿಯು ವ್ಯಕ್ತಿಯಾಗಿ ಬೆಳೆಯುವುದು ಸಾಧನೆಯಲ್ಲ, ವ್ಯಕ್ತಿಯೂ ವ್ಯಕ್ತಿತ್ವವಾಗಿ ಬೆಳೆಯುವುದೇ ಸಾಧನೆಯಾಗಿದೆ. ವಿದ್ಯಾರ್ಥಿಗಳು ಬೆಳಿಗ್ಗೆಯ ಸಮಯದಲ್ಲಿ ವಿದ್ಯಾಭ್ಯಾಸ ಮಾಡಿದರೆ ಜೀವನದಲ್ಲಿ ಉತ್ತಮ ಶಿಖರಕ್ಕೆ ಏರಬಹುದು. ವಿದ್ಯಾರ್ಥಿಗಳು ಯೋಗ, ಧ್ಯಾನ, ನಡೆಸಿದರೆ ಜೀವನದಲ್ಲಿ ಲವಲವಿಕೆಯಿಂದ ಕೂಡಿರಬಹುದು ಎಂದು ತಿಳಿಸಿದರು.

ಶ್ರೀದೇವಿ ಸಂಸ್ಥೆಯ ಮಾನವ ಸಂಪನ್ಮೂಲ ವಿಭಾಗದ ನಿರ್ದೇಶಕರಾದ ಎಂ.ಎಸ್. ಪಾಟೀಲ್‌ರವರು ಮಾತನಾಡುತ್ತಾ ವಿದ್ಯಾರ್ಥಿಗಳು ಜೀವನದಲ್ಲಿ ಲಭಿಸುವ ಅವಕಾಶಗಳನ್ನು ಸದ್ಭಳಕೆ ಮಾಡಿಕೊಳ್ಳಬೇಕು ಮತ್ತು ವಿದ್ಯಾರ್ಥಿಗಳು ಆತ್ಮವಿಶ್ವಾಸ, ಕೌಶಲ್ಯ, ಶ್ರದ್ದೆ, ಸಮಯಪ್ರಜ್ಞೆ ಇತ್ಯಾದಿಗಳ ಮೂಲಕ ಯಶಸ್ಸುನ್ನು ಸಾಧಿಸಬಹುದು. ಉತ್ತಮ ಫಲಿತಾಂಶ ಪಡೆದವರು ಉದ್ಯೋಗವನ್ನು ಸುಲಭವಾಗಿ ಪಡೆಯಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಶ್ರೀದೇವಿ ಇಂಜಿನಿಯರಿ0ಗ್ ಕಾಲೇಜಿನ ಪ್ರಾಂಶುಪಾಲರಾದ ಡಾ.ನರೇಂದ್ರ ವಿಶ್ವನಾಥ್‌ರವರು ಮಾತನಾಡುತ್ತಾ ಸಮಯಕ್ಕೆ ಹೆಚ್ಚು ಪ್ರಾಮುಖ್ಯತೆ ನೀಡಿದರೆ ಉತ್ತಮ ಗುರಿಮುಟ್ಟಲು ಸಾಧ್ಯವಾಗುತ್ತದೆ. ಅಲ್ಲದೆ ಯಶಸ್ವು ಕಟ್ಟಿಟ್ಟಬುತ್ತಿ. ವಿದ್ಯಾರ್ಥಿಗಳು ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಲು ಏನನ್ನಾದರೂ ಸಾಧಿಸಬೇಕು, ವಿದ್ಯಾರ್ಥಿಗಳಿಗೆ ಛಲ ಹೊಂದಿದ್ದರೆ ಸಾಧಿಸಬಹುದು. ವಿದ್ಯಾರ್ಥಿಗಳು ಶ್ರದ್ಧೆ ಮತ್ತು ಶಿಸ್ತಿನಿಂದ ವಿದ್ಯಾಭ್ಯಾಸ ಮಾಡಿದರೆ ಯಶಸ್ಸು ಖಂಡಿತ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಶ್ರೀದೇವಿ ಎಂ.ಬಿ.ಎ. ವಿಭಾಗದ ಮುಖ್ಯಸ್ಯರಾದ ಡಾ.ಕೆ.ಎಸ್. ರಾಮಕೃಷ್ಣರವರು ಮಾತನಾಡುತ್ತಾ ವಿದ್ಯಾರ್ಥಿಗಳಿಗೆ ಪ್ರೋತ್ಸಾಹವೇ ಯಶಸ್ಸಿನ ಮೆಟ್ಟಿಲು, ಶ್ರೀದೇವಿ ಸಮೂಹ ಸಂಸ್ಥೆಗಳು ಪೂರಕವಾದ ವಾತಾವರಣವನ್ನು ನಿರ್ಮಿಸಲು ಶ್ರಮವಹಿಸುತ್ತಿವೆ ಹಾಗೂ ಹಲವಾರು ರೀತಿಯ ಸೌಲಭ್ಯಗಳನ್ನು ವಿದ್ಯಾರ್ಥಿಗಳಿಗೆ ಕಲ್ಪಿಸಲಾಗಿದೆ ಈ ಸೌಲಭ್ಯ ಗಳನ್ನು ಪ್ರತಿಯೊಬ್ಬ ವಿದ್ಯಾರ್ಥಿಯೂ ಬಳಸಿಕೊಳ್ಳಬೇಕು. ವಿದ್ಯಾರ್ಥಿಗಳಿಗೆ ಅವಕಾಶ ಎಂಬುದು ಯಾವ ರೀತಿ ಬರುತ್ತದೆ ಎಂಬುದು ಯಾರಿಗೂ ಗೊತ್ತಿರುವುದಿಲ್ಲ.

ವಿದ್ಯಾರ್ಥಿಗಳ ಜೀವನದಲ್ಲಿ ಮುಖ್ಯವಾಗಿ ಒಳ್ಳೆಯ ಜೀವನ ಶೈಲಿಯನ್ನು ಬೆಳಿಸಿಕೊಳ್ಳಬೇಕು ಹಾಗೂ ಪ್ರತಿಯೊಬ್ಬ ವಿದ್ಯಾರ್ಥಿಯೂ ಕೌಶಲ್ಯ ಹಾಗೂ ಸೌಜನ್ಯವನ್ನು ಬಳಸಿಕೊಳ್ಳಬೇಕು ಎಂದು ತಿಳಿಸಿದರು. ಶ್ರೀದೇವಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಬಿ.ಎಸ್.ಲೋಕೇಶ್‌ರವರು ಪ್ರಥಮ ವರ್ಷದ ಡಿಪ್ಲೋಮ ವಿದ್ಯಾರ್ಥಿಗಳಿಗೆ ಹೃತ್ಪೂರ್ವಕ ಸ್ವಾಗತವನ್ನು ಕೋರಿದರು.

ಇದೇ ಸಂದರ್ಭದಲ್ಲಿ ಶ್ರೀದೇವಿ ಸಂಸ್ಥೆಯ ಆಡಳಿತಾಧಿಕಾರಿ ಪ್ರೊ.ಟಿ.ವಿ.ಬ್ರಹ್ಮದೇವಯ್ಯ, ಉಪನ್ಯಾಸಕರಾದ ಪ್ರೊ.ಟಿ.ಎಂ.ಪ್ರವೀಣ್‌ಕುಮಾರ್, ಶೇಖರ್‌ರೆಡ್ಡಿ, ಹೆಚ್.ಮಧು, ದಿಲೀಪ್, ಜಯಕೀರ್ತಿ, ಸುಧಾರಾಣಿ, ಭವ್ಯ, ಯಮುನ ಹಾಗೂ ವಿವಿಧ ವಿಭಾಗದ ಮುಖ್ಯಸ್ಥರು, ಬೋಧಕ, ಬೋಧಕೇತರ ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.