ಚಿಕ್ಕಬಳ್ಳಾಪುರ: ಜಿಲ್ಲಾಡಳಿತ ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ನವೆಂಬರ್ ೧ ರಂದು ಬೆಳಿಗ್ಗೆ ೯ ಗಂಟೆಗೆ ನಗರದ ಸರ್. ಎಂ. ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಉನ್ನತ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಸಿ. ಸುಧಾಕರ್ ನೆರವೇರಿಸಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಪಿ.ಇ. ಪ್ರದೀಪ್ ಈಶ್ವರ್ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಡಾ. ಕೆ.ಸುಧಾಕರ್, ಕೋಲಾರ ಲೋಕಸಭಾ ಕ್ಷೇತ್ರದ ಸಂಸದ ಎಂ. ಮಲ್ಲೇಶ್ ಬಾಬು, ಶಾಸಕರಾದ ಎಸ್.ಎನ್. ಸುಬ್ಬಾರೆಡ್ಡಿ, ಬಿ.ಎನ್. ರವಿಕುಮಾರ್, ಕೆ.ಹೆಚ್. ಪುಟ್ಟಸ್ವಾಮಿಗೌಡ, ಚಿದಾನಂದ ಎಂ. ಗೌಡ, ಎಂ.ಎಲ್. ಅನಿಲ್ ಕುಮಾರ್, ಡಿ.ಟಿ. ಶ್ರೀನಿವಾಸ್, ಚಿಕ್ಕಬಳ್ಳಾಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಎನ್. ಕೇಶವರೆಡ್ಡಿ, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್, ನಗರಸಭೆ ಅಧ್ಯಕ್ಷ ಎ.ಗಜೇಂದ್ರ ಭಾಗವಹಿಸಲಿದ್ದಾರೆ.
ಅತಿಥಿಗಳಾಗಿ ಸರ್ಕಾರದ ಕಾರ್ಯದರ್ಶಿಗಳು ಮೂಲಭೂತ ಸೌಲಭ್ಯ ಅಭಿವೃದ್ಧಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಪಂಚಾಯಿತಿ ಆಡಳಿತಾಧಿಕಾರಿಗಳಾದ ಡಾ. ಎನ್. ಮಂಜುಳ ಭಾಗವಹಿಸಲಿದ್ದಾರೆ.
ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು, ಸರ್ಕಾರಿ ನೌಕರರ ಸಂಘ ಹಾಗೂ ಇತರೆ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಮಸ್ತ ನಾಗರೀಕ ಭಾಗವಹಿಸಲಿದ್ದಾರೆ.